ಈ ವಾರದಿಂದ ಎಣಿಸಲು ಬರುತ್ತಿದೆ ‘ರೂಪಾಯಿ’!

Rupai' is coming to be counted from this week!

ವಿಜಯ್​ ಜಗದಾಲ್​ ಮೊದಲ ಬಾರಿಗೆ ನಟಿಸಿ-ನಿರ್ದೇಶಿಸಿರುವ ‘ರೂಪಾಯಿ’ ಚಿತ್ರವು ಫೆ.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಳೆದ ವಾರವಷ್ಟೇ ಚಿತ್ರದ ಟ್ರೈಲರ್​ ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆಯುತ್ತಿದೆ, ಈಗ ‘ಉಸಿರಾಟ’ ಎಂಬ ಹೊಸ ಹಾಡು ಬಿಡುಗಡೆಯಾಗಿದ್ದು. ಈ ಹಾಡಿಗೂ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.Rupai' is coming to be counted from this week!

ಯೂಟ್ಯೂಬ್​ನ ಆನಂದ್​ ಆಡಿಯೋ ಚಾನಲ್​ನಲ್ಲಿ ಬಿಡುಗಡೆಯಾಗಿರುವ ‘ಉಸಿರಾಟ’ ಹಾಡನ್ನು ವ್ಯಾಸರಾಜ ಸೋಸಲೆ ಹಾಡಿದ್ದು, ಆನಂದ್​ ರಾಜಾವಿಕ್ರಮ್​ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ನಟ-ನಿರ್ದೇಶಕ ವಿಜಯ್​ ಜಗದಾಲ್​ ಅವರೇ ಈ ಚಿತ್ರಕ್ಕೆ ಸಾಹಿತ್ಯ ರಚಿಸಿದ್ದಾರೆ.Rupai' is coming to be counted from this week!

‘ರೂಪಾಯಿ’ ಒಂದು ಪಕ್ಕಾ ಮನರಂಜನಾತ್ಮಕ ಚಿತ್ರವಾಗಿದ್ದು, ಒಂದು ಕಮರ್ಷಿಯಲ್​ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳೂ ಈ ಚಿತ್ರದಲ್ಲಿದೆಯಂತೆ. ‘ಪ್ರೇಕ್ಷಕರಿಗೆ ಎಲ್ಲೂ ಬೋರ್ ಆಗದ ಹಾಗೆ ಚಿತ್ರಕಥೆ ಮಾಡಿದ್ದು, ಹಣದ ಮೌಲ್ಯದ ಕುರಿತು ನಗುವಿನ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇವೆ. ಇಲ್ಲಿ ನಗಿಸುವುದಕ್ಕೆ ಯಾವುದೇ ಪ್ರತ್ಯೇಕ ಪಾತ್ರಗಳಿಲ್ಲ.Rupai' is coming to be counted from this week!

ಸನ್ನಿವೇಶಗಳೇ ನಗು ಉಕ್ಕಿಸುವಂತಿದೆ’ ಎನ್ನುತ್ತಾರೆ ವಿಜಯ್​ ಜಗದಾಲ್​. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಅವರೇ ರಚಿಸಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ವಿಜಯ್​ ಜಗದಾಲ್​, ‘ಇದೊಂದು ರೆಗ್ಯುಲರ್​ ಚಿತ್ರ ಅಲ್ಲ. ಐದು ಜನರ ಸುತ್ತ ಸುತ್ತುವ ಕಥೆ ಇಲ್ಲಿದೆ. ಅವರಿಗೆ ಆಕಸ್ಮಿಕವಾಗಿ ಒಂದಿಷ್ಟು ಹಣ ಸಿಗುತ್ತದೆ. ಒಂದ ದೊಡ್ಡ ಹಗರಣಕ್ಕೆ ಸಂಬಂಧಿಸಿದ ಹಣ, ಮಧ್ಯಮ ವರ್ಗದ ಜನರಿಗೆ ಸಿಕ್ಕಾಗ ಅವರ ಜೀವನದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದರ ಕುರಿತು ಹೇಳುವುದಕ್ಕೆ ಹೊರಟಿದ್ದೇವೆ. ದುಡ್ಡಿಗಿಂತ ಸಂಬಂಧಗಳ ಕುರಿತಾದ ಚಿತ್ರ ಇದು. ಆ ದುಡ್ಡು ಸಂಬಂಧಗಳನ್ನು ಹೇಗೆ ಹಾಳು ಮಾಡುತ್ತದೆ ಎಂದು ಹೇಳುವ ಚಿತ್ರ ಇದು’ ಎಂದು ಹೇಳುತ್ತಾರೆ.Rupai' is coming to be counted from this week!

ವಿವಿಧ್​ ಸಿನಿಮಾಸ್​ ಬ್ಯಾನರ್​ನಡಿ ಮಂಜುನಾಥ್​ ಎಂ, ಹರೀಶ್​ ಬಿ.ಕೆ ಮತ್ತು ವಿನೋದ ಎನ್​ ಜಂಟಿಯಾನಿ ನಿರ್ಮಿಸಿರುವ ಈ ಚಿತ್ರದಲ್ಲಿ ವಿಜಯ್ ಜಗದಾಲ್​ ಜೊತೆಗೆ ಕೃಷಿ ತಾಪಂಡ, ಯಶ್ವಿಕ್​, ‘ಮೈತ್ರಿ’ ಜಗದೀಶ್​, ಶಂಕರ್​ ಮೂರ್ತಿ, ರಾಮ್​ ಚಂದನ್​, ಚಂದನಾ ರಾಘವೇಂದ್ರ, ಪ್ರಮೋದ್​ ಶೆಟ್ಟಿ, ರಾಕ್​ಲೈನ್​ ಸುಧಾಕರ್​, ಮೋಹನ್​ ಜನೇಜ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಆನಂದ್ ರಾಜವಿಕ್ರಮ್​ ಅವರ ಸಂಗೀತ, ಆರ್​.ಡಿ. ನಾಗಾರ್ಜುನ್​ ಅವರ ಛಾಯಾಗ್ರಹಣ ಮತ್ತು ಶಿವರಾಜ್​ ಮೇಹು ಅವರ ಸಂಕಲನವಿದೆ.Rupai' is coming to be counted from this week!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…