ಮತ್ತೆ ಒಂದಾದ ‘ಲವ್ ಸ್ಟೋರಿ’ ಜೋಡಿ…ನಾಗಚೈತನ್ಯ 23ನೇ ಸಿನಿಮಾಗೆ ಸಾಯಿಪಲ್ಲವಿ ನಾಯಕಿ

Sai Pallavi Naga Chaitanya's 23rd movie 2 2

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ 23ನೇ (23rd movie) ಸಿನಿಮಾಗೆ ನಾಯಕಿಯಾಗಿ ಸಾಯಿಪಲ್ಲವಿ (Sai Pallavi) ಆಯ್ಕೆಯಾಗಿದ್ದಾರೆ. ಲವ್ ಸ್ಟೋರಿ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ನಿರೀಕ್ಷೆ ಹೆಚ್ಚಿಸಿದೆ. ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಸದ್ಯ NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ.Sai Pallavi  Naga Chaitanya's 23rd movie 1

ಮೀನುಗಾರರ ಸಮುದಾಯದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಇದಾಗಿದೆ. ಇತ್ತೀಚೆಗೆ ನಾಯಕ ಚೈತನ್ಯ ಹಾಗೂ ನಿರ್ದೇಶಕ ಚಂದು ಮೊಂಡೇಟಿ ಆಂಧ್ರಪ್ರದೇಶದ ಶ್ರೀಕಾಕುಳಂಗೆ ಭೇಟಿ ನೀಡಿ, ಮೀನುಗಾರರ ಕುಟುಂಬಗಳ ಜೊತೆ ಕಾಲಕಳೆದಿದ್ದರು. ಮೀನುಗಾರರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಸದ್ಯ NC23 ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯುತ್ತಿದೆ.Sai Pallavi  Naga Chaitanya's 23rd movie 1

ಲವ್ ಸ್ಟೋರಿ ಸಿನಿಮಾದಲ್ಲಿ ಸಾಯಿಪಲ್ಲವಿ ಹಾಗೂ ನಾಗಚೈತನ್ಯ ಜೋಡಿಯ ಕೆಮಿಸ್ಟ್ರೀ ಸಖತ್ ವರ್ಕೌಟ್ ಆಗಿತ್ತು. ತೆರೆಮೇಲೆ ಮ್ಯಾಜಿಕ್ ಮಾಡಿದ್ದ ಚೈ ಮತ್ತು ಮಲರ್ ಬ್ಯೂಟಿ ಮತ್ತೊಮ್ಮೆ ಕೈ ಜೋಡಿಸಿರುವುದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ. ಬಹಳ ಅದ್ಧೂರಿಯಾಗಿ ನಿರ್ಮಾಣವಾಗ್ತಿರುವ ಈ ಸಿನಿಮಾದ ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಶೀಘ್ರದಲ್ಲಿಯೇ ಅಪ್ ಡೇಟ್ ನೀಡಲಿದೆ ಚಿತ್ರತಂಡ.

ನಟಿಯರ ಫೋಟೋಗಳಿಗಾಗಿ ಕ್ಲಿಕ್ ಮಾಡಿ
Sai Pallavi  Naga Chaitanya's 23rd movie 1

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…