ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ’ಯೂಟರ್ನ್’ ಬೆಡಗಿ…ವೆಂಕಟೇಶ್ ದಗ್ಗುಭಾಟಿ ನಟನೆಯ ‘ಸೈಂಧವ್’ಗೆ ಶ್ರದ್ದಾ ಶ್ರೀನಾಥ್ ನಾಯಕಿ

Shraddha Srinath is the female lead in Venkatesh Daggubati starrer Saindhav

Shraddha Srinath comes on board for Saindhav

ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ವಿಕ್ಟರಿ ವೆಂಕಟೇಶ್ ಗೆ ಶ್ರದ್ದಾ ನಾಯಕಿ
ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್ ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಗೆ ಕನ್ನಡತಿ ಶ್ರದ್ದಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ. ವಿಕ್ಟರಿಗೆ ವೆಂಕಟೇಶ್ ಗೆ ಜೋಡಿಯಾಗಿ ನಟಿಸ್ತಿರುವ ಮೂಗುತಿ ಸುಂದರಿಯ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ.Shraddha is the heroine for Victory Venkatesh saindhav

ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ದಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನದ ಪ್ರದರ್ಶಿಸಿದ್ದ ಶ್ರದ್ದಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಎಲ್ಲರ ಗಮನಸೆಳೆಯಲಿದ್ದಾರೆ.

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ. ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಪಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇತರ ಪಾತ್ರವರ್ಗ ರಿವೀಲ್ ಮಾಡಲಿರುವ ಚಿತ್ರತಂಡ, ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…