ಸೆನ್ಸಾರ್ ಪಾಸಾದ ರವಿಕೆ ಪ್ರಸಂಗ,ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

RAVIKE PRASANGA

ಮಂಗಳೂರು: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ. Ravike Prasanga that passed the censors

RAVIKE PRASANGA

ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.
ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’.RAVIKE PRASANGA ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ಪ್ರಮುಖವಾಗಿ ಇಟ್ಟುಕೊಂಡು ಕೌಟುಂಬಿಕ ಕಥಾ ಹಂದರದಿಂದ ಹಾಸ್ಯಭರಿತ ಉತ್ತಮ ಸಂದೇಶವನ್ನು ಸಮಾಜಕ್ಕೆ ತಿಳಿಸುವ ಪ್ರಯತನವನ್ನು ನಿರ್ದೇಶಕರು ರವಿಕೆಪ್ರಸಂಗ ಸಿನಿಮಾದಲ್ಲಿ ಮಾಡಿದ್ದಾರೆ.RAVIKE PRASANGA

‘ದೃಷ್ಟಿ ಮೀಡಿಯಾ’ ಪ್ರೊಡಕ್ಷನ್‌ನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ರವಿಕೆ ಸಾಂಗ್ ಅನ್ನು ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಮನಸಲಿ ಜೋರು ಕಲರವ ಹಾಡನ್ನು ಮಾನಸ ಹೊಳ್ಳ, ಮತ್ತು ಹಸಿಮನಸಲಿ ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಗೀತಾ ಭಾರತಿ ಭಟ್ ಉತ್ತಮ ಅಭಿನಯದೊಂದಿಗೆ ಹಾಡಿಗೆ ಸಖತ್ ಸ್ಟೆಪ್ ಹಾಕಿ ಡ್ಯಾನ್ಸ್ ಮಾಡಿದ್ದಾರೆ.RAVIKE PRASANGA

ರವಿಕೆ ಪ್ರಸಂಗ ಸಿನಿಮಾವನ್ನು ಮಾಷ್೯ ಡಿಸ್ಟ್ರಿಬ್ಯುಟರ್ಸ್ ಸಂಸ್ಥೆ ವಿಶಾಲ ಕರ್ನಾಟಕದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ ವಿದೇಶದಲ್ಲೂ ಸಿನಿಮಾ ಬಿಡುಗಡೆಗೊಳ್ಳಲಿದೆ. ಕುಟುಂಬ ಸಮೇತ ನೋಡಬೇಕಾದ ಸಿನಿಮಾ ಇದಾಗಿದೆ. ಪ್ರತಿಯೊಬ್ಬ ಮಹಿಳೆಯರ ಜೀವನದಲ್ಲಿ ನಡೆಯುವಂತಹ ಕತೆಯನ್ನು ಈ ಸಿನಿಮಾ ಹೊಂದಿದೆ.RAVIKE PRASANGA

ಈ ಚಿತ್ರಕ್ಕೆ ಪಾವನಾ ಸಂತೋಷ್ ಕಥೆ ಸಂಭಾಷಣೆ ಬರೆದಿದ್ದಾರೆ. ಸಾಮಾನ್ಯವಾಗಿ ಸೀರೆ ಅಂದರೆ ಹೆಣ್ಣು ಮಕ್ಕಳಿಗೆ ಬಹಳ ಇಷ್ಟ ಅದರಲ್ಲೂ ಸೀರೆ ಎಷ್ಟು ಚೆನ್ನಾಗಿರುತ್ತೋ, ಅಷ್ಟೇ
ಸುಂದರವಾಗಿ ಬ್ಲೌಸ್ ಇರಬೇಕು. ಸಾವಿರಾರೂ ಖರ್ಚು ಮಾಡಿ ರವಿಕೆ ಹೊಲಿಸುತ್ತಾರೆ. ಒಂದು ಸಮಾರಂಭಕ್ಕೆ ಇಂಥದ್ದೇ ಸೀರೆ ಹೀಗೆ ಇರಬೇಕು ಅಂತ ಆಸೆಯಿಂದ ಒಳ್ಳೆಯ ಟೇಲರ್‌ ಹತ್ತಿರ ರವಿಕೆ ಹೊಲಿಸುತ್ತಾರೆ. ಆದರೆ, ಪ್ರತಿ ಬಾರಿ ಆ ರವಿಕೆ ಪರ್ಫೆಕ್ಟ್ ಆಗಿ ಇರಲ್ಲ.RAVIKE PRASANGA

ಏನೋ ಒಂದು ಸರಿಯಾಗಿರಲ್ಲ. ಇಂಥದ್ದೇ ಸರಿಹೊಂದದ ರವಿಕೆಯ ರಗಳೆಯ ಕಾಮಿಡಿ ಕಥೆ ‘ರವಿಕೆ ಪ್ರಸಂಗ’. ಚಿತ್ರದಲ್ಲಿ ಒಂದು ರವಿಕೆಯಿಂದ ನಾಯಕಿಯ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಎನ್ನುವುದನ್ನು ಹೇಳಲಾಗಿದ್ದು, ಚಿತ್ರದಲ್ಲಿ ಮಂಗಳೂರು ಕನ್ನಡ ಶೈಲಿ ಬಳಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತಲು ಚಿತ್ರೀಕರಣ ನಡೆದಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಬಹಳ ಕುತೂಹಲವಿದೆ. ಫೆಬ್ರವರಿ 16 ರಂದು ರವಿಕೆಪ್ರಸಂಗ ರಾಜ್ಯಾದ್ಯಂತ ತೆರೆಕಾಣಲಿದೆ.RAVIKE PRASANGA

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…