“GST” ಕಟ್ಟಲು ಮುಂದಾದ ಸೃಜನ್ ಲೋಕೇಶ್

Srujan Lokesh came forward to build "GST".

ಸೃಜನ್ ಲೋಕೇಶ್ ಮೊದಲ ನಿರ್ದೇಶನದ ಚಿತ್ರಕ್ಕೆ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ .

ಖ್ಯಾತ ನಟ ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ “G S T” ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಆರಂಭ ಫಲಕ ತೋರಿದರು. ಗಿರಿಜಾ ಲೋಕೇಶ್ ಕ್ಯಾಮೆರಾ ಚಾಲನೆ ಮಾಡಿದರು. ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಸುಂದರರಾಜ್, ತಾರಾ, ಶೃತಿ, ನಿರೂಪ್ ಭಂಡಾರಿ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.Srujan Lokesh came forward to build "GST".

ಈ ಚಿತ್ರದಲ್ಲಿ ಮೂರು ವಿಶೇಷಗಳಿದೆ ಎಂದು ಮಾತು ಆರಂಭಿಸಿದ ಸೃಜನ್ ಲೋಕೇಶ್, ನನ್ನ ಲಕ್ಕಿ ನಂಬರ್ 7. ಮೊದಲು‌ ಇದು 2023 ಇದನ್ನು ಕೂಡಿಸಿದಾಗ ಏಳು ಬರುತ್ತದೆ. ನನ್ನ ನಟನೆಯ 25 ನೇ ಚಿತ್ರ. 2+5 =7.Srujan Lokesh came forward to build "GST".

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ 34ನೇ ಚಿತ್ರ. 3 + 4 ಕೂಡಿದಾಗ ಏಳಾಗುತ್ತದೆ. ಇನ್ನೊಂದು ವಿಶೇಷ, ನಮ್ಮ ತಾತನ ಚಿತ್ರದಲ್ಲಿ ನಮ್ಮ ಅಪ್ಪ ಬಾಲ ಕಲಾವಿದನಾಗಿ, ನಮ್ಮಪ್ಪನ ಚಿತ್ರದಲ್ಲಿ ನಾನು ಬಾಲ ಕಲಾವಿದನಾಗಿ ಅಭಿನಯಿಸಿದ್ದರು.‌ ಈಗ ನನ್ನ ಚಿತ್ರದಲ್ಲಿ ನನ್ನ ಮಗ ಮಾಸ್ಟರ್ ಸುಕೃತ್ ಬಾಲ ಕಲಾವಿದನಾಗಿ ನಟಿಸುತ್ತಿದ್ದಾನೆ. ನಾಲ್ಕನೇ ಜನರೇಶನ್ ಈ ರೀತಿ ನಟಿಸುತ್ತಿರುವುದು ಇದೇ ಮೊದಲು ಎನ್ನಬಹುದು. ಮತ್ತೊಂದು ವಿಶೇಷವೆಂದರೆ ನನ್ನ ಮೊದಲ ನಿರ್ದೇಶನದ ಚಿತ್ರದಲ್ಲೇ ನನ್ನ ತಾಯಿಗೆ ಆಕ್ಷನ್ ಕಟ್ ಹೇಳುತ್ತಿರುವುದು. ಈ ಎಲ್ಲಾ‌ ಕಾರಣಗಳಿಂದ ಈ ಚಿತ್ರ ನನಗೆ ವಿಶೇಷ. ಇನ್ನು “G S T” ಬಗ್ಗೆ ಹೇಳಬೇಕೆಂದರೆ, ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್” ಎಂಬ ಅಡಿಬರಹವಿದೆ. ಈ ವಾಕ್ಯ ಹೇಳುವಂತೆ “ದೆವ್ವಗಳಿಗೂ‌ ಸಮಸ್ಯೆಯಿದೆ” ಎಂಬುದು. ಆ‌ ಸಮಸ್ಯೆ ಏನು ಎಂಬುದನ್ನು ಚಿತ್ರದಲ್ಲೇ ನೋಡಬೇಕು.‌ ಈ ಚಿತ್ರದಲ್ಲಿ ಮನರಂಜನೆಯ ಮಹಾಪೂರ ಹರಿಯುವುದು ಗ್ಯಾರೆಂಟಿ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗಲಿದೆ.‌Srujan Lokesh came forward to build "GST".

ಸಂದೇಶ್ ಪ್ರೊಡಕ್ಷನ್ಸ್ ಜೊತೆ ಕೆಲಸ ಮಾಡುತ್ತಿರುವುದು ನನಗೆ ಹೆಮ್ಮೆ .
ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.Srujan Lokesh came forward to build "GST".

ಸೃಜನ್ , ನನ್ನ ಆತ್ಮೀಯ ಗೆಳೆಯ. ಗೆಳೆಯನಿಗಾಗಿ ಮಾಡುತ್ತಿರುವ ಸಿನಿಮಾವಿದು ಎಂದು ನಿರ್ಮಾಪಕ ಸಂದೇಶ್ ಎನ್ ತಿಳಿಸಿದರು. ಸಂದೇಶ್ ಪ್ರೊಡಕ್ಷನ್ಸ್ ನ ಸಂದೇಶ್ ನಾಗರಾಜ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಚಿತ್ರದಲ್ಲಿ ನಟಿಸುತ್ತಿರುವ ರಜನಿ ಭಾರದ್ವಾಜ್, ಗಿರಿಜಾ ಲೋಕೇಶ್, ಪ್ರಮೋದ್ ಶೆಟ್ಟಿ, ನಿವೇದಿತಾ, ತಬಲ ನಾಣಿ, ಅರವಿಂದ್ ರಾವ್, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಮುಂತಾದವರು, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಗೀತಸಾಹಿತಿ ಕವಿರಾಜ್, ಸಂಭಾಷಣೆಕಾರ ರಾಜಶೇಖರ್ ಮತ್ತು ತೇಜಸ್ವಿ ನಾಗ್ “G S T” ಕುರಿತು ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…