ಆಗಸ್ಟ್ 26ಕ್ಕೆ “ಶಿವ 143” ಚಿತ್ರ ಬಿಡುಗಡೆ.

Shiva 143 | 4K Trailer | Dheeren Ramkumar | Manvitha Kamath

ಧೀರನ್ ರಾಮಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶ.

ನಟ ಸಾರ್ವಭೌಮ ಡಾ||ರಾಜಕುಮಾರ್ ಮೊಮ್ಮಗ ಧೀರನ್ ರಾಮಕುಮಾರ್ ನಾಯಕನಾಗಿ ನಟಿಸಿರುವ “ಶಿವ 143” ಚಿತ್ರ ಇದೇ ಆಗಸ್ಟ್ 26 ರಂದು‌ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡು ನೋಡುಗರ ಮನ ಗೆದ್ದಿದೆ. ನಾಯಕನ ಪರಿಚಯಿಸುವ ಟೀಸರ್ ಗೂ ಅಪಾರ ಜನಮನ್ನಣೆ ದೊರಕಿದೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಈ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.Shiva 143  Dheeren Ramkumar | Manvitha Kamath

ಇದು ಲಾಕ್ ಡೌನ್ ಪೂರ್ವದಲ್ಲೇ ತಯಾರಾದ ಸಿನಿಮಾ. ಕೊರೋನ ಕಾರಣದಿಂದ ಬಿಡುಗಡೆ ವಿಳಂಬವಾಯಿತು. ಆನಂತರ ದೊಡ್ಡ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಿದ್ದವಾಗಿದ್ದವು. ನಾವು ಸೂಕ್ತ ಸಮಯ ನೋಡಿ, ಇದೇ ಆಗಸ್ಟ್ 26 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದು
ರೌಡಿಸಂ ಸಿನಿಮಾ ಅಲ್ಲ. ವಿಭಿನ್ನ ಪ್ರೇಮಕಥೆಯ ಚಿತ್ರ. ಜಯಣ್ಣ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ನಿರ್ಮಾಪಕರು ಹಾಗೂ ಧೀರನ್ ಅವರ ಕುಟುಂಬದವರು ಕುಳಿತು, ಧೀರನ್ ಅವರಿಗೆ ಇಂತಹುದೇ ಕಥೆ ಇದ್ದರೆ ಚೆನ್ನ ಎಂದು ತಿರ್ಮಾನಿಸಿದ್ದರು. ನಾನು ಆನಂತರ ತಂಡ ಸೇರಿಕೊಂಡೆ. ಧೀರನ್ ಅವರಿಗೆ ಈ ಮಾಸ್ ಲುಕ್ ಸರಿ ಹೊಂದುವುದೊ, ಇಲ್ಲವೋ? ಎಂಬ ಯೋಚನೆಯಿತ್ತು. ಅವರ ನಟನೆ ನೋಡಿ ಅದು ದೂರಾಯಿತು. ನಾಯಕಿ ಮಾನ್ವಿತ ಕಾಮತ್ ಹಾಗೂ ಚರಣ್ ರಾಜ್ ಅವರ ಅಭಿನಯ‌ ಕೂಡ ತುಂಬಾ ಚೆನ್ನಾಗಿದೆ. ಸಾಧುಕೋಕಿಲ ಹಾಗೂ ಚಿಕ್ಕಣ್ಣ ಅವರ ಕಾಮಿಡಿ ಮೋಡಿ ಮಾಡಲಿದೆ ಎಂದು ನಿರ್ದೇಶಕ ಅನಿಲ್ ಕುಮಾರ್ ಚಿತ್ರದ ಬಗ್ಗೆ ವಿವರಣೆ ನೀಡಿದರು.Shiva 143  Dheeren Ramkumar | Manvitha Kamath

ನಾನು ನಮ್ಮ ಕುಟುಂಬದವರ ಬಳಿ ಈ ಸಿನಿಮಾ ಕಥೆ ಬಗ್ಗೆ ಚರ್ಚಿಸಿದಾಗ ನಿನಗೆ ಸರಿ ಹೊಂದುವುದಾದರೆ ಮಾಡು ಎಂದರು. ನನಗೂ ಈ ಕಥೆ ಇಷ್ಟವಾಗಿತ್ತು. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಕೊರೋನ ಕಾರಣದಿಂದ ಬಿಡುಗಡೆ ತಡವಾಗಿದೆ. ಶಿವಣ್ಣ ಮಾಮ ಹಾಗೂ ಗೀತಾ ಆಂಟಿ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗ ಭೇಟಿ‌ ನೀಡಿ ಶುಭ ಹಾರೈಸಿದ್ದರು. ರಾಘಣ್ಣ ಮಾಮ ಅವರ ಹಾರೈಕೆ ಸದಾ ಇದೆ. ಇನ್ನೂ ಯಾರ ಬಳಿಯು ಹೇಳದ ವಿಷಯವೊಂದು ಇಂದು ಹೇಳುತ್ತಿದ್ದೇನೆ. ಮೈಸೂರಿನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಅಲ್ಲೇ ಅಪ್ಪು ಮಾಮ‌ “ಜೇಮ್ಸ್” ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.Shiva 143  Dheeren Ramkumar | Manvitha Kamath

ಸಾಹಸ ನಿರ್ದೇಶಕ ರವಿವರ್ಮ ಅವರು ಎರಡೂ ಚಿತ್ರಗಳಿಗೂ ಸಾಹಸ ಸಂಯೋಜನೆ ಮಾಡುತ್ತಿದ್ದರು‌. ನಾನು ಪಾಲ್ಗೊಂಡ ಸಾಹಸ ದೃಶ್ಯವೊಂದರ ತುಣುಕನ್ನು ಅವರು, ಅಪ್ಪು ಮಾಮ ಅವರಿಗೆ ತೋರಿಸಿದರಂತೆ. ಅದನ್ನು ನೋಡಿದ ಅಪ್ಪು ಮಾಮ, ಸ್ನೇಹಿತರೊಬ್ಬರ ಬಳಿ ಅವನ ಕಣ್ಣು ನೋಡಿ ಎಷ್ಟು ಚೆನ್ನಾಗಿದೆ. ನಮ್ಮ ಕುಟುಂಬದಿಂದ ಒಳ್ಳೆಯ ಹೀರೋ ಬರುತ್ತಿದ್ದಾನೆ ಎಂದು ತುಂಬಾ ಸಂತೋಷಪಟ್ಟಿದ್ದರಂತೆ. ಈ ವಿಷಯವನ್ನು ನನಗೆ ಎಷ್ಟೋ ದಿನಗಳ ಬಳಿಕ ಆ ಸ್ನೇಹಿತರು ಹೇಳಿದರು. ಅಶ್ವಿನಿ ಆಂಟಿ ‌ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಅವರು ಬಿಡುಗಡೆ ಮಾಡಿಕೊಟ್ಟಿದ್ದು ನನಗೆ ಅಪ್ಪು ಮಾಮ ಬಿಡುಗಡೆ ಮಾಡಿದಷ್ಟೇ ಖುಷಿಯಾಗಿದೆ. ಅವರಿಗೆ ನನ್ನ ಧನ್ಯವಾದ ಎಂದರು ನಾಯಕ ಧೀರನ್. ಛಾಯಾಗ್ರಹಕ ಶಿವ ಛಾಯಾಗ್ರಹಣದ ಬಗ್ಗೆ ಮಾತನಾಡಿದರು. ಜಯಣ್ಣ, ಭೋಗೇಂದ್ರ ಹಾಗೂ ಡಾ||ಸೂರಿ ನಿರ್ಮಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.Shiva 143  Dheeren Ramkumar | Manvitha Kamath

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…