“ಕೊರಗಜ್ಜ” ಚಿತ್ರಕ್ಕೆ ಸ್ವತಃ ಕನ್ನಡದಲ್ಲಿಯೇ ಡಬ್ಬಿಂಗ್ ಮಾಡಿದ ಸಂಡೋಕನ್ ಖ್ಯಾತಿಯ ಹಾಲಿವುಡ್-ಬಾಲಿವುಡ್ ನಟ “ಕಬೀರ್ ಬೇಡಿ”

Sandokan fame Hollywood-Bollywood actor "Kabir Bedi" who dubbed for the movie "Koragajja" himself in Kannada.

ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಹಾಲಿವುಡ್-ಬಾಲಿವುಡ್ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ಧಿಯಾಗಿತ್ತು. ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರದಲ್ಲಿ ಬರುವ “ಉದ್ಯಾವರ ಅರಸರ” ಪಾತ್ರವನ್ನು ಕಬೀರ್ ಬೇಡಿ ಸಮರ್ಥವಾಗಿ ನಿಭಾಯಿಸಿದ್ದು ಮಾತ್ರವಲ್ಲದೆ ನಿರ್ದೇಶಕರ “ವಿಷುವಲ್ ಇಮೇಜಿನೇಷನ್”ನನ್ನು ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ.Sandokan fame Hollywood-Bollywood actor "Kabir Bedi" who dubbed for the movie "Koragajja" himself in Kannada.

ಕೇರಳದ ಕಾಸರಗೋಡು ಜಿಲ್ಲೆಯ ಉದ್ಯಾವರದಲ್ಲಿನ ರಾಷ್ಟ್ರೀಯ ಹೆದ್ದಾರಿಯಬಲ ಬದಿಯಲ್ಲಿ ಉದ್ಯಾವರ ಅರಸರ ಸಾನಿಧ್ಯ ವಿರುವ ಬಹಳ ದೊಡ್ಡ ದೈವಸ್ಥಾನವಿದೆ.”ಕೊರಗಜ್ಜ” ಸಿನಿಮಾದಲ್ಲಿ ಹಿರಿಯ ನಟಿ ಭವ್ಯರವರು ಉದ್ಯಾವರ ಅರಸರನ್ನು ಎದುರುಹಾಕಿಕೊಳ್ಳುವ “ಪಂಜಂದಾಯಿ” ಎನ್ನುವ (ಈಗ ದೈವವೆಂದು ಪೂಜೆಗೊಳಪಟ್ಟಿರುವ)ರಾಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಎರಡು ಪಾತ್ರಗಳು ರಣರಂಗದಲ್ಲಿ ಸಂಧಿಸುವ ರೋಚಕ ಘಟನೆಯನ್ನು ಐದು ಕ್ಯಾಮರಾಗಳಲ್ಲಿ ಚಿತ್ರೀಕರಿಸಿದ್ದು,ಇದು ಚಿತ್ರದ ಹೈಲೈಟ್ ಗಳಲ್ಲಿ ಒಂದು. ಶೂಟಿಂಗ್ ವೇಳೆ ಕಬೀರ್ ಬೇಡಿ ತನ್ನ ಪಾತ್ರಕ್ಕೆ ತಾನೇ ಡಬ್ಬಿಂಗ್ ಮಾಡುತ್ತೇನೆ ಎಂದಿದ್ದರು. ಆದರೆ ನಿರ್ದೇಶಕ ಸುಧೀರ್ ಅತ್ತಾವರ್ ರವರಿಗೆ ಕಬೀರ್ ಬೇಡಿ ಕನ್ನಡದಲ್ಲಿ ಸಂಭಾಷಣೆಯನ್ನು ಒಪ್ಪಿಸುತ್ತಾರೆ ಎನ್ನುವುದನ್ನು ಅಷ್ಟು ಸುಲಭದಲ್ಲಿ ಸ್ವೀಕರಿಸಲು ಸಾಧ್ಯವಿರಲಿಲ್ಲ. Sandokan fame Hollywood-Bollywood actor "Kabir Bedi" who dubbed for the movie "Koragajja" himself in Kannada.

ಕಾರಣ…ಬಾಲಿವುಡ್, ಹಾಲಿವುಡ್, ಯುರೋಪಿಯನ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದ ಅದರಲ್ಲೂ ಕನ್ನಡ-ತುಳು-ಮಲಯಾಳಂ ಭಾಷೆಗಳ ಸೊಗಡನ್ನು ಅರಿತು, ಅದರ ಏರಿಳಿತ ಮತ್ತು ಭಾವನೆಗಳನ್ನು ಪಾತ್ರಕ್ಕೆ ಅಳವಡಿಸಿಕೊಂಡು, ಗ್ರಾಮ್ಯ ಮತ್ತು ಸ್ವಾಭಾವಿಕ ಶೈಲಿಯಲ್ಲಿ ಧ್ವನಿಯನ್ನು ಏರಿಳಿತಗೊಳಿಸುವುದು ಅಷ್ಟು ಸುಲಭದ ವಿಚಾರವಾಗಿರಲಿಲ್ಲ.Sandokan fame Hollywood-Bollywood actor "Kabir Bedi" who dubbed for the movie "Koragajja" himself in Kannada.

ಆದರೆ ಕಬೀರ್ ಬೇಡಿ ಈ ಸವಾಲನ್ನು ಅತ್ಯಂತ ಸಮರ್ಪಕವಾಗಿ ಎದುರಿಸಿ, ತನ್ನ ಪಾತ್ರಕ್ಕೆ ಮುಂಬಾಯಿಅ ಪ್ರತಿಷ್ಟಿತ ಸ್ಟುಡಿಯೋ ಒಂದರಲ್ಲಿ ದಿನಕ್ಕೆ ಎರಡು-ಮೂರು ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ. ಕಾಂತಾರ” ನಂತರ ದೈವದ ಕಥೆಯಾಧಾರಿತ ಚಿತ್ರದ ಬಗ್ಗೆ ಹೆಚ್ಚು ಕುತೂಹಲಗೊಂಡಿರುವ ಮುಂಬಾಯಿಯ ಮಾಧ್ಯಮಗಳು ತ್ರಿವಿಕ್ರಮ ಸಾಪಲ್ಯ ರವರು ನಿರ್ಮಿಸುತ್ತಿರುವ ” ಈ “ಕೊರಗಜ್ಜ” ಸಿನಿಮಾಗೆ ಕಬೀರ್ ಬೇಡಿ ಡಬ್ಬಿಂಗ್ ಮಾಡುವ ವಿಚಾರವನ್ನು ದೊಡ್ಡ ಮಟ್ಟದ ಸುದ್ಧಿಯಾಗಿಸಿದೆ.Sandokan fame Hollywood-Bollywood actor "Kabir Bedi" who dubbed for the movie "Koragajja" himself in Kannada.

ಮೂರರಿಂದ ನಾಲ್ಕೈದು ಕ್ಯಾಮರಾಗಳನ್ನು ಬಳಸಿಕೊಂಡು ಚಿತ್ರೀಕರಿಸಿದ್ದ ಈ ಚಿತ್ರದ ಎಡಿಟಿಂಗ್ ಕೂಡಾ ಅತ್ಯಂತ ಸವಾಲಿನ ಕೆಲಸವಾಗಿತ್ತು. ಖ್ಯಾತ ಸಂಕಲನಕಾರ ಸುರೇಶ್ ಅರಸ್ ಜೊತೆ ವಿದ್ಯಾಧರ್ ಶೆಟ್ಟಿ ಕೂಡಾ ಸಂಕಲನಕಾರರಾಗಿ ಚಿತ್ರಕ್ಕೆ ದುಡಿದಿದ್ದಾರೆ. ಚಿತ್ರದ ಸೌಂಡ್ ಡಿಸೈನ್ ಮತ್ತು ಫ಼ಾಲಿ ಕಾರ್ಯಕ್ಕಾಗಿ ದೇಶದ ಪ್ರತಿಭಾನ್ವಿತ ಡಿಸೈನರ್ ಗಳು ಕೈ ಜೋಡಿಸುತ್ತಿದ್ದಾರೆ.ಮುಂಬಾಯಿ ಹಾಗೂ ವಿದೇಶಗಳಲ್ಲಿ ಈ ಕೆಲಸವನ್ನು ಮಾಡಲು ಈಗಾಗಲೇ ಕಾರ್ಯತಂತ್ರ ರೂಪಿಸಿಕೊಳ್ಳಲಾಗುತ್ತಿದೆ. ಜೊತೆಗೆ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿದ್ದ ಚಿತ್ರತಂಡವು ಮೈನವಿರೇಳಿಸುವ ಗ್ರಾಫಿಕ್ಸನ್ನು ಕ್ಲೈಮ್ಯಾಕ್ಸ್ ನಲ್ಲಿ ಅಳವಡಿಸಿಕೊಳ್ಳುತ್ತಿದೆ.
ಒಟ್ಟಾರೆ ಮಹತ್ವಾಕಾಂಕ್ಷೆಯ ಬಿಗ್ ಬಜೆಟ್ ನ “ಕೊರಗಜ್ಜ” ಸಿನಿಮಾದ ಮೇಕಿಂಗ್ ವಿಚಾರದಲ್ಲಿ ಎಲ್ಲೂ ಕಾಂಪ್ರಮೈಸ್ ಮಾಡಿಕೊಳ್ಳದೆ, ಚಿತ್ರದ ಬಗ್ಗೆ ಎಲ್ಲರ ನಿರೀಕ್ಷೆಯನ್ನು ಹೆಚ್ಚಿಸುತ್ತಿದೆ.Sandokan fame Hollywood-Bollywood actor "Kabir Bedi" who dubbed for the movie "Koragajja" himself in Kannada.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…