ಕೆಜಿಎಫ್ , ಬಾಹುಬಲಿಯ ಸಮಾಗಮ
ಸಾಲಾರ್ ಮುಂದಿನ ವರ್ಷ ಬಿಡುಗಡೆ

salaar release date september 2023

ಸಲಾರ್’ ಚಿತ್ರ ದೇಶ ಕಂಡು ಎರಡು ದೊಡ್ಡ ಚಿತ್ರ ಸರಣಿಗಳಾದ ಬಾಹುಬಲಿ ಮತ್ತು ಕೆಜಿಎಫ್ನ ಅತೀ ದೊಡ್ಡ ಸಂಗಮ.. ‘ಕೆಜಿಎಫ್’ ಚಿತ್ರತಂಡ ಒಂದು ಕಡೆಯಾದರೆ, ‘ಬಾಹುಬಲಿ’ ಚಿತ್ರದ ನಾಯಕ ಪ್ರಭಾಸ್, ಭಾರತದ ಅತೀ ದೊಡ್ಡ ಆಕ್ಷನ್ ಚಿತ್ರಕ್ಕೆ ಕೈಜೋಡಿಸಿರುವುದು ವಿಶೇಷ. ಮಹಾ ಸಂಗಮವೇ ” ಸಾಲಾರ್” . ಈ ಸಂಗಮದ ಬಗ್ಗೆ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿದ್ದು, ಆಕ್ಷನ್ ಪ್ರಿಯರಿಗೆ ರಸದೌತಣ ಸಿಗಲಿದೆ.salaar release date september 2023

ದೇಶವೇ ಮೆಚ್ಚಿ ಹೆಮ್ಮೆಪಟ್ಟ ‘ಕೆಜಿಎಫ್’ 1 ಮತ್ತು ‘ಕೆಜಿಎಫ್2’ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿಂದ ನಿರ್ಮಾಣವಾಗಿರುವ ಮೊದಲ ಬಾರತೀಯ ಚಿತ್ರ ಪ್ರಭಾಸ್ ಅಭಿನಯದ ‘ಸಲಾರ್’ನ ಪೋಸ್ಟರ್, 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಗಿದೆ.

ಹೊಂಬಾಳೆ ಫಿಲಂಸ್ನಡಿ ವಿಜಯಕುಮಾರ್ ಕಿರಗಂದೂರು ನಿರ್ಮಿಸಿ, ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ‘ಸಲಾರ್’ ಚಿತ್ರವು 2023ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. 400 ಕೋಟಿ ರೂ.ಗಳಿಗೂ ಮೀರಿದ ಅತೀ ದುಬಾರಿ ವೆಚ್ಚದ ಮತ್ತು ಅತೀ ನಿರೀಕ್ಷೆಯ ಈ ಚಿತ್ರವು ಈಗಾಗಲೇ ತನ್ನ ಹೈವೋಲ್ಟೇಜ್ ಆಕ್ಷನ್ ದೃಶ್ಯಗಳಿಂದ ಸಾಕಷ್ಟು ಸುದ್ದಿ ಮಾಡುತ್ತಿದೆ.salaar release date september 2023

ಈ ಹಿಂದೆ ಬಿಡುಗಡೆಯಾದ ಚಿತ್ರದ ಕೆಲವು ಪೋಸ್ಟರ್ಗಳು ಈಗಾಗಲೇ ಜನರ ಮನ ಗೆದ್ದಿದೆ. ಇದೀಗ ಚಿತ್ರತಂಡವು ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.salaar release date september 2023

‘ಸಲಾರ್’ ಒಂದು ಪಕ್ಕಾ ಆಕ್ಷನ್ ಮತ್ತು ಸಾಹಸಮಯ ಚಿತ್ರವಾಗಿದ್ದು ಭಾರತವಲ್ಲದೆ, ಯೂರೋಪ್, ಆಫ್ರಿಕಾ ಮುಂತಾದ ಕಡೆ ಚಿತ್ರೀಕರಣವಾಗಲಿದೆ.

ಈ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಸಂಪೂರ್ಣವಾಗಿದೆ. ಚಿತ್ರತಂಡವು ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದು, ಈ ಚಿತ್ರದ ಗ್ರಾಫಿಕ್ಸ್ ಕೆಲಸದ ಜವಾಬ್ದಾರಿಯನ್ನು ವಿದೇಶದ ಪ್ರತಿಷ್ಠಿತ ಸ್ಟುಡಿಯೋಗೆ ನೀಡಲಾಗಿದ್ದು. ಭಾರತದಲ್ಲಿ ಇದುವರೆಗೂ ಯಾವ ಚಿತ್ರದಲ್ಲೂ ನೋಡದಂತಹ ಅತ್ಯುನ್ನತ ವಿಎಫ್ಎಕ್ಸ್ ಕೆಲಸವನ್ನು ಈ ಚಿತ್ರದಲ್ಲಿ ನೋಡಬಹುದು ಎಂದು ಹೇಳಲಾಗಿದೆ.salaar release date september 2023

‘ಕೆಜಿಎಫ್ 2’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಪ್ರಶಾಂತ್ ನೀಲ್, ಈಗ ಭಾರತದಲ್ಲೇ ಅತ್ಯಂತ ಬೇಡಿಕೆಯ ನಿರ್ದೇಶಕ ಎಂದರೆ ತಪ್ಪಾಗಲಾರದು. ಇಂಥ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವು ಐದು ಭಾಷೆಗಳಲ್ಲಿ ಮೂಡಿ ಬರುತ್ತಿರುವ ಭಾರತೀಯ ಚಿತ್ರವಾಗಿದೆ. ಪ್ರಭಾಸ್ಗೆ ನಾಯಕಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದ ಪ್ರತಿಭಾವಂತ ಕಲಾವಿದರ ದಂಡಿದೆ.salaar release date september 2023

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…