ಕಂಠೀರವ ಸ್ಟುಡಿಯೋದಲ್ಲಿ “ಶೇರ್” ಚಿತ್ರಕ್ಕೆ ಚಾಲನೆ. ಕಿರಣ್ ರಾಜ್ ಅಭಿನಯದ ಈ ಚಿತ್ರಕ್ಕೆ ಪ್ರಸಿದ್ಧ್ ನಿರ್ದೇಶನ.

SHERR Kiran Raj Kannada NEw Movie

“ಕನ್ನಡತಿ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, “ಬಡ್ಡೀಸ್” ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ “ಭರ್ಜರಿ ಗಂಡು” ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ.SHERR Kiran Raj Kannada Movie

ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ “ಶೇರ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಿರ್ಮಾಪಕ ಡಾ||ಸುದರ್ಶನ್ ಸುಂದರರಾಜ್ (ಬೀದರ್) ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಸಾಕಷ್ಟು ಗಣ್ಯರು ಮುಹೂರ್ತ ಸಮರಂಭಕ್ಕೆ ಆಗಮಿಸಿ ಶುಭ ಕೋರಿದರು.Share Kannada Movie Kiran Raj

“ಶೇರ್” ಪಕ್ಕಾ ಆಕ್ಷನ್ ಥ್ರಿಲ್ಲರ್ ಚಿತ್ರ. ಅನಾಥಾಶ್ರಮದಲ್ಲಿ ಹೆಚ್ಚಿನ ಕಥೆ ನಡೆಯುತ್ತದೆ. ಅಲ್ಲೊಬ್ಬ ರಾಜಕಾರಣಿ ಇರುತ್ತಾನೆ. ಎರಡು ಗುಂಪುಗಳೂ ಇರುತ್ತದೆ. ಒಂದು ಗುಂಪಿನವರು ಅನಾಥಾಶ್ರಮವನ್ನೇ ಅಡ್ಡ ಮಾಡಿಕೊಂಡಿರುತ್ತಾರೆ. ಅಲ್ಲಿ ಒಳ್ಳೆಯ ಗುಂಪು ಸಹ ಇರುತ್ತದೆ. ನಾಯಕ-ನಾಯಕಿ ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲೂ ನಮ್ಮ ಚಿತ್ರದ ಕಥೆ ಸಾಗುತ್ತದೆ.SHERR Kiran Raj Kannada Movie

“ಕಿರಣ್ ರಾಜ್ ಚಾಕೊಲೇಟ್ ಹೀರೋ ಅಂತ ಪ್ರಸಿದ್ದಿ. ಅವರಿಗೆ ರಗಡ್ ಲುಕ್ ಸರಿ ಹೊಂದುವುದೆ?” ಅಂತ ಅನೇಕರು ಕೇಳಿದರು. ಆದರೆ ಮಾಸ್ ಪಾತ್ರಕ್ಕೆ ಬೇಕಾದ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದವುಗಳನ್ನು ಕಿರಣ್ ರಾಜ್ ಅಭ್ಯಾಸ ಮಾಡಿದ್ದಾರೆ. ನನ್ನ ಹಾಗೂ ಕಿರಣ್ ರಾಜ್ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ “ಭರ್ಜರಿ ಗಂಡು” ಚಿತ್ರ ಸಹ ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ.SHERR Kiran Raj Kannada Movie

ಆ ಚಿತ್ರದಲ್ಲಿ ಭಾಗಿಯಾಗಿರುವ ಬಹುತೇಕ ತಂಡವೇ ಈ ಚಿತ್ರದಲ್ಲಿ ಮುಂದುವರೆಯಲಿದೆ. ಬೀದರ್ ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದೇ 22 ರಿಂದ‌ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರಸಿದ್ಧ್ “ಶೇರ್” ಬಗ್ಗೆ ಮಾಹಿತಿ ನೀಡಿದರು.Share Kannada Movie Kiran Raj

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ‌ ಚಿತ್ರದಲ್ಲಿ ನಟಿಸಲು ಖುಷಿಯಾಗಿದೆ. ಇದಕ್ಕಾಗಿ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದ ಕಲೆಗಳನ್ನು ಅಭ್ಯಾಸ ಮಾಡಿದ್ದೀನಿ. “ಭರ್ಜರಿ ಗಂಡು” ಚಿತ್ರದಲ್ಲೂ ಸಾಹಸ ಸನ್ನಿವೇಶಗಳು ಭರ್ಜರಿಯಾಗಿ ಮೂಡಿಬಂದಿದೆ ಎಂದು ನಾಯಕ ಕಿರಣ್ ರಾಜ್ ತಿಳಿಸಿದರು. ನಾನು‌ ಮೂಲತಃ ಬೀದರ್ ನವನು. ಅಲ್ಲೇ ವಕೀಲನಾಗಿ ಕಾರ್ಯ ನಿರ್ವಿಸುತ್ತಿದ್ದೇನೆ. ರಾಜಕೀಯದಲ್ಲೂ ಇದ್ದೀನಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದರು ನಿರ್ಮಾಪಕ ಸುದರ್ಶನ್ ಸುಂದರರಾಜ್.SHERR Kiran Raj Kannada Movie

ಚಿತ್ರದ ನಾಯಕಿ ಸುರೇಖ ಹಾಗೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತರುವ ತನೀಶಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ವೆಂಕಿ ಯು ಡಿ ವಿ ಸಂಕಲನ, ಕಿಟ್ಟಿ ಕೌಶಿಕ್ ಛಾಯಾಗ್ರಹಣದ ಬಗ್ಗೆ ಹಾಗೂ ಗುಮ್ಮಿನೇನಿ‌ ವಿಜಯ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…