“ಸೀತಮ್ಮನ ಮಗ”ನಿಗೆ ಸೆನ್ಸಾರ್ ಆಯ್ತು.

ಪತ್ರಕರ್ತ ಯತಿರಾಜ್ ನಿರ್ದೇಶನದ “ಸೀತಮ್ಮನ ಮಗ” ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಪ್ರಮಾಣ ಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ.WhatsApp Image 2022 06 29 at 9.04.06 AM

ನಾನು ಈ ಹಿಂದೆ “ಕೆಂಪೇಗೌಡ” ಸಿನಿಮಾ ಸಂದರ್ಭದಲ್ಲಿ ಒಂದು ಕಥೆ ಸಿದ್ದ ಮಾಡಿಕೊಂಡಿದ್ದೆ. ಆ ಚಿತ್ರದಲ್ಲಿ ನಟಿಸಲು ಕಿಚ್ಚ ಸುದೀಪ್ ಅವರು ಒಪ್ಪಿ, ಆರು ದಿನಗಳ ಕಾಲ್ ಶೀಟ್ ಸಹ ನೀಡಿದ್ದರು. ಕಾರಣಾಂತರದಿಂದ ಅದು ಆಗಲಿಲ್ಲ. ಆನಂತರ ಈ ಚಿತ್ರದ ಕಥೆ ಸಿದ್ದವಾಯಿತು. ನನ್ನ ಸ್ನೇಹಿತನ ಅಂತ್ಯಕ್ರಿಯೆಗಾಗಿ ಹರಿಶ್ಚಂದ್ರ ಘಾಟ್ ಗೆ ಹೋಗಿದ್ದಾಗ ಹುಟ್ಟಿದ ಕಥೆಯಿದು. ತಾಯಿ-ಮಗನ ಬಾಂಧವ್ಯವೇ ಚಿತ್ರದ ಹೈಲೆಟ್. ನಾನು ಒಂದು ಪಾತ್ರ ಮಾಡಿದ್ದೀನಿ. ಸೀತಮ್ಮನಾಗಿ ಚೈತ್ರ ಶ್ರೀನಿವಾಸ್, ಮಗನಾಗಿ ಚರಣ್ ಕಾಸಲ ಅಭಿನಯಿಸಿದ್ದಾರೆ. ಸೋನು ಸಾಗರ, ಬುಲೆಟ್ ರಾಜು ಮುಂತಾದವರು ತಾರಾಬಳಗದಲ್ಲಿದ್ದಾರೆ. ಸ್ನೇಹಿತರಾದ ರಾಜಾ ನಾಯಕ್ ಅವರ ಮೂಲಕ ಮಂಜುನಾಥ್ ನಾಯಕ್ ಅವರ ಪರಿಚಯವಾಯಿತು. ಅವರು ನನ್ನ ಕಥೆ ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದರು. ಚಿತ್ರದುರ್ಗದ ಬಳಿಯ ಪಂಡರಹಳ್ಳಿಯಲ್ಲೇ ಚಿತ್ರೀಕರಣ ನಡೆಯಿತು. ಈಗ ಸೆನ್ಸಾರ್ ಮುಗಿದಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ನಮ್ಮ ಚಿತ್ರತಂಡಕ್ಕೆ ಹಾಗೂ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಲಹರಿ ವೇಲು ಹಾಗೂ ನಿರ್ಮಾಪಕ ಕೃಷ್ಣೇಗೌಡ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ಯತಿರಾಜ್.WhatsApp Image 2022 06 29 at 9.04.06 AM 1

ಈ ಚಿತ್ರ ಉತ್ತಮವಾಗಿ ಮೂಡಿಬರಲು ನಿರ್ದೇಶಕ ಯತಿರಾಜ್ ಕಾರಣ. ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಪ್ರಶಂಸೆ ದೊರಕಿರುವುದು ಸಂತೋಷ. ನಾನು ಕೂಡ ಶಾಲಾ ಶಿಕ್ಷಕನಾಗಿ ಕಾರ್ಯನಿರ್ವಹಿಸಿದವನು. ಚಿತ್ರದುರ್ಗದ ಶಾಲಾ ಮಕ್ಕಳಿಗೆ ಈ ಚಿತ್ರವನ್ನು ತೋರಿಸಲು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೀನಿ. ಅವರು ಒಪ್ಪಿಗೆ ನೀಡಿದ್ದಾರೆ ಎಂದರು ನಿರ್ಮಾಪಕ ಮಂಜುನಾಥ್ ನಾಯಕ್.WhatsApp Image 2022 06 29 at 9.04.05 AM

ಚಿತ್ರದಲ್ಲಿ ಅಭಿನಯಿಸಿರುವ ಚೈತ್ರ ಶ್ರೀನಿವಾಸ್, ಸೋನು ಸಾಗರ, ಚರಣ್ ಕಾಸಲ, ಬುಲೆಟ್ ರಾಜು ತಮ್ಮ ಪಾತ್ರದ ಕುರಿತು ಮಾತನಾಡಿದರು. ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು. ಟ್ರೇಲರ್ ಬಿಡುಗಡೆ ಮಾಡಿದ್ದ ಲಹರಿ ವೇಲು ಹಾಗೂ ಕೃಷ್ಣೇಗೌಡ ಅವರು “ಸೀತಮ್ಮನ ಮಗ” ನಿಗೆ ಶುಭ ಹಾರೈಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…