ಸಂಜು…ಅಗಮ್ಯ ಪಯಣ ಪ್ರೀತಿಯ ಹೊಸ ಕಥನ

sanju kannada movie director yathiraj

ಪ್ರೀತಿಯ ಚೌಕಟ್ಟಿನೊಳಗೆ ಸಂಬಂಧಗಳ ಪಯಣ..ಪಯಣದ ದಾರಿಯಲ್ಲಿ ಬದುಕಿನ ಮೌಲ್ಯಗಳ ಅನಾವರಣ- ಹೀಗೆಂದವರು ನಿರ್ದೇಶಕ ಯತಿರಾಜ್ . ಪತ್ರಕರ್ತನಾಗಿ, ನಟನಾಗಿ ಇದೀಗ ನಿರ್ದೇಶಕನಾಗಿ ಹೆಚ್ಚು ಚಾಲ್ತಿಯಲ್ಲಿರುವ ಅವರು ತಮ್ಮ ಹೊಸ ಚಿತ್ರ “ಸಂಜು” ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.sanju kannada movie

‘ಮೈಸೂರಿನ ಸಂತೋಷ್ ಡಿ ಎಂ ನಿರ್ಮಿಸುತ್ತಿರುವ “ಸಂಜು” ಅಗಮ್ಯ ಪಯಣಿಗ.. ಇದೇ ತಿಂಗಳ 14 ರಿಂದ ಚಿತ್ರೀಕರಣ ಆರಂಭಿಸಲಿದೆ. ಇಲ್ಲಿ ನಾಯಕ ಸಾಮಾನ್ಯ ಜನರ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುತ್ತಾನೆ. ಆತನ ಬದುಕಿನಲ್ಲೂ ಸಾಕಷ್ಟು ಏರಿಳಿತಗಳ ತಲ್ಲಣಗಳಿವೆ. ನಾಯಕಿ ಸರಸ್ವತಿ ಬದುಕು ಕೂಡ ಇದಕ್ಕೆ ಹೊರತಾಗಿಲ್ಲ. ತತ್‌ಕ್ಷಣದ ನಿರ್ಧಾರಗಳು ನಮ್ಮ ಬದುಕಿನಲ್ಲಿ ಎಷ್ಟೆಲ್ಲಾ ಪರಿಣಾಮಗಳನ್ನು ಬೀರುತ್ತದೆ ಎಂಬುದನ್ನು ಮಡಿಕೇರಿ ಮತ್ತು ವಿರಾಜಪೇಟೆ ಸುತ್ತಮುತ್ತಲಿನ ಹಸಿರಿನ ಪರಿಸರದಲ್ಲಿ ಕಟ್ಟಿಕೊಡುವ ಪ್ರಯತ್ನ . ಅದಕ್ಕಾಗಿ ಮೂರ್ನಾಡುವಿನಲ್ಲಿ ಬಸ್ ಸ್ಟಾಪ್ ಮತ್ತು ಟೀ ಶಾಪಿನ ಸೆಟ್ ಕೂಡ ಹಾಕಲಾಗುತ್ತಿದೆ ಎಂದು ಚಿತ್ರದ ಕುರಿತು ಯತಿರಾಜ್ ಹೇಳಿದರು.sanju kannada movie

ಇನ್ನೂ ಚಿತ್ರದ ನಾಯಕನಾಗಿ ಮನ್ವೀತ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ‘ಅ್ಯಂಗರ್’ ಅನ್ನುವ ಸಿನಿಮಾದಲ್ಲಿ ನಟಿಸಿದ್ದ ಅವರಿಗೆ ‘ಸಂಜು’ ಎರಡನೇ ಚಿತ್ರ. ರಂಗಭೂಮಿಯ ನಂಟಿದ್ದರೂ ಪಾತ್ರದ ಪರಕಾಯ ಪ್ರವೇಶ ಪಡೆಯಲು ನಿರ್ದೇಶಕ ಜೊತೆಗೆ ಸತತ ತಾಲೀಮು ನಡೆಸಲಾಗುತ್ತಿದೆ ಎಂಬ ಮಾಹಿತಿ ನೀಡಿದರು. ಆರಂಭದಲ್ಲಿ ನಾಟಕವೊಂದರ ಡೈಲಾಗ್ ಮೂಲಕ ವೇದಿಕೆ ಏರಿದ ಮನ್ವೀತ್ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು.
ನಾಯಕಿಯಾಗಿ ನಟಿಸುತ್ತಿರುವ ರೇಖಾದಾಸ್ ಪುತ್ರಿ ಶ್ರಾವ್ಯ ‘ ಚಿತ್ರದಲ್ಲಿ ಸರಸ್ವತಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ .ಮೊದಲ ಹದಿನೈದು ದೃಶ್ಯಗಳಲ್ಲಿ ನನಗೆ ಮಾತುಗಳಿಲ್ಲ. ಕೇವಲ ಭಾವನೆಗಳನ್ನು ಮಾತ್ರ ವ್ಯಕ್ತಪಡಿಸಬೇಕಿದೆ. ಇದೊಂಥರ ವಿಭಿನ್ನ ಪ್ರಯೋಗ ‘ ಎಂದು ತಮ್ಮ ಪಾತ್ರದ ಕುರಿತು ಹೇಳಿಕೊಂಡರು.sanju kannada movie

ನಾಯಕನ ತಾಯಿಯಾಗಿ ಸಂಗೀತಾ, ನಾಯಕಿಯ ತಂದೆಯಾಗಿ ಬಲರಾಜವಾಡಿ ಹಾಗೂ ಕಾಮಿಡಿ ಕಿಲಾಡಿಗಳು ಸಂತು, ಕುರಿ ರಂಗ, ಬೌ ಬೌ ಜಯರಾಮ್, ಶಂಕರ್ ಭಟ್, ಕಾತ್ಯಾಯಿನಿ, ಮಿಥಾಲಿ, ಪ್ರಕಾಶ್ ಶಣಯ್, ಚೇತನ್ ರಾಜ್, ಮಂಜು ಕವಿ, ನಾಗರತ್ನ, ಫ್ರೆಂಚ್ ಬಿರಿಯಾನಿ,
ಫ್ರೆಂಚ್ ಬಿರಿಯಾನಿ ಖ್ಯಾತಿಯ ಜೂ.ಯೋಗಿಬಾಬು  ಮಹಂತೇಶ್ ಸೇರಿದಂತೆ ಹಲವಾರು ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಥ್ರಿಲ್ಲರ್ ಮಂಜು ಎರಡು ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡುತ್ತಿದ್ದಾರೆ.sanju kannada movie

ಸಂಗೀತ ನಿರ್ದೇಶಕ ವಿಜಯ್ ಹರಿತ್ಸ ‘ ಪ್ರೇಮ ಗೀತೆಯೊಂದನ್ನು ಜನಪದ ಶೈಲಿಯಲ್ಲಿ ಹೇಳುವ ಪ್ರಯತ್ನ ನಡೆಯುತ್ತಿದೆ’ ಎಂದರೆ, ಛಾಯಾಗ್ರಾಹಕ ವಿದ್ಯಾನಾಗೇಶ್ ನೆರೆದಿದ್ದವರ ಆಶೀರ್ವಾದ ಬೇಡಿದರು. ನಿರ್ಮಾಪಕರ ಪರವಾಗಿ ವೇದಿಕೆಯಲ್ಲಿದ್ದ ಅನಿಲ್ ಮತ್ತು ಪ್ರದೀಪ್ ‘ ನಿರ್ದೇಶಕರು ಹೇಳಿದ್ದನ್ನು ಕೊಡುವುದೇ ನಮ್ಮ ಕರ್ತವ್ಯ’ ಎಂದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…