ಮಜಾ ಕೊಡುವ ರೂಪಾಯಿ!

rupayi kannada movie review

ದುಡ್ಡೊಂದಿದ್ರೆ ಸಾಕು. ಎಲ್ಲವನ್ನೂ ಪಡೆದುಕೊಳ್ಳಬಹುದು. ಎನ್ನುವ ಮನಸ್ಥಿತಿಯ ಹುಡುಗರು. ಹಣ ಎಲ್ಲರ ಅವಶ್ಯಕತೆ, ಅನಿವಾರ್ಯತೆ ನಿಜ. ಹಾಗಂತ ಅದನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಿಬಿಡಲು ಸಾಧ್ಯವಿಲ್ಲವಲ್ಲಾ? ಒಳ್ಳೇ ಮಾರ್ಗಗಳನ್ನು ಕಂಡು ಹಿಡಿದುಕೊಂಡು ಶ್ರಮವಹಿಸಿ ಸಂಪಾದಿಸಬೇಕು. ಹಣ ಮಾಡುವ ಧಾವಂತಕ್ಕೆ ಬಿದ್ದು ಯಾವ್ಯಾವುದೋ ದಾರಿಯಲ್ಲಿ ದುಡಿದರೆ ಅದೂ ಒಂದು ಬದುಕು ಅನ್ನಿಸಿಕೊಳ್ಳುತ್ತಾ? ದುಡ್ಡಿನ ಕುರಿತು ನಾನಾ ಮಜಲುಗಳನ್ನು ತೆರೆದು ತೋರಿಸುವ ಸಿನಿಮಾ ʻರೂಪಾಯಿʼ.Rupai' is coming to be counted from this week!

ಎಲ್ಲೆಲ್ಲಿಂದಲೋ ಬಂದು ಒಂದು ಕಡೆ ಸೇರಿದವರ ಮನಸ್ಥಿತಿ, ಪಪರಿಸ್ಥಿತಿಗಳು ಬೇರೆಯದ್ದೇ ಆಗಿರುತ್ತದೆ. ಆದರೆ ಎಲ್ಲರ ಅಗತ್ಯ ಮಾತ್ರ ದುಡ್ಡು. ಇವರೊಂದಿಗೆ ದೊಡ್ಡ ಮಟ್ಟದ ಹಣ ಕೂಡಾ ಜರ್ನಿ ಮಾಡುತ್ತಿರುತ್ತದೆ. ಆದರೆ ಅದು ಇವರಿಗೆ ಗೊತ್ತೇ ಇರೋದಿಲ್ಲ. ಆ ಹಣವನ್ನು ಇನ್ಯಾರೋ ಬೆನ್ನಟ್ಟಿರುತ್ತಾರೆ. ಮನುಷ್ಯ ಹಣದ ಹಿಂದೆ ಓಡೋದನ್ನು ಇಲ್ಲಿ ರೂಪಕಗಳ ಮೂಲಕ ಬಿಚ್ಚಿಟ್ಟಿದ್ದಾರೆ. ಬದುಕಿನ ಅನಿವಾರ್ಯಗಳಿಗಾಗಿ ದೇಹವನ್ನೇ ಬಂಡವಾಳ ಮಾಡಿಕೊಂಡ ಹೆಣ್ಣುಮಕ್ಕಳ ಕತೆ ಕೇಳಿರ್ತೀವಿ. ನೀವಿಲ್ಲಿ ಗಂಡು ವೇಶ್ಯೆಯನ್ನೂ ನೋಡಬಹುದು. ಒಟ್ಟಾರೆ ಜೀವನದ ವಾಸ್ತವಗಳನ್ನು ಅಷ್ಟೇ ತಮಾಷೆ ರೀತಿಯಲ್ಲಿ ಅನಾವರಣಗೊಳಿಸಿರುವ ಸಿನಿಮಾ ರೂಪಾಯಿ!Rupai' is coming to be counted from this week!ವಿಜಯ್ ಜಗದಾಲ್ ಮೊದಲ ಬಾರಿಗೆ ನಟಿಸಿ-ನಿರ್ದೇಶಿಸಿರುವ ‘ರೂಪಾಯಿ’. ಆದರೆ ಇದು ಇವರ ಮೊದಲ ಸಿನಿಮಾ ಅಂತಾ ಅನ್ನಿಸೋದೇ ಇಲ್ಲ.

‘ರೂಪಾಯಿ’ ಒಂದು ಪಕ್ಕಾ ಮನರಂಜನಾತ್ಮಕ ಚಿತ್ರವಾಗಿದ್ದು, ಒಂದು ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳೂ ಈ ಚಿತ್ರದಲ್ಲಿದೆಯಂತೆ. ‘ಪ್ರೇಕ್ಷಕರಿಗೆ ಎಲ್ಲೂ ಬೋರ್ ಆಗದ ಹಾಗೆ ಚಿತ್ರಕಥೆ ಮಾಡಿದ್ದು, ಹಣದ ಮೌಲ್ಯದ ಕುರಿತು ನಗುವಿನ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ. ಇಲ್ಲಿ ನಗಿಸುವುದಕ್ಕೆ ಯಾವುದೇ ಪ್ರತ್ಯೇಕ ಪಾತ್ರಗಳಿಲ್ಲ. ಸನ್ನಿವೇಶಗಳೇ ನಗು ತರಿಸುತ್ತದೆ. ಸಡನ್ನಾಗಿ ಹಣ ಸಿಕ್ಕಿಬಿಟ್ಟರೆ ಸಂಬಂಧಗಳು ಹೇಗೆ ಹದಗೆಡುತ್ತವೆ ಎನ್ನುವ ವಿಚಾರದೊಂದಿಗೆ ಕ್ರಿಕೆಟ್ ಹಗರಣದ ಎಳೆಯೂ ಇಲ್ಲಿ ಬಂದು ಹೋಗುತ್ತದೆ.Rupai' is coming to be counted from this week! ವಿಜಯ್ ಜಗದಾಲ್ ಜೊತೆಗೆ ಕೃಷಿ ತಾಪಂಡ, ಯಶ್ವಿಕ್, ‘ಮೈತ್ರಿ’ ಜಗದೀಶ್, ಶಂಕರ್ ಮೂರ್ತಿ, ರಾಮ್ ಚಂದನ್, ಚಂದನಾ ರಾಘವೇಂದ್ರ, ಪ್ರಮೋದ್ ಶೆಟ್ಟಿ, ರಾಕ್ಲೈನ್ ಸುಧಾಕರ್, ಮೋಹನ್ ಜನೇಜ ಮುಂತಾದವರು ಪಾತ್ರಕ್ಕೆ ಹೇಗೆ ಬೇಕೋ ಹಾಗೆ ನಟಿಸಿದ್ದಾರೆ. ಚಿತ್ರಕ್ಕೆ ಆನಂದ್ ರಾಜವಿಕ್ರಮ್ ಅವರ ಸಂಗೀತ, ಆರ್.ಡಿ. ನಾಗಾರ್ಜುನ್ ಅವರ ಛಾಯಾಗ್ರಹಣ ಮತ್ತು ಶಿವರಾಜ್ ಮೇಹು ಅವರ ಸಂಕಲನ ಕೂಡಾ ಅಚ್ಚುಕಟ್ಟಾಗಿದೆ.Rupai' is coming to be counted from this week!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…