“ಸಿರಿ ಲಂಬೋದರ ವಿವಾಹ”ಕ್ಕೆ ಶುಭಕೋರಿದ ರಮೇಶ್ ಅರವಿಂದ್.

siri lambodara vivaha kannada movie ramesh arvindh

ಸೌರಭ್ ಕುಲಕರ್ಣಿ ನಿರ್ದೇಶನದ “ಸಿರಿ ಲಂಬೋದರ ವಿವಾಹ” (ಎಸ್ ಎಲ್ ವಿ) ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ವಿಭಿನ್ನವಾಗಿದ್ದು, A2 music ಮೂಲಕ ಬಿಡುಗಡೆಯಾಗಿದೆ.siri lambodara vivaha kannada  movie ramesh arvindh

ಸೇರಿ ನಮ್ಮ ಚಿತ್ರದ ಮುಹೂರ್ತ ನೆರವೇರಿತು. ಈಗ ಚಿತ್ರೀಕರಣ ಪೂರ್ಣವಾಗಿ, ಮೊದಲಪ್ರತಿ ಸಿದ್ದವಾಗಿದೆ. “ಸಿರಿ ಲಂಬೋದರ ವಿವಾಹ” ಕಮರ್ಷಿಯಲ್ ಎಂಟರ್ಟೈನ್ಮೆಂಟ್ ವಿತ್ ಎ ಸಸ್ಪೆನ್ಸ್ ಥ್ರಿಲ್ಲರ್ ಎನ್ನಬಹುದು. ಸಿರಿ ಹಾಗೂ ಲಂಬೋದರ ಈ ಚಿತ್ರದ ನಾಯಕ, ನಾಯಕಿ ಅಲ್ಲ. ಮತ್ತೆ “ಸಿರಿ ಹಾಗೂ ಲಂಬೋದರ” ಯಾರು ಎಂದು ತಿಳಿಯಲು ಚಿತ್ರ ನೋಡಬೇಕು. ರಂಗಭೂಮಿ ಕಲಾವಿದರೇ ಹೆಚ್ಚಾಗಿ ಈತನ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈಗ ಟೀಸರ್ ಬಿಡುಗಡೆ ಮಾಡಿದ್ದೇವೆ. ಇನ್ನೆರಡು ತಿಂಗಳಲ್ಲಿ ಚಿತ್ರವನ್ನು ನಿಮ್ಮ ಮುಂದೆ ತರುತ್ತೇವೆ. ಮತ್ತೊಂದು ಖುಷಿಯ ವಿಚಾರವೆಂದರೆ, ಡಿಸೆಂಬರ್ ನಲ್ಲಿ ಓಮನ್ ಹಾಗೂ ದುಬೈ ದೇಶಗಳಲ್ಲಿ ನಮ್ಮ ಚಿತ್ರದ ಪ್ರೀಮಿಯರ್ ನಡೆಯಲಿದೆ. ನಾನು ಸೇರಿದಂತೆ ಅನೇಕ ಸಿನಿಮಾಸಕ್ತರು ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೀವಿ. ಟೀಸರ್ ಬಡುಗಡೆ ಮಾಡಿಕೊಟ್ಟ ರಮೇಶ್ ಅರವಿಂದ್ ಅವರಿಗೆ ಧನ್ಯವಾದ ಎಂದರು ಸೌರಭ್ ಕುಲಕರ್ಣಿ.siri lambodara vivaha kannada  movie ramesh arvindh

“ಸಿರಿ ಲಂಬೋದರ ವಿವಾಹ” ಸರಳ, ಸುಂದರ ಹಾಗೂ ಕುತೂಹಲ ಕಾಯ್ದುಕೊಳ್ಳುವ ಚಿತ್ರವೆಂದರು ನಟ ಸುಂದರ್ ವೀಣಾ.

ನಾವು ಇಡೀ ತಂಡ ಮೂಲತಃ ರಂಗಭೂಮಿ ಅವರು.‌ ನಮ್ಮ ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಒಳ್ಳೆಯ ಚಿತ್ರ ಮಾಡಿರುವ ಖಷಿಯಿದೆ. ನಾನು ಈ ಚಿತ್ರದಲ್ಲಿ ವೆಡ್ಡಿಂಗ್ ಪ್ಲಾನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಅಂಜನ್ ಎ ಭಾರದ್ವಾಜ್.siri lambodara vivaha kannada  movie ramesh arvindh

ನಾನು ಈ ಹಿಂದೆ ಬಿ.ಸುರೇಶ್ ಅವರ “ದೇವರ ನಾಡಲ್ಲಿ” ಚಿತ್ರದಲ್ಲಿ ಅಭಿನಿಯಿಸಿದ್ದೆ. ಆನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸೌರಭ್ ಹಾಗೂ ತಂಡದವರು ಮಾಡಿರುವ ಕಥೆ ಚೆನ್ನಾಗಿದೆ. ನನ್ನ ಪಾತ್ರಕೂಡ ಅಷ್ಟೆ ಚೆನ್ನಾಗಿದೆ ಎನ್ನುತ್ತಾರೆ ನಾಯಕಿ ದಿಶಾ ರಮೇಶ್.siri lambodara vivaha kannada  movie ramesh arvindh

ಛಾಯಾಗ್ರಾಹಕ ಕಿಟ್ಟಿ ಕೌಶಿಕ್ , ಸಂಗೀತ ನಿರ್ದೇಶಕ ಸಂಘರ್ಷ್ ಕುಮಾರ್ ಹಾಗೂ ಕಾರ್ಯಕಾರಿ ನಿರ್ಮಾಪಕಿ ನಮ್ರತಾ ಚಿತ್ರದ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಿರಿಯ ನಟ ಮಂಡ್ಯ ರಮೇಶ್ ಚಿತ್ರತಂಡಕ್ಕೆ ಶುಭ ಕೋರಿದರು.

Versato ventures, pavamana creations, Fouress network selutions & Dhupada drushya ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.siri lambodara vivaha kannada  movie ramesh arvindh

ಅಂಜನ್ ಎ ಭಾರದ್ವಾಜ್, ದಿಶಾ ರಮೇಶ್, ರಾಜೇಶ್ ನಟರಂಗ, ಸುಂದರ್ ವೀಣಾ, ಪಿ.ಡಿ.ಸತೀಶ್ ಚಂದ್ರ, ಮಜಾಭಾರತದ ಶಿವು ಹಾಗೂ ಸುಶ್ಮಿತ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದ ಕಾಳೆ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…