ಬಿಡುಗಡೆಯಾಯ್ತು ಸುರೇಶ್ ಡಿ.ಎಂ ನಿರ್ದೇಶನದ `ಚೋಳ’ ಟೀಸರ್!
ರಗಡ್ ಪಾತ್ರದಲ್ಲಿ ಮಿಂಚಿದರು ರೂರಲ್ ಸ್ಟಾರ್ ಅಂಜನ್!

Rural Star Anjan shines in the role of Rugad!

ರೂರಲ್ ಸ್ಟಾರ್ ಅಂಜನ್ ನಾಯಕನಾಗಿ ನಟಿಸಿರುವ `ಚೋಳ’ ಚಿತ್ರ ಇತ್ತೀಚಿನ ದಿನಗಳಲ್ಲಿ ಪ್ರೇಕ್ಷಕರ ಗಮನ ಸೆಳೆದುಕೊಂಡಿತ್ತು. ಸುರೇಶ್ ಡಿ.ಎಂ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಭಿನ್ನವಾದ ಕಥಾನಕವನ್ನೊಳಗೊಂಡಿದೆ ಎಂಬಂಥಾ ನಂಬಿಕೆಯೂ ಮೊಳೆತುಕೊಂಡಿತ್ತು. ಇದೀಗ ಚೀಳ ಇತ್ರದ ಟೀಸರ್ ಬಿಡುಗಡೆಗೊಂಡಿದೆ. ರೂರಲ್ ಸ್ಟಾರ್ ಅಂಜನ್ ಅಕ್ಷರಶಃ ಮಾಸ್ ಲುಕ್ಕಿನಲ್ಲಿ ಅಬ್ಬರಿಸಿದ್ದಾರೆ. ಇದರೊಂದಿಗೆ ಸದರಿ ಸಿನಿಮಾ ಮೇಕಿಂಗ್, ಕಥೆ, ಪಾತ್ರವರ್ಗ ಸೇರಿದಂತೆ ಎಲ್ಲ ದಿಕ್ಕುಗಳಲ್ಲಿಯೂ ಗಮನ ಸೆಳೆದಿದೆ. ಇದರೊಂದಿಗೆ ನಿರ್ದೇಶಕರಾಗಿ ರೂಪಾಂತರಗೊಂಡಿರುವ ಸುರೇಶ್ ಡಿ.ಎಂ ಮೊದಲ ಹೆಜ್ಜೆಯಲ್ಲಿಯೇ ಭರವಸೆ ಮೂಡಿಸಿದ್ದಾರೆ.Rural Star Anjan shines in the role of Rugad!

ಕನ್ನಡ ಚಿತ್ರರಂಗದಲ್ಲಿ ಇದುವರೆಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದವರು ಸುರೇಶ್ ಡಿ.ಎಂ. ನಿರ್ಮಾಪಕರಾಗಿದ್ದುಕೊಂಡೇ ತಮ್ಮ ಭಿನ್ನ ಅಭಿರುಚಿಯನ್ನು ಸಾಬೀತುಪಡಿಸಿದ್ದ ಅವರು, ಚೋಳ ಮೂಲಕ ನಿರ್ದೇಶಕರಾದ ಸುದ್ದಿ ಹೊರ ಬಂದಾಗ ಸಹಜವಾಗಿಯೇ ಕುತೂಹಲ ಮೂಡಿಕೊಂಡಿತ್ತು. ಈ ಟೀಸರ್ ಅವರ ಕಸುಬುದಾರಿಕೆಯನ್ನು ಎತ್ತಿ ಹಿಡಿದಿದೆ. ನಾನಾ ಅಂಶಗಳು ಮಿಳಿತವಾಗಿರುವ ಪಕ್ಕಾ ರಗಡ್ ಕಥೆಯೊಂದಿಗೆ ಸುರೇಶ್ ಅವರು ಈ ಚಿತ್ರವನು ರೂಪಿಸಿರೋದು ಟೀಸರ್ ಮೂಲಕ ಋಜುವಾತಾಗಿದೆ. ಪ್ರೇಕ್ಷಕರಲ್ಲೊಂದು ನಿರೀಕ್ಷೆ ಮೂಡಿಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿಯೂ ಈ ಟೀಸರ್ ಯಶ ಕಂಡಿದೆ.Rural Star Anjan shines in the role of Rugad!

ರೂರಲ್ ಸ್ಟಾರ್ ಅಂಜನ್, ಸಿಕ್ಕ ಸೀಮಿತ ಅವಕಾಶದಲ್ಲಿಯೇ ತಮ್ಮ ಪ್ರತಿಭೆಯನ್ನು ಸಾಬೀತು ಪಡಿಸಿಕೊಂಡಿದ್ದವರು. ಈ ಹುಡುಗನಿಗೆ ಸರಿಕಟ್ಟಾದೊಂದು ಅವಕಾಶ ಸಿಕ್ಕರೆ ಹೀರೋ ಆಗಿ ನೆಲೆ ಕಂಡುಕೊಳ್ಳುತ್ತಾರೆಂಬಂತೆ ಪ್ರೇಕ್ಷಕರೇ ಅಭಿಪ್ರಾಯ ಪಟ್ಟಿದ್ದರು. ಕಡೆಗೂ ಸುರೇಶ್ ಡಿ.ಎಂ ಅದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದರ ಫಲವಾಗಿಯೇ ಅಂಜನ್ ಮಾಸ್ ಮೂಡಿನಲ್ಲಿ ಆರ್ಭಟಿಸಿದ್ದಾರೆ. ನಿಖರವಾಗಿ ಹೇಳಬೇಕೆಂದರೆ, ಈ ಟೀಸರ್ ನೋಡಿದವರೆಲ್ಲರೂ ಖುಷಿಗೊಂಡಿದ್ದಾರೆ. ಇದರಲ್ಲೇನೋ ವಿಶೇಷವಾದುದಿದೆ ಎಂಬ ನಂಬಿಕೆ ಪ್ರತಿಯೊಬ್ಬರಲ್ಲಿಯೂ ಮೂಡಿಕೊಂಡಿದೆ.Rural Star Anjan shines in the role of Rugad!

ಸುರೇಶ್ ಡಿ.ಎಂ ಸೃಷ್ಟಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಈ ಚಿತ್ರವನ್ನು ಸ್ವತಃ ನಿರ್ಮಾಣ ಮಾಡಿದ್ದಾರೆ. ಇಲ್ಲಿ ದಿಶಾ ಪಾಂಡೆ ಮತ್ತು ಪ್ರತಿಭ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ. ದಿನೇಶ್ ಮಂಗಳೂರು ಮತ್ತು ಬಲ ರಾಜವಾಡಿ ವಿಲನ್ನುಗಳಾಗಿ ನಟಿಸಿದ್ದಾರೆ. ಅವರೆಲ್ಲರ ಪಾತ್ರಗಳ ಝಲಕ್ಕುಗಳು ಟೀಸರ್ ನಲ್ಲಿ ಕಾಣಿಸಿವೆ. ಅದು ಪ್ರೇಕ್ಷಕರು ಥ್ರಿಲ್ ಆಗುವಂತೆಯೂ ಮಾಡಿದೆ. ಇನ್ನುಳಿದಂತೆ ತುಳುವಿನಲ್ಲಿ ಸೂಪರ್ ಹಿಟ್ ಆಗಿರುವ, ರೂಪೇಶ್ ಶೆಟ್ಟಿ ನಿರ್ದೇಶನದ ಸರ್ಕಸ್ ಎಂಬ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದ ಲಾಯ್ ವ್ಯಾಲೆಂಟೈನ್ ಸಲ್ಡಾನ ಈ ಚಿತ್ರಕ್ಕೆ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮನಮೋಹನ್ ರಾಯ್ ರಂಥಾ ಹಿರಿಯ ನಟರಿರುವ ಈ ತಾರಾಗಣದಲ್ಲಿ ಪ್ರತಿಭಾನ್ವಿತ ನಟ ವರ್ಧನ್, ಮಜಾ ಭಾರತ ಖ್ಯಾತಿಯ ಜಗಪ್ಪ, ಮಿಂಚು ಮುಂತಾದವರಿದ್ದಾರೆ. ಸಂದೀಪ್ ಹೊನ್ನಾಳ್ಳಿ ಛಾಯಾಗ್ರಹಣ, ಶಿವಕುಮಾರ್ ಎ. ಸಂಕಲನ ಈ ಚಿತ್ರಕ್ಕಿದೆ.Rural Star Anjan shines in the role of Rugad!

ಚೋಳ ಎಂಬ ಶೀರ್ಷಿಕೆ ಕೇಳಿದಾಕ್ಷಣವೇ ಬಹುತೇಕರ ಗಮನ ಬೇರೆತ್ತಲೋ ವಾಲಿಕೊಂಡಿತ್ತು. ಆದರೆ, ಇದೊಂದು ಆಧುನಿಕ ದಿನಮಾನದ ಕಥನ ಎಂಬುದನ್ನು ಈ ಟೀಸರ್ ಸಾರಿ ಹೇಳಿದೆ. ಪ್ರೀತಿ, ರೌಡಿಸಂ ಸೇರಿದಂತೆ ಅನೇಕ ಅಂಶಗಳನ್ನು ಸದರಿ ಕಥನ ಒಳಗೊಂಡಿದೆ. ಅದು ನಿಜಕ್ಕೂ ಭಿನ್ನವಾಗಿದೆ ಎಂಬುದು ಈ ಟೀಸರ್ ಮುಖೇನ ಜಾಹೀರಾಗಿದೆ. ಈಗಾಗಲೇ ಒಂದಷ್ಟು ಭಾಗಗಳ ಚಿತ್ರೀಕರಣ ಸುಸೂತ್ರವಾಗಿ ನೆರವೇರಿದೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಗಿಸಿಕೊಳ್ಳಲು ಸುರೇಶ್ ಅವರು ಪ್ಲಾನು ಮಾಡಿಕೊಂಡಿದ್ದಾರೆ. ಈ ಹಂತದಲ್ಲಿ ಚೋಳ ಬಗೆಗಿನ ಒಂದಷ್ಟು ಇಂಟರೆಸ್ಟಿಂಗ್ ಮಾಹಿತಿಗಳು ಹಂತ ಹಂತವಾಗಿ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.Rural Star Anjan shines in the role of Rugad!

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…