ಮೇ 20ಕ್ಕೆ “ಸಕುಟುಂಬ ಸಮೇತ” ಚಿತ್ರಮಂದಿರಕ್ಕೆ ಬನ್ನಿ.

ಮದುವೆ, ಮುಂಜಿ ಸೇರಿದಂತೆ ಶುಭ ಸಮಾರಂಭಗಳಿಗೆ ಸಕುಟುಂಬ ಸಮೇತರಾಗಿ ಬನ್ನಿ ಎಂದು ಕರೆಯುವುದು ವಾಡಿಕೆ. ಆದರೆ ಮನೆಯಲ್ಲಿ ಶುಭ ಸಮಾರಂಭ ನಡೆದರೆ ಮನಸ್ಸಿಗೆ ಎಷ್ಟು ಸಂತೋಷವಾಗುವುದೊ, ಅಷ್ಟೇ ಖುಷಿ ಕೊಡುವ “ಸಕುಟುಂಬ ಸಮೇತ” ಎಂಬ ಸಿನಿಮಾ ತೆರೆಗೆ ಬರುತ್ತಿದೆ ಮೇ 20 ರಂದು.

ನಾಯಕನಾಗಿ ರಕ್ಷಿತ್ ಶೆಟ್ಟಿ ಎಷ್ಟು ಹೆಸರು ಮಾಡಿದ್ದಾರೋ, ಅಷ್ಟೇ ಹೆಸರು ನಿರ್ಮಾಪಕರಾಗೂ ಮಾಡುತ್ತಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಸ್ತುತ ರಕ್ಷಿತ್ ಶೆಟ್ಟಿ ತಮ್ಮ ಪರಂವಾ ಸ್ಟುಡಿಯೋ ಮೂಲಕ ನಿರ್ಮಿಸಿರುವ “ಸಕುಟುಂಬ ಸಮೇತ” ಚಿತ್ರ ಮೇ ಇಪ್ಪತ್ತರಂದು ತೆರೆಗೆ ಬರುತ್ತಿದೆ.WhatsApp Image 2022 05 12 at 2.39.48 PM

“ಸಕುಟುಂಬ ಸಮೇತ” ಕುಟುಂಬ ಸಮೇತ ನೋಡುವ ಸಿನಿಮಾ. ಮದುವೆ ನಿಶ್ಚಯವಾದ ಹುಡುಗಿಯೊಬ್ಬಳು ಮದುವೆಗೆ ಒಂದು ವಾರ ಇರುವಾಗ, ಮದುವೆ ಬೇಡ ಎಂದು ಹುಡುಗನ ಮನೆಗೆ ಬಂದು ಹೇಳುತ್ತಾಳೆ. ಮುಂದೇನಾಗುತ್ತದೆ? ಎಂದು ತಿಳಿಯಲು ಸಿನಿಮಾ ನೋಡಬೇಕು ಎಂದರು ನಿರ್ದೇಶಕ ರಾಹುಲ್.

ನಾನು ರಾಹುಲ್ ಅವರನ್ನು “ಉಳಿದವರು ಕಂಡಂತೆ” ಸಿನಿಮಾದಿಂದಲೂ ಬಲ್ಲೆ. ಅಸಿಸ್ಟೆಂಟ್ ಡೈರೆಕ್ಟರ್ ಅಗಿದ್ದ ರಾಹುಲ್ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ನಾನು ಚಿತ್ರ ನೋಡಿದ್ದೇನೆ ಚೆನ್ನಾಗಿದೆ  ಕಲರ್ಸ್ ವಾಹಿನಿಯವರು ಈ ಚಿತ್ರದ ಸ್ಯಾಟಲೈಟ್ ಹಾಗೂ ಓಟಿಟಿ ಹಕ್ಕು ಪಡೆದುಕೊಂಡಿದ್ದಾರೆ. ಚಿತ್ರಮಂದಿರಗಳಲ್ಲೂ ಈ ಚಿತ್ರ ಬಿಡುಗಡೆಯಾಗುತ್ತಿದೆ. ಜಿ.ಎಸ್.ಗುಪ್ತ ಅವರು ನನ್ನ ಜೊತೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಬಿಡುಗಡೆಗೂ ಮುನ್ನವೇ ನಾವು ಹಾಕಿರುವ ದುಡ್ಡು ನಮಗೆ ವಾಪಸ್ ಬಂದಿರುವುದಕ್ಕೆ ಖುಷಿಯಿದೆ ಎಂದರು ರಕ್ಷಿತ್ ಶೆಟ್ಟಿ.WhatsApp Image 2022 05 12 at 2.39.49 PM

ರಕ್ಷಿತ್ ಶೆಟ್ಟಿ, ರಿಷಭ್ ಶೆಟ್ಟಿ ಮುಂತಾದ ಗೆಳೆಯರ ಬಳಗದಿಂದ ಬಂದವರು ಈಗ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರದ ನಿರ್ದೇಶಕ ರಾಹುಲ್ ಸಹ ನನಗೆ ಪರಿಚಯ. ಅವರು ಈ ಚಿತ್ರದ ಕಥೆ ಹೇಳಿದಾಗ ಸ್ವಲ್ಪ ಭಯವಾಯಿತು. ಹೆಚ್ಚು ಮನೆಯಲ್ಲೇ ನಡೆಯುವ ಕಥೆಯಿದು. ಆದರೆ ನಿರ್ದೇಶಕರು ಚಿತ್ರವನ್ನು ಅಂದುಕೊಂಡದ್ದಕ್ಕಿಂತ ಚೆನ್ನಾಗಿ ನಿರ್ದೇಶಿಸಿದ್ದಾರೆ ಅಂದರು ಅಚ್ಯುತಕುಮಾರ್.

ರೆಡಿಯೋ, ನಾಟಕಗಳಲ್ಲಿ ಅನುಭವವಿದ್ದ ನನಗೆ ಇದು ಮೊದಲ ಚಿತ್ರ. ನನ್ನ ಪಾತ್ರ ಚೆನ್ನಾಗಿದೆ. ಅವಕಾಶ ನೀಡದ್ದ ನಿರ್ಮಾಪಕ, ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕಿ‌ ಸಿರಿ ರವಿಕುಮಾರ್.WhatsApp Image 2022 05 12 at 2.39.49 PM 1

ಆಡಿಷನ್ ಮೂಲಕ ಸೆಲೆಕ್ಟ್ ಆದ ನನಗೆ ಸ್ಕ್ರಿಪ್ಟ್ ‌ಓದುವಾಗ ಎಷ್ಟು ನಕ್ಕಿದೇನೋ? ಗೊತ್ತಿಲ್ಲ. ಕುಟುಂಬ ಸಮೇತ ನೋಡಬೇಕಾದ ಚಿತ್ರವಿದು ನೋಡಿ ಹಾರೈಸಿ ಎಂದರು ನಾಯಕ ಭರತ್ ಜಿ.ಬಿ.

ಚಿತ್ರದಲ್ಲಿ ಅಭಿನಯಿಸಿರುವ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ಜಯಲಕ್ಷ್ಮಿ ಪಾಟೀಲ್, ಛಾಯಾಗ್ರಾಹಕ ಕರಮ್ ಚಾವ್ಲಾ, ಸಂದೀಪ್ ಹಾಗೂ ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್ ತಮ್ಮ ಅನುಭವವನ್ನು ಹಂಚಿಕೊಂಡರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…