ಕ್ರೇಜಿಸ್ಟಾರ್ ಪುತ್ರನಿಗೆ ಸಲಗ ಸುಂದರಿ ನಾಯಕಿ..ವಿಕ್ರಮ್ ‘ಮುಧೋಳ್’ ಬಳಗ ಸೇರಿದ ಸಂಜನಾ ಆನಂದ್

Sanjana Anand of Vikram 'Mudhol' team

ಸಂಜನಾ‌ ಯಾನ…ವಿಕ್ರಮ್ ರವಿಚಂದ್ರನ್ ‘ಮುಧೋಳ್’ ಸಲಗ ಸುಂದರಿ ನಾಯಕಿ

ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ‌ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ‌ ಸಲಗ‌ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು ಅಂಗಳದಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜೊತೆ ರೋಮ್ಯಾನ್ಸ್ ಮಾಡಲು ಒಕೆ ಎಂದಿದ್ದಾರೆ.Sanjana Anand of Vikram 'Mudhol' team

‘ತ್ರಿವಿಕ್ರಮ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಬಂದ ಕ್ರೇಜಿಸ್ಟಾರ್‌ ರವಿಚಂದ್ರನ್‌ ಪುತ್ರ ವಿಕ್ರಮ್‌ ಈಗ ಎರಡನೇ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಮುಧೋಳ್ ಮೂಲಕ ಸಖತ್‌ ಮಾಸ್ ಅವತಾರ ತಾಳಿರುವ ವಿಕ್ಕಿಗೆ ನಾಯಕಿಯಾಗಿ ರಾಯಲ್ ಹುಡುಗಿ ನಟಿಸುತ್ತಿದ್ದಾರೆ.‌ಈ ಚಿತ್ರ ಸೆಟ್ಟೇರಿದಾಗಿನಿಂದಲೂ ಸಂಜನಾ ನಾಯಕಿ ಎಂಬ ವಿಷ್ಯ ಹರಿದಾಡಿತ್ತು. ಆದ್ರೆ ಚಿತ್ರತಂಡ ಮಾತ್ರ ಗುಟ್ಟುಬಿಟ್ಟುಕೊಟ್ಟಿರಲಿಲ್ಲ. ಸಲಗ ಸುಂದರಿ ಹುಟ್ಟುಹಬ್ಬದ ವಿಶೇಷವಾಗಿ‌‌ ಇಂದು ಚಿತ್ರತಂಡ ಸಮಾಚಾರವನ್ನು ಅಧಿಕೃತಗೊಳಿಸಿದೆ.Sanjana Anand of Vikram 'Mudhol' team

ವಿಕ್ರಮ್ ಮುಧೋಳ್ ಸಿನಿಮಾದ ನಾಯಕಿಯಾಗಿರುವ ಸಂಜನಾ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ.‌ ಇಲ್ಲಿವರೆಗೂ ಅವರು ನಟಿಸಿದ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೇ ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.Sanjana Anand of Vikram 'Mudhol' team

ಸಂಜನಾ ಆನಂದ್ ಮುಧೋಳ್ ಸಿನಿಮಾ ಜೊತೆಗೆ ದಿನಕರ್ ತೂಗುದೀಪ ನಿರ್ದೇಶನದ ರಾಯಲ್ ಹಾಗೂ ತೆಲುಗಿನ ಫುಲ್ ಬಾಟೆಲ್ ಎಂಬ ಚಿತ್ರಗಳ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಧನ್ವೀರ್ ಗೌಡ ನಟಿಸುತ್ತಿರುವ ಹಯಗ್ರೀವ್ ಗೂ ನಾಯಕಿಯಾಗಿರುವ ರಾಯಲ್ ಕ್ವೀನ್ ಸದ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…