ಬಿಡುಗಡೆಯಾಯ್ತು ಪ್ರೇಕ್ಷಕರನ್ನು ಬೆರಗಾಗಿಸುವಂಥ `ಸಾರಾಂಶ’ ಟ್ರೈಲರ್!

'saramsa' trailer has been released

'saramsa' trailer has been releasedಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಹಾಡುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಆ ಮೂಲಕ ಸಿನಿಮಾ ಮೇಲೆ ಮೂಡಿಕೊಂಡಿದ್ದ ಕುತೂಹಲ ತಣಿಸುವಂತೆ ಇದೀಗ ಟ್ರೈಲರ್ ಬಿಡುಗಡೆಗೊಂಡಿದೆ. ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ, ಸಪ್ತಸಾಗರದಾಚೆ ಎಲ್ಲೋ ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಸಾರಾಂಶ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಟ್ರೈಲರ್ ಮೂಡಿ ಬಂದಿರುವ ರೀತಿಯನ್ನು ಮೆಚ್ಚಿಕೊಳ್ಳುತ್ತಾ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಫೆಬ್ರವರಿ 15ರಂದು ತೆರೆಗಾಣಲಿದೆ. ‘saramsa’ trailer has been released'saramsa' trailer has been released

 

`ಸಾರಾಂಶ’ದ ಬಗೆಗಿನ ಒಂದಷ್ಟು ವಿಚಾರಗಳನ್ನು ಚಿತ್ರತಂಡ ಹಂತ ಹಂತವಾಗಿ ಜಾಹೀರು ಮಾಡಿತ್ತು. ಇದೀಗ ಒಂದಿಡೀ ಸಿನಿಮಾದ ಆಂತರ್ಯವನ್ನು ತೆರೆದಿಡುವಂಥಾ ಟ್ರೈಲರ್ ಲಾಂಚ್ ಆಗಿದೆ. ವರ್ಷಾಂತರಗಳ ಹಿಂದೆ ಬಿಡುಗಡೆಗೊಂಡು, ಇಂದಿಗೂ ಆ ಪ್ರಭೆ ಉಳಿಸಿಕೊಂಡಿರುವ ಲೂಸಿಯಾ ಚಿತ್ರತಂಡದ ಸದಸ್ಯರು ಈ ಪತ್ರಿಕಾಗೋಷ್ಠಿಯ ಪ್ರಮುಖ ಆಕರ್ಷಣೆಯಾಗಿದ್ದರು. ಶ್ರುತಿ ಹರಿಹರನ್, ಹೇಮಂತ್ ರಾವ್ ಮಾತ್ರವಲ್ಲದೇ ಈ ಚಿತ್ರದ ನಿರ್ದೇಶಕರಾದ ಸೂರ್ಯ ವಸಿಷ್ಠ ಕೂಡಾ ಲೂಸಿಯಾ ಭಾಗವಾಗಿದ್ದವರೆ. ಇವರೆಲ್ಲರ ಸಮ್ಮುಖದಲ್ಲಿ ಸಾರಾಂಶ ಟ್ರೈಲರ್ ಬಿಡುಗಡೆಗೊಂಡಿದೆ.'saramsa' trailer has been released

ಈ ಪತ್ರಿಕಾ ಗೋಷ್ಠಿಯಲ್ಲಿ ಶ್ರುತಿ ಹರಿಹರನ್, ದೀಪಕ್ ಸುಬ್ಮಣ್ಯ, ಸೂರ್ಯ ವಸಿಷ್ಠ, ಸಂಗೀತ ನಿರ್ದೇಶಕ ಉದಿತ್ ಹರಿತಾಸ್, ರವಿ ಭಟ್, ಶ್ವೇತಾ ಗುಪ್ತ ಮುಂತಾದವರು ಹಾಜರಿದ್ದರು. ಅಂದಹಾಗೆ, ಇದು ಈ ದಿನಮಾನಕ್ಕೆ ಅತ್ಯಂತ ಅಪರೂಪವೆಂಬಂಥಾ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಿತ್ರ. ನಿರ್ದೇಶಕ ಸೂರ್ಯ ವಸಿಷ್ಠ ಅವರೇ ಪ್ರಧಾನ ಪಾತ್ರಗಳಲ್ಲೊಂದಕ್ಕೆ ಜೀವ ತುಂಬಿದ್ದಾರೆ. ದೀಪಕ್ ಸುಬ್ರಮಣ್ಯ ವಿಶಿಷ್ಟ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲಿದ್ದಾರೆ. ಶ್ರುತಿ ಹರಿಹರನ್ ಮಾಯಾ ಎಂಬ ಪಾತ್ರವನ್ನು ಒಳಗಿಳಿಸಿಕೊಂಡಿದ್ದಾರೆ. ಈ ಎಲ್ಲ ಪಾತ್ರಗಳ ಝಲಕ್ಕುಗಳು ಸದರಿ ಟ್ರೈಲರ್ ನಲ್ಲಿ ಕಾಣಿಸಿಕೊಂಡಿವೆ.'saramsa' trailer has been released

ಈ ಸಿನಿಮಾದ ಎಲ್ಲ ಪಾತ್ರಗಳೂ ವಿಶೇಷವಾಗಿವೆ ಎಂಬುದಕ್ಕೆ ಈ ಟ್ರೈಲರ್ ನಲ್ಲಿ ಪುರಾವೆಗಳು ಸಿಗುತ್ತವೆ. ಅದರಲ್ಲೊಂದು ಪಾತ್ರವನ್ನು ಶ್ವೇತಾ ಗುಪ್ತ ನಿರ್ವಹಿಸಿದ್ದಾರೆ. ಕನ್ನಡತನದ ಬಗ್ಗೆ ಅತೀವ ಪ್ರೀತಿ ಆಸಕ್ತಿ ಇಟ್ಟುಕೊಂಡಿರೋ ಕನ್ನಡೇತರ ಬುಕ್ ಪಬ್ಲಿಷರ್ ಪಾತ್ರವಿದೆ. ಆ ಪಾತ್ರದ ಬಗ್ಗೆ ನಿರ್ದೇಶಕರು ಈ ಪತ್ರಿಕಾ ಗೋಷ್ಠಿಯಲ್ಲಿ ಒಂದಷ್ಟು ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಸದರಿ ಟ್ರೈಲರ್‍ನಲ್ಲಿ ಪ್ರಧಾನವಾಗಿ ಎರಡು ಬೊಂಬೆ ಪಾತ್ರಗಳು ನೋಡುಗರನ್ನು ಸೆಳೆದುಕೊಂಡಿವೆ. ಅದನ್ನು ರಾಮ್ ಪ್ರಸಾದ್ ಬಾಣಾವರ ಮತ್ತು ಸತೀಶ್ ಕುಮಾರ್ ನಿರ್ವಹಿಸಿದ್ದಾರೆ. ಅದು ಟ್ರೈಲರ್ ನ ಪ್ರಮುಖ ಆಕರ್ಷಣೆಯಾಗಿಯೂ ಗಮನ ಸೆಳೆಯುವಂತಿದೆ. ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಮತ್ತು ಕ್ಲಾಪ್ ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣ, ಉದಿತ್ ಹರಿತಾಸ್ ಸಂಗೀತ ನಿರ್ದೇಶನ, ಅಪರಾಜಿತ್ ಹಿನ್ನೆಲೆ ಸಂಗೀತ ಮತ್ತು ಪ್ರದೀಪ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ.

ಸಾರಾಂಶದ ಮೂಲಕ ಅನಂತ್ ಭಾರದ್ವಾಜ್ ಎಂಬ ಪ್ರತಿಭಾನ್ವಿತ ಛಾಯಾಗ್ರಾಹಕ ಪರಿಚಯವಾಗುತ್ತಿದ್ದಾರೆ. ಅವರ ಛಾಯಾಗ್ರಹಣ ಕೂಡಾ ಸಾರಾಂಶದ ಶಕ್ತಿಯಂತಿದೆ ಎಂಬುದು ಚಿತ್ರತಂಡದ ಭರವಸೆ…

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…