ಅಂತಿಮ ಹಂತದ ಚಿತ್ರೀಕರಣ ಮುಗಿಸಿದ ‘ರಂಗಸಮುದ್ರ’

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’

ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ ಹಿರಿಯ ಛಾಯಾಗ್ರಾಹಕ ಗಿರಿ ಚಿತ್ರೀಕರಿಸಿಕೊಂಡರು.rangasamudra kannada movie

ರಂಗಾಯಣ ರಘು, ಸಂಪತ್ ರಾಜ್,ಕರಾವಳಿಯ ಕೆವಿಆರ್ ಮತ್ತು ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದಾರೆ. ಚಿತ್ರದ ಪ್ರಮುಖ ದೃಶ್ಯಕ್ಕೆ ಅಂತಿಮ ಹಂತದ ಚಿತ್ರೀಕರಣ ಕಳೆದ ಅಕ್ಟೋಬರ್ ನಲ್ಲಿ ನಡೆಯ ಬೇಕಿತ್ತು. ಇದಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ವಿಧಿ ಅವರನ್ನು ಹಠಾತ್ ಸೆಳೆದೊಯ್ದಿತ್ತು. ಈ ಘಟನೆಯಿಂದ ಚಿತ್ರತಂಡ ಶಾಕ್ ಗೆ ಒಳಗಾಗಿತ್ತು. ಇದೀಗ ಇನ್ನೊಬ್ಬರು ಸ್ಟಾರ್ ನಟರು ಆ ದೃಶ್ಯದಲ್ಲಿ ನಟಿಸಿದ್ದಾರೆ.rangasamudra kannada movie

ಸಧ್ಯಕ್ಕೆ ಅವರ ವಿವರಗಳನ್ನು ಸಸ್ಪೆನ್ಸ್ ಆಗಿ ಇಡಲಾಗಿದೆ. ಈ ವಿವರಗಳನ್ನು ಚಿತ್ರತಂಡ ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಿದೆ. ಚಿತ್ರಕ್ಕೆ ದೇಸೀ ಮೋಹನ್ ಸಂಗೀತ ನೀಡಿದ್ದಾರೆ. ಸಂಕಲನ ಶ್ರೀಕಾಂತ್, ವಾಗೀಶ್ ಚನ್ನಗಿರಿ ಗೀತ ಸಾಹಿತ್ಯ ನೀಡಿದ್ದಾರೆ. ಚಿತ್ರದ ಹಾಡುಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್, ಕೀರವಾಣಿ, ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಶೀಘ್ರದಲ್ಲಿಯೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಕೆ ಆರ್ ಹೊಯ್ಸಳ ಅವರು ತಿಳಿಸಿದ್ದಾರೆ.rangasamudra kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…