ಜನರ ಮನ ಗೆಲ್ಲುತ್ತಿದೆ “ರವಿಕೆ ಪ್ರಸಂಗ”

ಹೆಣ್ಣುಮಕ್ಕಳಿಗೆ ಸೀರೆಯಷ್ಟೇ ರವಿಕೆಯೂ ಅಚ್ಚುಮೆಚ್ಚು. ಅಂತಹ “ರವಿಕೆ” ಯ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ “ರವಿಕೆ ಪ್ರಸಂಗ” ಚಿತ್ರ ಕಳೆದವಾರ ಬಿಡುಗಡೆಯಾಗಿ ಜನರ ಮನ ಗೆಲುತ್ತಿದೆ. “ರವಿಕೆ” ಯ ಕುರಿತಾದ ಸಿನಿಮಾ ಆಗಿರುವುದರಿಂದ ಚಿತ್ರತಂಡ ವಿಶೇಷ ಡಿಸೈನ್ ರವಿಕೆ ಹೊಲಿಯುವವರಿಗಾಗಿ ಸ್ಪರ್ಧೆ ಆಯೋಜಿಸಿತ್ತು. ‌ಆ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಹೊಲಿಗೆ ಯಂತ್ರ, ನಗದು ಸೇರಿದಂತೆ ಅನೇಕ ಬಹುಮಾನಗಳನ್ನು ನೀಡಲಾಯಿತು. ನಿರ್ದೇಶಕ ಸಂತೋಷ್ ಕೊಡೆಂಕೆರಿ, ಕಥೆ ಬರೆದಿರುವ ಪಾವನ ಸಂತೋಷ್, ನಟಿ ಗೀತಾಭಾರತಿ ಭಟ್, ಉದ್ಯಮಿ ಮತ್ತು ರಾಧಾಕೃಷ್ಣ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಗಿರೀಶ್, ಶಿವರುದ್ರಯ್ಯ, ಕಂದಯ್ಯ ಶೆಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಕೆಲವು ವಿಷಯಗಳನ್ನು ಮಾಧ್ಯಮದ ಮುಂದೆ ಹಂಚಿಕೊಂಡರು.ravike parsanga running successful

ಫೆಬ್ರವರಿ 16 ರಂದು ನಮ್ಮ ಚಿತ್ರ ಬಿಡುಗಡೆಯಾಯಿತು. ಚಿತ್ರ ನೋಡಿದವರು ಹಾಗೂ ಮಾಧ್ಯಮದವರು ನಮ್ಮ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಆದರೆ, ಕೆಲವರು ನಮ್ಮ ಚಿತ್ರವನ್ನು ಈ ವಾರದಲ್ಲಿ ನೋಡುತ್ತೇವೆ. ಎನ್ನುತ್ತಿದ್ದಾರೆ‌. ಹಾಗಾಗಿ ಚಿತ್ರವನ್ನು ಚಿತ್ರಮಂದಿರಗಳಲ್ಲಿ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಅದರಿಂದ ಚಿತ್ರಮಂದಿರಕ್ಕೆ ಹೆಚ್ಚು ಜನ ಬರಬೇಕು. ಒಳ್ಳೆಯ ಕಂಟೆಂಟ್ ವುಳ್ಳ ಚಿತ್ರ ಮಾಡಿದ್ದೇವೆ. ದಯವಿಟ್ಟು ಎಲ್ಲರು ಚಿತ್ರ ನೋಡಿ ಪ್ರೋತ್ಸಾಹಿಸಿ. ಈ ಮಧ್ಯೆ ಲಕ್ಷಾಂತರ ರೂಪಾಯಿ ಪಡೆದು ಚಿತ್ರಮಂದಿರವನ್ನು ಜನರಿಂದ ಭರ್ತಿ ಮಾಡಲು ಕೆಲವು ಏಜನ್ಸಿಗಳಿದೆ. ಆದರೆ ಈ ಏಜೆನ್ಸಿಗಳಿಗೆ ಯಾವುದೇ ರೀತಿಯ ಮಾನದಂಡಗಳಿರುವುದಿಲ್ಲ.ravike parsanga running successful

ಆ ರೀತಿ ಜನರನ್ನು ತುಂಬಿಸುವುದರಿಂದ ಏನು ಪ್ರಯೋಜನವಾಗುವುದಿಲ್ಲ. ಅಲ್ಲಿ ಬರುವವರು ಯಾರು ಸಿನಿಮಾ ನೋಡುವುದು ಇಲ್ಲ. ಅದರ‌ ಬಗ್ಗೆ ಪ್ರಚಾರ ಮಾಡುವುದೂ ಇಲ್ಲ. ಈ ರೀತಿ ಜನ ತುಂಬಿಸುವ ಪ್ರಕ್ರಿಯೆಯನ್ನು ನಿಲ್ಲಿಸಲು ಸಂಬಂಧಪಟ್ಟವರು ಕ್ರಮ ತೆಗೆದುಕೊಳ್ಳಲು ಮನವಿ ಮಾಡಿಕೊಳ್ಳುತ್ತೇವೆ‌. ನಮ್ಮ ಚಿತ್ರದಲ್ಲಿ ಖ್ಯಾತ ನಟಿ ಸುಮನ್ ರಂಗನಾಥ್ ಹಾಗೂ ದಕ್ಷಿಣ ಕನ್ನಡದ ಪ್ರತಿಭೆ ರಾಕೇಶ್ ಮಯ್ಯ ನಟಿಸಿದ್ದಾರೆ. ಅವರಿಂದ ಚಿತ್ರ ಸಂಪೂರ್ಣವಾಗಲು ಯಾವುದೇ ತೊಂದರೆಯಾಗಿಲ್ಲ. ಆದರೆ, ಅವರಿಬ್ಬರು ನಮ್ಮ ಚಿತ್ರದ ಟೀಸರ್ ರಿಲೀಸ್ ಗಾಗಲಿ, ಟ್ರೇಲರ್ ರಿಲೀಸ್ ಗಾಗಲಿ, ಪ್ರೀ ರಿಲೀಸ್ ಗಾಗಲಿ ಯಾವುದೇ ಇವೆಂಟ್ ಗಳಿಗೆ ಬರಲಿಲ್ಲ. ಅವರು ಪ್ರಚಾರಕ್ಕೆ ಬಂದಿದ್ದರೆ, ಚಿತ್ರ ಇನ್ನೂ ಹೆಚ್ಚು ಜನರಿಗೆ ತಲುಪುತ್ತಿತ್ತು ಎಂಬುದು ನನ್ನ ಅಭಿಪ್ರಾಯ. ravike parsanga running successfulಈ ವಿಷಯದ ಬಗ್ಗೆ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕನೂ ಆಗಿರುವ ನನಗೆ ತುಂಬಾ ಬೇಸರವಾಗಿದೆ. ಒಂದು ಚಿತ್ರವನ್ನು ಜನರಿಗೆ ತಲುಪಿಸಲು ಇಡೀ ಚಿತ್ರತಂಡ ನಿರ್ಮಾಪಕರ ಜೊತೆ ನಿಲ್ಲಬೇಕೆಂದು ಕೇಳಿಕೊಳ್ಳುತ್ತೇನೆ ಎಂದರು ನಿರ್ದೇಶಕ ಸಂತೋಷ್ ಕೊಡೆಂಕೆರಿ. ಕಥೆ ಬರೆದಿರುವ ಪಾವನ ಸಂತೋಷ್ ಅವರು ಇದೇ ಅಭಿಪ್ರಾಯವನ್ನು ತಿಳಿಸಿದರು.ravike parsanga running successful

ನಮ್ಮ ಚಿತ್ರವನ್ನು ಜನ ಮೆಚ್ಚಿಕೊಂಡಿದ್ದಾರೆ ಎಂದು ಮಾತನಾಡಿದ ನಟಿ ಗೀತಾಭಾರತಿ ಭಟ್, ಆದರೆ ಕೆಲವರು ಓಟಿಟಿಯಲ್ಲಿ ಯಾವಾಗ ಬರುತ್ತದೆ? ಎಂದು ಕೇಳುತ್ತಾರೆ. ಆದರೆ ದಯವಿಟ್ಟು ಚಿತ್ರಮಂದಿರಗಳಲ್ಲೇ ಚಿತ್ರವನ್ನು ನೋಡಿ ಎಂದರು.

ದೃಷ್ಟಿ ಮೀಡಿಯಾ & ಪ್ರೊಡಕ್ಷನ್ ವತಿಯಿಂದ “ರವಿಕೆ ಪ್ರಸಂಗ” ಚಿತ್ರ ನಿರ್ಮಾಣವಾಗಿದೆ.ravike parsanga running successful

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…