ಕೋಮಲ್ ಹುಟ್ಟುಹಬ್ಬಕ್ಕೆ ‘ರೋಲೆಕ್ಸ್’ ಪೋಸ್ಟರ್ ಉಡುಗೊರೆ..ಸ್ಟೈಲೀಶ್ ಲುಕ್ ನಲ್ಲಿ ಮಿಂಚಿದ ಸೆನ್ಸೇಷನಲ್ ಸ್ಟಾರ್..

'Rolex' poster gift for Komal's birthday

ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೋಮಲ್ ಜನುಮದಿನ ಉಡುಗೊರೆಯಾಗಿ ‘ರೋಲೆಕ್ಸ್’ ಸಿನಿಮಾದ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸೂಟು ಬೂಟೂ ತೊಟ್ಟು ಸ್ಟೈಲೀಶ್ ಲುಕ್ ನಲ್ಲಿ ಸೆನ್ಸೇಷನಲ್ ಸ್ಟಾರ್ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.'Rolex' poster gift for Komal's birthday

ಟೈಟಲ್ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿರುವ ‘ರೋಲೆಕ್ಸ್’ಗೆ ಶ್ರೀನಿವಾಸ್ ಮಂಡ್ಯ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ‘ಬಿಲ್ ಗೇಟ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಈ ಬಾರಿ ಇಂಟ್ರಸ್ಟಿಂಗ್ ಕಥೆ ಹೊತ್ತು ಬಂದಿದ್ದಾರೆ. ಕೋಮಲ್ ಗೆ ಜೋಡಿಯಾಗಿ ಪಂಚತಂತ್ರ ಬ್ಯೂಟಿ ಸೋನಲ್ ಮೊಂಟೆರೋ ನಟಿಸುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ಶೋಭರಾಜ್, ಅರವಿಂದ್, ಅಪೂರ್ವ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.'Rolex' poster gift for Komal's birthday

ಫೀನಿಕ್ಸ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಕೇಶ್ ಸಿ ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ. ಈಗಾಗಲೇ ಶೇಖಡ 50ರಷ್ಟು ರೋಲೆಕ್ಸ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಉಳಿದ ಭಾಗದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಆದಷ್ಟು ಬೇಗ ಶೂಟಿಂಗ್ ಮುಗಿಸಿ ಸೆಪ್ಟಂಬರ್ ವೇಳೆಗೆ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.'Rolex' poster gift for Komal's birthday

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…