ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾಣ” ಚಿತ್ರದ ಆಕ್ಷನ್ ಟ್ರೇಲರ್ ಬಿಡುಗಡೆ.

rana kannada movie teaser release druva sarja

ಸುಂದರ ಸಮಾರಂಭದಲ್ಲಿ ಅನೇಕ ಗಣ್ಯರ ಉಪಸ್ಥಿತಿ.

ನಿರ್ಮಾಪಕ ಕೆ.ಮಂಜು ಅವರ ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ “ರಾಣ” ಚಿತ್ರದ ಆಕ್ಷನ್ ಟ್ರೇಲರ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಬಿಡುಗಡೆಯಾಗಿದೆ.rana kannada movie teaser release druva sarja

ಶ್ರೇಯಸ್ ನನ್ನ ಆತ್ಮೀಯ ಗೆಳೆಯ. ಈ ಚಿತ್ರಕ್ಕಾಗಿ ಆತ ಪಟ್ಟಿರುವ ಶ್ರಮ ಟ್ರೀಲರ್ ನಲ್ಲಿ ಕಾಣುತ್ತಿದೆ‌‌. ಉತ್ತಮ ತಂತ್ರಜ್ಞರ ಹಾಗೂ ಕಲಾವಿದರ ಸಂಗಮದಲ್ಲಿ, ಕೆ.ಮಂಜು ಅವರ ಸಾರಥ್ಯದಲ್ಲಿ ಈ ಚಿತ್ರ ಚೆನ್ನಾಗಿ ಬಂದಿದೆ. ನಾನು ಮೊದಲ ದಿನ ನೋಡುತ್ತೇನೆ. ನೀವು ನೋಡಿ ಎಂದರು ಧ್ರುವ ಸರ್ಜಾ.rana kannada movie teaser release druva sarja

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಸಹ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಸಿನಿಮಾ ನನ್ನ ಉಸಿರು. ಮೂರುವರೆ ವರ್ಷಗಳ(ಪಡ್ಡೆ ಹುಲಿ) ನಂತರ ನನ್ನ ಅಭಿನಯದ “ರಾಣ” ಸಿನಿಮಾ ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ಈ ದಿನಕ್ಕಾಗಿ ನಾನು ಕಾಯುತ್ತಿದೆ ಎಂದು ಶ್ರೇಯಸ್ ಭಾವುಕರಾದರು. ಟ್ರೇಲರ್ ಬಿಡುಗಡೆ ‌ಮಾಡಿ ಪ್ರೋತ್ಸಾಹ ನೀಡಿದ ಧ್ರುವ ಸರ್ಜಾ ಅವರಿಗೆ ಹಾಗೂ ಆಗಮಿಸಿದ ಗಣ್ಯರಿಗೆ ಶ್ರೇಯಸ್ ಧನ್ಯವಾದ ತಿಳಿಸಿದರು.rana kannada movie teaser release druva sarja

ಅವಕಾಶ ನೀಡಿದ್ದ ಕೆ.ಮಂಜು ಹಾಗೂ ಪುರುಷೋತ್ತಮ್ ಅವರಿಗೆ ಧನ್ಯವಾದ. ಚಿತ್ರ ಚೆನ್ನಾಗಿ ಬಂದಿದೆ ಎಂದರೆ ಆ ಕೀರ್ತಿ ನನ್ನ ಇಡೀ ತಂಡಕ್ಕೆ ಸೇರಬೇಕು. ಚಿತ್ರ ಆರಂಭದಿಂದ ಸಪೋರ್ಟ್ ಮಾಡುತ್ತಿರುವ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ನಂದಕಿಶೋರ್.rana kannada movie teaser release druva sarja

“ಏಕ್ ಲವ್ ಯಾ” ಚಿತ್ರದ ನಂತರ “ರಾಣ” ಚಿತ್ರದಲ್ಲಿ ನಟಿಸಿದ್ದೇನೆ. ಈ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕಿ ರೀಷ್ಮಾ ನಾಣಯ್ಯ. ರಜನಿ ಭಾರದ್ವಾಜ್, ರಘು, ಮೋಹನ್ ಧನರಾಜ್ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶನದೊಂದಿಗೆ ಈ ಚಿತ್ರಕ್ಕೆ ರೀರೆಕಾರ್ಡಿಂಗ್ ಸಹ ಮಾಡಿರುವುದಾಗಿ ಚಂದನ್ ಶೆಟ್ಟಿ ತಿಳಿಸಿದರು. ಛಾಯಾಗ್ರಾಹಕ ಶೇಖರ್ ಚಂದ್ರ ಸಹ “ರಾಣ” ಕುರಿತು ಮಾತನಾಡಿದರು.rana kannada movie teaser release druva sarja

ನಿಜವಾಗಲೂ “ರಾಣ” ಚಿತ್ರ ಚೆನ್ನಾಗಿದೆ‌.‌ 11.11.22 ಒಳ್ಳೆಯ ದಿನ ಈ ಚಿತ್ರ ಬಿಡುಗಡೆಯಾಗುತ್ತಿದೆ. ನನ್ನ ಮಗ ಸೇರಿದಂತೆ ಈಗ ಬರುತ್ತಿರುವ ಯವ ನಟರಿಗೆ ಒಳ್ಳೆಯ ಭವಿಷ್ಯವಿದೆ ಎಂದರು ಕೆ.ಮಂಜು. ಕೆ.ಮಂಜು ಅವರ ಸಾರಥ್ಯದಲ್ಲಿ ಹಾಗೂ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ನೋಡಿ ಹರಿಸಿ ಎಂದು ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್ ಹೇಳಿದರು.rana kannada movie teaser release druva sarja

ನಿರ್ಮಾಪಕರಾದ ಕೆ.ಸಿ.ಎನ್ ಕುಮಾರ್, ಸೂರಪ್ಪ ಬಾಬು, ರಮೇಶ್ ರೆಡ್ಡಿ, ಚೇತನ್ ಗೌಡ, ಕಡ್ಡಿಪುಡಿ ಚಂದ್ರು, ರೈತ ಕೇಶವ್ ಮತ್ತು ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು “ರಾಣ” ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…