ತಮಿಳು ನಟಿಯ ಕನ್ನಡ ಪ್ರೇಮ!

sai pallavi kannada movie gargi

ತಮಿಳಿನ ಖ್ಯಾತ ನಟಿ ಸಾಯಿಪಲ್ಲವಿ ಅಭಿನಯದ ‘ಗಾರ್ಗಿ’ ಎಂಬ ತಮಿಳು ಚಿತ್ರ ಕನ್ನಡಕ್ಕೆ ಡಬ್ ಆಗಿ ಬಿಡುಗಡೆಯಾಗುತ್ತಿದೆ ಎಂದು ಸುದ್ದಿಯಾದಾಗ, ಯಾರೂ ಅಷ್ಟೇನೂ ಆಸಕ್ತಿ ತೋರಿಸಲಿಲ್ಲ. ಏಕೆಂದರೆ, ಹಲವು ಪರಭಾಷೆಯ ಚಿತ್ರಗಳು ಆಗಾಗ ಕನ್ನಡಕ್ಕೆ ಡಬ್ ಆಗುತ್ತಿರುತ್ತವೆ. ಆದರೆ, ಗಾರ್ಗಿ ಚಿತ್ರದ ಹಿಂದೆ ರಕ್ಷಿತ್ ಶೆಟ್ಟಿ ನಿಂತಿದ್ದಾರೆ. ಈ ಚಿತ್ರವನ್ನು ಅವರು ಕನ್ನಡದಲ್ಲಿ ತಮ್ಮ ಪರಂವಾ ಸ್ಟುಡಿಯೋಸ್ ಮೂಲಕ ಅರ್ಪಿಸುತ್ತಿರುವುದಷ್ಟೇ ಅಲ್ಲ, ಅದನ್ನು ಕೆ ಆರ್‌ ಜಿ ಸ್ಟುಡಿಯೋಸ್ ಮೂಲಕ ಬಿಡುಗಡೆ ಮಾಡುತ್ತಿದ್ದಾರೆ.gargi kannada movie

‘ಗಾರ್ಗಿ’ ಸಿನಿಮಾ ಜುಲೈ 15ರಂದು ಬಿಡಗುಡೆಯಾಗುತ್ತಿದ್ದು, ಅದಕ್ಕೆ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ವಿಭಿನ್ನ ಹಾಗೂ ಸೂಕ್ಷ್ಮ ಕಥೆಯಿಂದ ಗಮನಸೆಳೆಯುತ್ತಿದೆ. ಇನ್ನೊಂದು ವಿಶೇಷತೆಯೆಂದರೆ, ತಮಿಳು ನಟಿ ಸಾಯಿಪಲ್ಲವಿ ಕನ್ನಡದಲ್ಲಿ ತಮ್ಮ ಪಾತ್ರಕ್ಕೆ ಡಬ್ ಮಾಡಿರುವುದು.gargi kannada movie

ಇಷ್ಟಕ್ಕೂ ರಕ್ಷಿತ್ಗೆ ಈ ಚಿತ್ರವನ್ನು ಕನ್ನಡದಲ್ಲಿ ಅರ್ಪಿಸಬೇಕು ಎಂದು ಅನಿಸಿದ್ದು ಏಕೆ? ಈ ಕುರಿತು ಅವರೇ ಒಂದಿಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪ್ರಮುಖವಾಗಿ ನಿರ್ದೇಶಕ ಗೌತಮ್ ರಾಮಚಂದ್ರನ್ ಅವರ ಒಳ್ಳೆಯ ಸ್ನೇಹಿತರಂತೆ. ‘ನಾವು ಭೇಟಿಯಾದಾಗಲೆಲ್ಲ ಸಿನಿಮಾ ಮತ್ತು ಕಥೆಗಳ ಕುರಿತು ಮಾತನಾಡುವುದೇ ಹೆಚ್ಚು. ಗೌತಮ್ ಅವರ ಸಿನಿಮಾ ಪ್ರೀತಿ ಮತ್ತು ಸಿನಿಮಾ ಮೂಡಿ ಬಂದಿರುವ ರೀತಿ, ಈ ಚಿತ್ರವನ್ನು ಕನ್ನಡದಲ್ಲಿ ಪ್ರಸ್ತುತಪಡಿಸುವ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮಾಡಿತು. ಸಾಯಿಪಲ್ಲವಿ ಈ ಚಿತ್ರದಲ್ಲಿ ಮುಖ್ಯ ಪಾತ್ರ ನಟಿಸಿರುವುದು ಮತ್ತೊಂದು ಕಾರಣ’ ಎಂದಿದ್ದಾರೆ ರಕ್ಷಿತ್.
‘ಗರುಡಗಮನ ವೃಷಭವಾಹನ’ ನಂತರ, ಹೃದಯ ಕದಲಿಸಿದ ಇನ್ನೊಂದು ಸಿನಿಮಾ ಎಂದರೆ ಅದು ‘ಗಾರ್ಗಿ’ ಎನ್ನುವ ರಕ್ಷಿತ್, ‘ಒಟ್ಟಾರೆ ಚಿತ್ರ ನಮ್ಮನ್ನು ಗಾರ್ಗಿಯ ಪ್ರಪಂಚದೊಳಗೆ ಸೆಳೆಯುತ್ತದೆ, ಅವಳ ಧೈರ್ಯ ಮತ್ತು ಹೋರಾಟ ಮನಕಲಕುವಂತೆ ಮಾಡುತ್ತದೆ. ಸಾಯಿಪಲ್ಲವಿ ಅವರು ಗಾರ್ಗಿ ಪಾತ್ರವನ್ನು ಜೀವಿಸಿ ನಿಜ ಜೀವನಕ್ಕೆ ಹತ್ತಿರವಿದೆ ಎನಿಸುವಂತೆ ನಟಿಸಿದ್ದಾರೆ’ ಎನ್ನುತ್ತಾರೆ ರಕ್ಷಿತ್.gargi kannada movie

‘ನಮ್ಮ ಚಿತ್ರಗಳನ್ನು ನಾವು ಬೇರೆ ಭಾಷೆ ಮತ್ತು ಬೇರೆ ರಾಜ್ಯಗಳಲ್ಲಿ ಬಿಡಗುಡೆ ಮಾಡಲು ಧೈರ್ಯ ಮಾಡುತ್ತಿರುವಾಗ, ಬೇರೆ ಭಾಷೆಯ ಚಿತ್ರಗಳನ್ನು ಇಲ್ಲಿಗೆ ತರುವುದು ನಮ್ಮ ಜವಾಬ್ದಾರಿ, ಗೌತಮ್ ನಮ್ಮ ಬೆಂಗಳೂರಿನವರೇ ಹಾಗೂ ಸಾಯಿಪಲ್ಲವಿ ಸ್ವತಃ ಕನ್ನಡಕ್ಕೆ ಡಬ್ ಮಾಡಿದ್ದಾರೆ. ಇದೆಲ್ಲ ಕಾರಣಗಳಿಗಾಗಿ ಪರಂವಾ ಪಿಕ್ಚರ್ಸ್ ಸಂಸ್ಥೆಯು ಹೆಮ್ಮೆಯಿಂದ ಈ ಚಿತ್ರವನ್ನು ಕನ್ನಡದಲ್ಲಿ ಅರ್ಪಿಸುತ್ತಿದೆ’ ಎಂದಿದ್ದಾರೆ. ‘ಗಾರ್ಗಿ’ ಚಿತ್ರದಲ್ಲಿ ಸಾಯಿಪಲ್ಲವಿ ಜೊತೆಗೆ ಕಾಳಿ ವೆಂಕಟ್, ಐಶ್ವರ್ಯ ಲಕ್ಷ್ಮೀ, ಆರ್.ಎಸ್. ಶಿವಾಜಿ, ಕಲೈಮಾಮಣಿ ಶರವಣನ್ ಮುಂತಾದವರು ನಟಿಸಿದ್ದು, ಗೋವಿಂದ ವಸಂತಾ ಸಂಗೀತ ಸಂಯೋಜಿಸಿದ್ದಾರೆ.gargi kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…