ಕುನಾಲ್ ಗಾಂಜಾವಾಲ ಹಾಡಿರುವ “ರಿಚ್ಚಿ” ಚಿತ್ರದ ಹಾಡು ಬಿಡುಗಡೆ .

"Ritchie" song released by Kunal Ganjawala

ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ “ರಿಚ್ಚಿ” ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ
“ಕಳೆದು ಹೋಗಿರುವೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು."Ritchie" song released by Kunal Ganjawala

ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ”ರಿಚ್ಚಿ” ಅವರಿಗಾಗಿ ಬಂದಿದ್ದೇನೆ. ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ಸಾಂಗ್ ಇಂದು ಮೆಲೋಡಿ ಸಾಂಗ್ ಬಿಡುಗಡೆಯಾಗಿದೆ. ಅಗಸ್ತ್ಯ ಅವರ ಸಂಗೀತ ಸಂಯೋಜನೆ ಚೆನ್ನಾಗಿದೆ. ಚಿನ್ನಿಪ್ರಕಾಶ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಗೌಸ್ ಫಿರ್ ಬರೆದಿದ್ದಾರೆ. “ರಿಚ್ಚಿ” ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಕುನಾಲ್ ಗಾಂಜಾವಾಲ ಹಾರೈಸಿದರು."Ritchie" song released by Kunal Ganjawala

2005 ನೇ ಇಸವಿಯಲ್ಲಿ “ಆಕಾಶ್” ಚಿತ್ರದ ಹಾಡು ಹಾಡಲು ಬಂದಾಗ ಡಾ||ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಕೈಗೊಂದು ಮುತ್ತು ಕೊಟ್ಟಿದ್ದರು. ಅದು ನನ್ನ ಜೀವನದಲ್ಲಿ ಮರೆಯಲಾಗದ ಘಟನೆ ಎಂದ ಕುನಾಲ್ ಗಾಂಜಾವಾಲ, ಪುನೀತ್ ರಾಜಕುಮಾರ್ ಅವರೊಟ್ಟಿಗಿನ ಒಡನಾಟವನ್ನು ನೆನಪಿಸಿಕೊಂಡರು."Ritchie" song released by Kunal Ganjawala "Ritchie" song released by Kunal Ganjawala

“ರಿಚ್ಚಿ” ಒಂದು ಪ್ರೇಮಕಥೆಯ ಚಿತ್ರ. ನಾನು ಚಿಕ್ಕಂದಿನಿಂದಲೇ ಕುನಾಲ್ ಗಾಂಜಾವಾಲ ಅವರ ಅಭಿಮಾನಿ. ನನ್ನ ಚಿತ್ರಕ್ಕೆ ಅವರು ಹಾಡಬೇಕೆಂಬುದು ನನ್ನ ಆಸೆ. ಅದು ಈಡೇರಿದೆ. ಎರಡು ಹಾಡುಗಳನ್ನು ಅವರು ಹಾಡಿದ್ದಾರೆ. ಒಂದು ಈಗ ಬಿಡುಗಡೆಯಾಗಿದೆ. ಕನ್ನಡ ಹಾಗೂ ಹಿಂದಿಯಲ್ಲಿ ಈ ಚಿತ್ರ ಬರಲಿದೆ. ಆಗಸ್ಟ್ ನಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಾಯಕ, ನಿರ್ಮಾಪಕ ಹಾಗೂ ನಿರ್ದೇಶಕ “ರಿಚ್ಚಿ” ಹೇಳಿದರು."Ritchie" song released by Kunal Ganjawala

ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ಸಹ ನಿರ್ಮಾಪಕ ರಾಕೇಶ್ ರಾವ್, ಪ್ರಕೃತಿ ಬನವಾಸಿ, ನಿರ್ಮಾಪಕರಾದ ಅಣಜಿ ನಾಗರಾಜ್, ವೆಂಕಟೇಶ್ ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…