ನವೆಂಬರ್ 11ಕ್ಕೆ ಸಮಂತಾ ಅಭಿನಯದ ‘ಯಶೋದಾ’ ಬಿಡುಗಡೆ

samantha yashoda release 11th november

ಸಮಂತಾ ಅಭಿನಯದ ‘ಯಶೋದಾ’ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಪ್ರೇಕ್ಷಕರಿಗೆ ಹಲವು ದಿನಗಳಿಂದ ಇತ್ತು. ಈಗ ಬಿಡುಗಡೆ ದಿನಾಂಕವು ಕೊನೆಗೂ ಘೋಷಣೆಯಾಗಿದ್ದು, ನವೆಂಬರ್ 11ರಂದು ಜಗತ್ತಿನಾದ್ಯಂತೆ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ.samantha yashoda release 11th november

ಈ ಚಿತ್ರವನ್ನು ಶಿವಲೆಂಕ ಕೃಷ್ಣ ಪ್ರಸಾದ್ ಅವರು ತಮ್ಮ ಶ್ರೀದೇವಿ ಮೂವಿ ಪ್ರೊಡಕ್ಷನ್ಸ್ ಬ್ಯಾನರ್ನಡಿ 14ನೇ ಚಿತ್ರವಾಗಿ ನಿರ್ಮಿಸುತ್ತಿದ್ದರೆ, ಹರಿ-ಹರೀಶ್ ಅವರು ನಿರ್ದೇಶನ ಮಾಡಿದ್ದಾರೆ.samantha yashoda release 11th november

ಇದೊಂದು ಹೊಸ ಶೈಲಿಯ ಆಕ್ಷನ್ ಥ್ರಿಲ್ಲರ್ ಎನ್ನುವ ನಿರ್ಮಾಪಕ ಶಿವಲೆಂಕ ಕೃಷ್ಣಪ್ರಸಾದ್, ಈ ಚಿತ್ರದಲ್ಲಿ ಸಸ್ಪೆನ್ಸ್ ಮತ್ತು ಎಮೋಷನ್ಗಳು ಸಮವಾಗಿ ಬೆರೆತಿದ್ದು, ‘ಪ್ರೇಕ್ಷಕರನ್ನು ಸೀಟಿನಂಚಿನಲ್ಲಿ ಕೂರಿಸುವ ಶಕ್ತಿ ಹೊಂದಿದೆ. ಸಮಂತಾ ಈ ಚಿತ್ರದ ಆಕ್ಷನ್ ದೃಶ್ಯಗಳಿಗಾಗಿ ಅವರು ಬೆವರು ಮತ್ತು ರಕ್ತವನ್ನೇ ಹರಿಸಿದ್ದಾರೆ ಎಂದರೆ ತಪ್ಪಿಲ್ಲ. ಬರೀ ತೆಲುಗು ಅವತರಣಿಕೆಯಷ್ಟೇ ಅಲ್ಲ, ತಮಿಳಿನಲ್ಲೂ ಅವರು ಡಬ್ಬಿಂಗ್ ಮಾಡಿದ್ದಾರೆ. ಇನ್ನು. ಮಣಿಶರ್ಮ ಅವರ ಹಿನ್ನೆಲೆ ಸಂಗೀತ ಈ ಚಿತ್ರದ ಹೈಲೈಟ್ ಆಗಿ ಮೂಡಿಬಂದಿದೆ. ಈಗಾಗಲೇ ತೆಲುಗು ಚಿತ್ರದ ಅವತರಣಿಕೆಯು ಸೆನ್ಸಾರ್ ಆಗಿತ್ತು, ಸದ್ಯದ್ಲ್ಲೇ ಬೇರೆ ಭಾಷೆಗಳ ಸೆನ್ಸಾರ್ ಆಗಲಿದೆ. ತಾಂತ್ರಿಕ ಸೇರಿದಂತೆ ಯಾವುದೇ ವಿಷಯದಲ್ಲೂ ರಾಜಿಯಾಗದೇ, ಈ ಚಿತ್ರವನ್ನು ಅದ್ಧೂರಿ ಬಜೆಟ್ ನಿರ್ಮಿಸಲಾಗಿದೆ. 100ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ಮಾಡಲಾಗಿದ್ದು, ಹೊಸ ಶೈಲಿಯ ಸಿನಿಮಾಗಳಿಗೆ ಹಾತೊರೆಯುತ್ತಿರುವ ಪ್ರೇಕ್ಷಕರು ಈ ಚಿತ್ರವನ್ನು ಮೆಚ್ಚುತ್ತಾರೆ ಎಂಬ ನಿರೀಕ್ಷೆ ಇದೆ. ಯಶೋದಾ, ನವೆಂಬರ್ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ’ ಎನ್ನುತ್ತಾರೆ.samantha yashoda release 11th november

ಸಮಂತಾ ಜತೆಗೆ ಈ ಚಿತ್ರದಲ್ಲಿ ವರಲಕ್ಷ್ಮೀ ಶರತ್ಕುಮಾರ್, ಉನ್ನಿ ಮುಕುಂದನ್, ರಾವ್ ರಮೇಶ್, ಮುರಳಿ ಶರ್ಮ, ಸಂಪತ್ ರಾಜ್, ಶತ್ರು, ಮಧಿರಿಮಾ, ಕಲ್ಪಿಕಾ ಗಣೇಶ್, ದಿವ್ಯ ಶ್ರೀಪಾದ, ಪ್ರಿಯಾಂಕಾ ಶರ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
‘ಯಶೋದಾ’ ಚಿತ್ರಕ್ಕೆ ಎಂ. ಸುಕುಮಾರ್ ಛಾಯಾಗ್ರಹಣ ಮಾಡಿದ್ದು, ಪುಲಗಂ ಚಿನ್ನಾರಾಯಣ ಮತ್ತು ಡಾ ಚಲ್ಲ ಭಾಗ್ಯಲಕ್ಷ್ಮೀ ಅವರ ಸಂಭಾಷಣೆ ಮತ್ತು ರಾಮಜೋಗಯ್ಯ ಶಾಸ್ತ್ರಿ ಅವರ ಸಾಹಿತ್ಯ ಈ ಚಿತ್ರಕ್ಕಿದೆ.samantha yashoda release 11th november

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…