ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕರೇ ಸಾರಥಿ..

ಶಿವಣ್ಣ-ಸಚಿನ್ ಸಿನಿಮಾ ಟೈಟಲ್ ಲಾಂಚ್ ಗೆ ಡೇಟ್ ಫಿಕ್ಸ್

ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್ ಮಾಡಿ ಶಿವಣ್ಣ‌ನ‌ ಜನುಮದಿನಕ್ಕೆ ಶುಭಾಶಯ ಕೋರಿದೆ.shivanna new kannada movie

ಆಗಸ್ಟ್ ನಲ್ಲಿ ಟೈಟಲ್ ರಿವೀಲ್

ಮಹಾಭಾರತದ ವೀರದಲ್ಲಿ ಒಬ್ಬರಾದ ಅಶ್ವತ್ಥಾಮ ಸಾಹಸಗಾಥೆಯನ್ನು ಆಧಾರಿಸಿ ತಯಾರಾಗಲಿರುವ ಈ ಸಿನಿಮಾದ ಟೈಟಲ್ ನ್ನು ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ರಿವೀಲ್ ಆಗಲಿದೆ. ಟೈಟಲ್ ಬಳಿಕ ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ಕೊಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ. ಇದೊಂದು ಪಕ್ಕಾ ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.shivanna new kannada movie

ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಜೊತೆಗೆ ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆಯಂತೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…