‘ರೇಮೊ’ ಸೂಪರ್ ಹಿಟ್ ಆಗಲಿ’: ಟ್ರೇಲರ್ ರಿಲೀಸ್ ಮಾಡಿ ಹಾರೈಸಿದ ಶಿವಣ್ಣ.

raymo kannada movie trailer released shivanna

ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.raymo kannada movie trailer released shivanna

‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ ಕೂಡ ಅದೇ ರೀತಿ ಸೂಪರ್ ಹಿಟ್ ಆಗಲಿ ಅಂತ ದೇವರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಇಶಾನ್ ಹಾಗೂ ಆಶಿಕಾ ಮುದ್ದಾಗಿ ಕಾಣುತ್ತಿದ್ದಾರೆ. ನಿರ್ದೇಶಕ ಪವನ್ ಒಡೆಯರ್ ಬಗ್ಗೆ ಹೇಳುವಂತೆಯೇ ಇಲ್ಲ. ಸಿ.ಆರ್. ಮನೋಹರ್ ಅವರಂತಹ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬೇಕು’ ಎಂದು ಶಿವರಾಜಕುಮಾರ್ ಹೇಳಿದರು.raymo kannada movie trailer released shivanna

‘ರೇಮೊ’ ಚಿತ್ರದ ಕೆಲಸ ಶುರುವಾಗಿ 3 ವರ್ಷ ಆಯಿತು. ಈಗ ಬಿಡುಗಡೆ ಹಂತಕ್ಕೆ ಬಂದಿದೆ. ನನ್ನನ್ನು ಚಿತ್ರರಂಗಕ್ಕೆ ಬರಲು ಹೇಳಿದ್ದು ಶಿವಣ್ಣ. ಇವತ್ತು ಅವರಿಂದಲೇ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಖುಷಿಯಾಗಿದೆ. ನವೆಂಬರ್ 25 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಅಂದೇ ನಮ್ಮ ಚಿತ್ರವನ್ನು ನೋಡುವುದಾಗಿ ಶಿವಣ್ಣ ಹೇಳಿದ್ದಾರೆ. ಅವರೇ ನನಗೆ ಸ್ಫೂರ್ತಿ. ನಾನು ಎಷ್ಟೇ ಸಿನಿಮಾ ಮಾಡಬಹುದು. ಆದರೆ ‘ರೇಮೊ’ ಚಿತ್ರ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತದೆ ಎನ್ನುತ್ತಾರೆ ನಾಯಕ ಇಶಾನ್.raymo kannada movie trailer released shivanna

ನಟಿ ಆಶಿಕಾ ರಂಗನಾಥ್ ಅವರಿಗೂ ‘ರೇಮೊ’ ಚಿತ್ರ ವಿಶೇಷ ಅಂತೆ. ‘ಇಷ್ಟು ದಿನ ನನ್ನನ್ನು ಕ್ಯೂಟ್ ಹುಡುಗಿಯ ಪಾತ್ರದಲ್ಲಿ ನೋಡಿದ್ದೀರಿ. ಆದರೆ ಈ ಸಿನಿಮಾದಲ್ಲಿನ ಪಾತ್ರ ಭಿನ್ನವಾಗಿದೆ. ಈವರೆಗೆ ನಾನು ಮಾಡಿದ ಪಾತ್ರಗಳಲ್ಲಿ ಇದೇ ಬೆಸ್ಟ್. ಹೀರೋಗೆ ಸಮನಾಗಿ ಇರುವಂತಹ ಪಾತ್ರ ನನಗೆ ಸಿಕ್ಕಿದೆ. ಅದಕ್ಕೆ ನನ್ನನ್ನು ಆಯ್ಕೆ ಮಾಡಿದ ಪವನ್ ಒಡೆಯರ್ ಅವರಿಗೆ ಧನ್ಯವಾದಗಳು’ ಎನ್ನುತ್ತಾರೆ ಆಶಿಕಾ ರಂಗನಾಥ್.raymo kannada movie trailer released shivanna

ಪ್ರೀತಿಯಲ್ಲಿ ಹಲವು ವಿಧಗಳಿದೆ. ಅದರಲ್ಲಿ ನಾನು ಮ್ಯೂಸಿಕಲ್ ಲವ್ ಸ್ಟೋರಿ ಆಯ್ಕೆ ಮಾಡಿಕೊಂಡಿದ್ದೀನಿ. ಈ ಚಿತ್ರದಲ್ಲಿ ಎಮೋಷನ್ ಸಹ ಇದೆ. ವೈದಿ ಅವರ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರವನ್ನು ಮತ್ತಷ್ಟು ಸುಂದರವಾಗಿಸಿದೆ. ಇಶಾನ್ ಹಾಗೂ ಆಶಿಕಾ ರಂಗನಾಥ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶಿವರಾಜಕುಮಾರ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ಪವನ್ ಒಡೆಯರ್.

ನಿರ್ಮಾಪಕ ಸಿ.ಆರ್.ಮನೋಹರ್ ಶಿವರಾಜಕುಮಾರ್ ಅವರನ್ನು ಸನ್ಮಾನಿಸಿದರು. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕರಿಸಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು. ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪುರೋಹಿತ್ ಅವರು ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ, ವೈದಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪಿ. ಗುಣಶೇಖರನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…