‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್- ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿ ಸಿನಿಮಾ.

'Sita Circle Sri Krishnan Mane' movie first look release

'Sita Circle Sri Krishnan Mane' movie first look releaseಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತದೆ. ಹೊಸತನ, ಹೊಸ ಪ್ರಯೋಗದ ಜೊತೆಗೆ ಅಗಾಧ ಸಿನಿಮಾ ಪ್ರೀತಿಯಿಟ್ಟುಕೊಂಡ ಹಲವು ತಂಡಗಳು ಗಾಂದೀನಗರಕ್ಕೆ ಎಂಟ್ರಿ ಕೊಡುತ್ತಾರೆ. ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಾರೆ. ಅಂತಹದ್ದೇ ಹೊಸತನ, ಸಿನಿಮಾ ಪ್ರೀತಿಯಿರುವ ಚಿತ್ರತಂಡವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಇದೀಗ ಫಸ್ಟ್ ಲುಕ್ ಪೋಸ್ಟರ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.'Sita Circle Sri Krishnan Mane' movie first look release

ಆ ಚಿತ್ರದ ಹೆಸರೇ ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’. ಈ ರೀತಿಯ ವಿಭಿನ್ನ ಶೀರ್ಷಿಕೆಯ ಸಿನೆಮಾ ತನ್ನ ಪೋಸ್ಟರ್ ಮತ್ತು ಟೈಟಲ್ ಬಿಡುಗಡೆ ಮಾಡಿದೆ, ಎಲ್ಲಿಯ ಸೀತಾ..!? ಎಲ್ಲಿಯಾ ಕೃಷ್ಣ..!? ಯಾವುದು ಆ ಮನೆ!?, ಏನಿದರ ಮರ್ಮ!? ಎಂಬಂತೆ ಕುತೂಹಲಕಾರಿಯಾಗಿದೆ, ಕಾಮಿಡಿ ಥ್ರಿಲ್ಲರ್ ಡ್ರಾಮಾ ಹೊಂದಿರುವ ಈ ಸಿನಿಮಾವನ್ನು ಈಗಾಗಲೇ ಸಾಕಷ್ಟು ಸಿನಿಮಾಗಳಿಗೆ ಸಂಭಾಷಣೆ ಸಾಹಿತ್ಯ ಬರೆದಿರುವ ಅಭಿನಂದನ್ ದೇಶ್ ಪ್ರಿಯ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ವಿನಯ್ ಯುವರಾಜ್, ಮನೋಜ್ ಪುತ್ತೂರು, ರಕ್ಷಿತಾ ಅಭಿನಯಿಸಿದ್ದಾರೆ, ಅದಲ್ಲದೆ ಈ ಚಿತ್ರದಲ್ಲಿ ನವೀಂದ್ರ, ದತ್ತಣ್ಣ, ಮನ್ ದೀಪ್ ರಾಯ್, ಮಿಮಿಕ್ರಿ ಗೋಪಿ, ಅನಿಲ್ ಸಿದ್ದು, ಪ್ರಶಾಂತ್.ವೈ.ಎನ್, ರವಿ ಶಂಕರ್ ನಾಗ್, ಕೂಡ ಅಭಿನಯಿಸಿದ್ದಾರೆ.'Sita Circle Sri Krishnan Mane' movie first look release

ಈ ಚಿತ್ರ ಅಭಿನಂದನ್ ದೇಶ್ ಪ್ರಿಯ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ.'Sita Circle Sri Krishnan Mane' movie first look release

ಮಹಾನ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಪ್ರತೀತ್ ಅಕ್ಕಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಷ್ಣು ಪ್ರಸಾದ್, ವಿಶ್ವ ಪಾಟೀಲ್ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಸಿನಿಮಾವನ್ನು ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹೊನ್ನಾವರ, ಸುತ್ತಮುತ್ತ ಚಿತ್ರೀಕರಿಸಲಾಗಿದೆ. ರಾಘವೇಂದ್ರ. ವಿ ಸಂಗೀತ ನಿರ್ದೇಶನ, ಚೇತನ್ ರಾವ್ ಹಿನ್ನೆಲೆ ಸಂಗೀತ, ಉಜ್ವಲ್ ಚಂದ್ರ ಸಂಕಲನ, ಚಂದ್ರು ಬಂಡೆ ಸಾಹಸ ಚಿತ್ರಕ್ಕಿದೆ. ಫಸ್ಟ್ ಲುಕ್ ಮೂಲಕ ಸಿನಿಮಾ ಪ್ರಚಾರ ಆರಂಭಿಸಿರುವ ಚಿತ್ರತಂಡ ಇನ್ಮುಂದೆ ಒಂದೊಂದೇ ಸ್ಯಾಂಪಲ್ ಗಳ ಮೂಲಕ ಪ್ರೇಕ್ಷಕರ ಮನ ಸೆಳೆಯಲು ತಯಾರಿ ಮಾಡಿಕೊಂಡಿದೆ.'Sita Circle Sri Krishnan Mane' movie first look release

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…