ರಿಷಿ ‘ರಾಮನ ಅವತಾರ’ ದರ್ಶನಕ್ಕೆ ಮುಹೂರ್ತ ಫಿಕ್ಸ್

Rishi 'Ramana avatar' release may 10th


ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ ‘ರಾಮನ ಅವತಾರದಲ್ಲಿ ದರ್ಶನ ಕೊಡೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ.Rishi 'Ramana avatar' release may 10th

ರಿಷಿ ನಟನೆಯ ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ಕ್ಕೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ. ಏಪ್ರಿಲ್ ತಿಂಗಳಲ್ಲಿ ಸಿನಿಮಾವನ್ನು ಬೆಳ್ಳಿಭೂಮಿ ಅಖಾಡಕ್ಕೆ ಇಳಿಸೋದಿಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿತ್ತು. ಆದ್ರೆ ಲೋಕಸಭಾ ಚುನಾವಣೆ ಹಿನ್ನೆಲೆ ಚಿತ್ರ ಬಿಡುಗಡೆ ತಡವಾಗಿದೆ. ಎಲೆಕ್ಷನ್ ಮುಗಿದ ತಕ್ಷಣ ಮೇಬಿ ಅಲ್ಲ ಪಕ್ಕ ಮೇಗೆ ಬರ್ತಿವೆ ಅಂತಾ ರಿಷಿ ಘೋಷಿಸಿದ್ದಾರೆ.Rishi 'Ramana avatar' release may 10th

ರಿಷಿ ಸ್ಪೆಷಲ್ ವಿಡಿಯೋ ಮೂಲಕ ರಾಮನ ಅವತಾರ ಸಿನಿಮಾ ಬಿಡುಗಡೆ ದಿನಾಂಕವನ್ನು ರಿವೀಲ್ ಮಾಡಿದ್ದಾರೆ. ಮೇಬಿ ಅಲ್ಲ ಪಕ್ಕ ಮೇ 10ಕ್ಕೆ ಬರ್ತಿವೆ. ಎಲೆಕ್ಷನ್ ರಿಸಲ್ಟ್ ಗೂ ಮೊದ್ಲೇ ನಮ್ಮ ಸಿನಿಮಾ ರಿಸಲ್ಟ್ ಬರಲಿದೆ ಎಂದಿದ್ದಾರೆ. ಪ್ರಮೋಷನ್ ಅಖಾಡಕ್ಕೆ ಇಳಿಯೋದಿಕ್ಕೆ ಇಡೀ ತಂಡ ಸಿದ್ಧವಾಗಿದ್ದು, ರಾಮರಾಜ್ಯ ಕಟ್ಟೋದಿಕ್ಕೆ ರಾಮನ ಅವತಾರ ಬಳಗ ಸಜ್ಜಾಗಿ ನಿಂತಿದೆ.Rishi 'Ramana avatar' release may 10th

‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ಸಿನಿಮಾ ನಿರೀಕ್ಷೆ ಹೆಚ್ಚಿಸಿದೆ.Rishi 'Ramana avatar' release may 10th

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…