ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ಕಿಡ್ಸ್ ಎಂಟ್ರಿ So Muthanna ಪ್ರೇಕ್ಷಕರಿಗೆ ಹೊಸ ಅನುಭವವನ್ನು ನೀಡುವುದಕ್ಕೆ ಶುರು ಮಾಡಿದೆ.
ಯುವ ರಾಜ್‌ಕುಮಾರ್ ಸಿನಿಮಾ ‘ಎಕ್ಕ’ ಬಳಿಕ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವೀತಿಯ ಪುತ್ರನ ಸರದಿ. ಪ್ರಣಂ ದೇವರಾಜ್ ಈಗಾಗಲೇ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದುವೇ ‘S/O ಮುತ್ತಣ್ಣ’.So Muthanna ಪ್ರಣಂ ದೇವರಾಜ್ ಹಾಗೂ ರಂಗಾಯಣ ತಂದೆ ಮಗನ ಪಾತ್ರದ ಕಾಣಿಸಿಕೊಂಡಿದ್ದಾರೆ.
ಪುರಾತನ ಫಿಲಂಸ್ ನಿರ್ಮಿಸುತ್ತಿರುವ ಈ ಸಿನಿಮಾವನ್ನು ಶ್ರೀಕಾಂತ್ ಹುಣಸೂರು ನಿರ್ದೇಶನ ಮಾಡಿದ್ದಾರೆ. ಇಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕನಾಗಿದ್ರೆ, ‘ದಿಯಾ’ ಖ್ಯಾತಿಯ ಖುಷಿ ರವಿ ನಾಯಕಿ. ಈ ಜೋಡಿ ಕಾಂಬಿನೇಷನ್ ಪ್ರೇಕ್ಷಕರಲ್ಲಿ ಕಿಕ್ ಕೊಟ್ಟಿದೆ. ಸದ್ಯ ಈ ಸಿನಿಮಾದ “”ಮಿಡ್ ರಸ್ತೆಲಿ” ಎಂಬ ಸಾಂಗ್ ವೈರಲ್ ಆಗುವುದಕ್ಕೆ ಶುರುವಾಗಿದೆ.
‘S/O ಮುತ್ತಣ್ಣ’ ಚಿತ್ರಕ್ಕಾಗಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿದ್ದಾರೆ.
ಸಂಜಿತ್ ಹೆಗ್ಡೆ ಹಾಡಿರುವ ಹಾಗೂ ಸಚಿನ್ ಬಸ್ರೂರ್ ಸಂಗೀತ ನೀಡಿರುವ ‘ಮಿಡ್ ನೈಟ್ ರಸ್ತೆಯಲ್ಲಿ” ಎಂಬ ಹಾಡು ಇತ್ತೀಚೆಗೆ ರಿಲೀಸ್ ಆಗಿದೆ. ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ತಿಂಸಯಿ ವೈರಲ್ ಆಗುತ್ತಿದೆ.. ಸಂಗೀತ ಪ್ರಿಯರು ಈ ಹಾಡನ್ನು ಮಚ್ಚಿಕೊಂಡಿದ್ದಾರೆ. ಹೀಗಾಗಿ ಸಿನಿಮಾ ನೋಡುವ ತವಕ ಅಭಿಮಾನಿಗಳಲ್ಲಿ ದುಪ್ಪಟ್ಟಾಗಿದೆ.
ಈ ವೇಳೆ ಸಿನಿಮಾ ತಂಡ ‘S/O ಮುತ್ತಣ್ಣ’ದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. “ನಮ್ಮ ಸಿನಿಮಾದಲ್ಲಿ ನಾಲ್ಕು ಹಾಡುಗಳಿದೆ. ಇಂದು ಎರಡನೇ ಹಾಡು ಬಿಡುಗಡೆಯಾಗಿದೆ. ಮೊದಲು ಹಾಡು.. ಕಮ್ಮಂಗಿ ನನ್ ಮಗನೇ.. ಸಾಂಗ್ ಕೂಡ ಹಿಟ್ ಲಿಸ್ಟ್ ಸೇರಿತ್ತು. . ಈಗ ಬಿಡುಗಡೆಯಾಗಿರುವ ಮಿಡ್‌ನೈಟ್ ರಸ್ತೆಯಲ್ಲಿ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಯೋಗರಾಜ್ ಭಟ್ ಅವರು ಸಾಹಿತ್ಯ ರಚಿಸಿದ್ದು, ಉಳಿದ ಎರಡು ಹಾಡುಗಳು ಸಹ ಸದ್ಯದಲ್ಲೇ ರಿಲೀಸ್ ಆಗುತ್ತೆ” ಎಂದು ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್.
ಈ ಸಿನಿಮಾದಲ್ಲಿ ಅಪ್ಪ – ಮಗನ ಬಾಂಧವ್ಯದ ಸೆಂಟಿಮೆಂಟ್ ದೃಶ್ಯಗಳಿವೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅಪ್ಪ-ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಂ ಈ ಸಿನಿಮಾದ ನಾಯಕನಾಗಿದ್ದರೆ, ಖುಷಿ ರವಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. “ಈಗ ಬಿಡುಗಡೆಯಾಗಿರುವ ಎರಡು ಹಾಡುಗಳನ್ನು ಯೋಗರಾಜ್ ಭಟ್ ಅವರೆ ಬರೆದಿದ್ದಾರೆ.
ಅಂದುಕೊಂಡ ಹಾಗೆ ಚಿತ್ರವನ್ನು ಪೂರ್ಣಗೊಳಿಸಲು ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ಈ ಸಿನಿಮಾದ ಹೆಚ್ಚಿನ ಭಾಗದ ಚಿತ್ರೀಕರಣ ವಾರಣಾಸಿಯಲ್ಲಿ ನಡೆದಿದೆ. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡಿದ್ದ ಡೈನಾಮಿಕ್ ಸ್ಟಾರ್ ದೇವರಾಜ್, ಇತ್ತೀಚಿಗೆ ಸಿನಿಮಾ ನೋಡಿ ಪ್ರಶಂಸೆ ನೀಡಿದ್ದು ಬಹಳ ಖುಷಿಯಾಗಿದೆ” ಎಂದು ನಿರ್ದೇಶಕ ಶ್ರೀಕಾಂತ್ ಹುಣಸೂರು ಹೇಳಿಕೊಂಡಿದ್ದಾರೆ.
“ನಾನು ಈ ಚಿತ್ರದಲ್ಲಿ ವೈದ್ಯೆ. ಸಾಕ್ಷಿ ನನ್ನ ಪಾತ್ರದ ಹೆಸರು. ಒಂದೊಳ್ಳೆ ಚಿತ್ರದಲ್ಲಿ ನಟಿಸಿದ ಖುಷಿಯಿದೆ” ಎಂದು ನಾಯಕಿ ಖುಷಿ ರವಿ ತಮ್ಮ ಅಭಿಪ್ರಾಯವನ್ನು ಹೊರ ಆಕಿದಗದ ಇದು ನಾನು ನಾಯಕಿಯಾಗಿ ನಟಿಸಿರುವ ಏಳನೇ ಚಿತ್ರ. ಬೇರೆ ಭಾಷೆಗಳಲ್ಲಿ ನನಗೆ ಅವಕಾಶ ಸಿಗುತ್ತಿದೆ.