ರೌಡಿಸಂ ಕಥೆಗೆ “ಸ್ಟಾರ್” ಟೈಟಲ್

Star title for rowdism story

ನೂತನ ಚಿತ್ರಕ್ಕೆ ಶಾಸಕ ರವಿ ಸುಬ್ರಮಣ್ಯ ಚಾಲನೆ

ಈ ಹಿಂದೆ ಉಪೇಂದ್ರ ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ಓಂ, ಸ್ವಸ್ತಿಕ್, ಸೂಪರ್ ನಂಥ ಚಿತ್ರಗಳು ಮಾಡಿದ ದಾಖಲೆ ನಿಮಗೆಲ್ಲ ಗೊತ್ತೇ ಇದೆ. ಅದೇ ರೀತಿಯ ಟೈಟಲ್ ಇರುವ ಮತ್ತೊಂದು ಚಿತ್ರಕ್ಕೆ ಇತ್ತೀಚೆಗೆ ಚಾಲನೆ ದೊರೆತಿದೆ. ಅದರ ಹೆಸರು ಸ್ಟಾರ್.Star title for rowdism story

ನಕ್ಷತ್ರದ ಗುರುತನ್ನೇ ತಮ್ಮ ಚಿತ್ರದ ಶೀರ್ಷಿಕೆಯಾಗಿಟ್ಟುಕೊಂಡು ಚಿತ್ರ ಮಾಡಲು ಹೊರಟಿರುವವರು ನಿರ್ಮಾಪಕ ಶರತ್, ಅವರೇ ಚಿತ್ರದ ಹೀರೋ ಕೂಡ. ಈ ಚಿತ್ರಕ್ಕೆ ಪತಿ, ಪತ್ನಿ ಜಂಟಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ, ಶ್ರೀಮತಿ ಅನು ಹಾಗೂ ಮಂಜು ವಿಜಯಸೂರ್ಯ ಸೇರಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶ್ರೀನಿವಾಸ ನಗರದ ಕೆಂಪೇಗೌಡ ಆಟದ ಮೈದಾನದಲ್ಲಿ ನಡೆದ ಈ ಚಿತ್ರದ ಮುಹೂರ್ತ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ರವಿ ಸುಬ್ರಮಣ್ಯ ಅವರು ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.Star title for rowdism story

ಈ ಸಂದರ್ಭದಲ್ಲಿ ಚಿತ್ರದ ನಾಯಕ ಹಾಗೂ ನಿರ್ಮಾಪಕರೂ ಆದ ಶರತ್ ಮಾತನಾಡಿ ನಮ್ಮ ತಂದೆ ಪ್ರಕಾಶ್ ಫೈಟರ್ ಆಗಿ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅದೇ ನಾನು ಚಿತ್ರರಂಗಕ್ಕೆ ಬರಲು ಕಾರಣ, ಈ ಹಿಂದೆ ನಾನು ಪ್ಯಾಟಿ ಮಂದಿ ಕಾಡಿಗ್ ಬಂದ್ರು ಶೋನಲ್ಲಿ ಭಾಗವಹಿಸಿ ವಿನ್ನರ್ ಆಗಿದ್ದೆ, ಥೇಟರ್ ಹಿನ್ನಲೆಯೂ ನನಗಿದೆ. ಇದೊಂದು ರೌಡಿಸಂ ಬೇಸ್ ಸಬ್ಜೆಕ್ಟ್. ನಿರ್ದೇಶಕರು ತುಂಬಾ ಚೆನ್ನಾಗಿ ಪ್ಲಾನ್ ಮಾಡಿಕೊಂಡಿದ್ದಾರೆ, ವಿಭಿನ್ನವಾದ ಕಥೆ, ಕ್ಲೈಮ್ಯಾಕ್ಸ್ ನೋಡಿ ಹೊರಬರುವಾದ ಎಂಥವರ ಕಣ್ಣಲ್ಲಾದರೂ ನೀರು ಬರುತ್ತದೆ, ಚಿತ್ರದಲ್ಲಿ ಒಂದಷ್ಟು ನೈಜ ಘಟನೆಗಳನ್ನು ಹೇಳಿದರೂ, ಯಾರ ಹೆಸರನ್ನೂ ಸಹ ಬಳಸಿಕೊಳ್ಳುವುದಿಲ್ಲ ಎಂದು ಹೇಳಿದರು.Star title for rowdism story

ನಂತರ ನಿರ್ದೇಶಕ ಮಂಜು ವಿಜಯಸೂರ್ಯ ಮಾತನಾಡಿ ೧೬ ವರ್ಷಗಳ ಹಿಂದೆ ನಾನು ಒಬ್ಬ ಲೈಟ್ ಬಾಯ್ ಆಗಿ ಸಿನಿ ಜರ್ನಿ ಆರಂಭಿಸಿ, ಬರವಣೆಗೆಯಲ್ಲೇ ಹೆಚ್ಚು ಸಮಯ ಕಳೆದೆ. ಈಗ ನಿರ್ದೇಶಕನಾಗುತ್ತಿದ್ದೇನೆ. ನಮ್ಮ ಚಿತ್ರದ ಟೈಟಲ್ಲೇ ಕಥೆ ಹೇಳುತ್ತದೆ. ಇದು ಅಂಡರ್‌ ವರ್ಲ್ಡ್ ಸಬ್ಜೆಕ್ಟ್. ಹೀರೋಗೆ ನಾಯಕಿ ಹೇಗೆ ಬೆಂಬಲವಾಗಿ ನಿಲ್ತಾರೆ ಅಂತ ಹೇಳಿದ್ದೇವೆ. ನ್ಯಾಚುರಲ್ ಆದಂಥ ಫೈಟ್ಸ್ ಚಿತ್ರದಲ್ಲಿರುತ್ತವೆ. Star title for rowdism storyಇದೊಂದು ಲೋಕಲ್ ಸಬ್ಜೆಕ್ಟ್ ಆಗಿರುವುದರಿಂದ ಬೆಂಗಳೂರಿನಲ್ಲೇ ಹೆಚ್ಚು ಭಾಗದ ಶೂಟಿಂಗ್ ಮಾಡುತ್ತೇವೆ. ಹೊಡೆದಾಟಕ್ಕಿಂತ ಹೆಚ್ಚಾಗಿ ಥ್ರಿಲ್ಲರ್ ಮೇಲೆ ಹೆಚ್ಚು ಫೋಕಸ್ ಮಾಡಿದ್ದೇವೆ. ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿಕೊಂಡು ಹೋಗುವ ಕಂಟೆಂಟ್ ಎಂದು ಹೇಳಿದರು, ಚಿತ್ರದ ನಾಯಕಿಯಾಗಿ ನಟಿಸುತ್ತಿರುವ ನಟಿ ರಜತ ರಕ್ಷ ಮಾತನಾಡಿ ಈಹಿಂದೆ ಸದ್ದು ವಿಚಾರಣೆ ನಡೆಯುತ್ತಿದೆ, ತಲವಾರ್ ಸೇರಿ ಮೂರು ಚಿತ್ರಗಳಲ್ಲಿ ನಟಿಸಿದ್ದೆ.Star title for rowdism story

ನಾಯಕಿಯಾಗಿ ಇದೇ ಮೊದಲ ಚಿತ್ರ. ನಾಯಕನಿಗೆ ಸಪೋರ್ಟ್ ಆಗಿರುವಂಥ ಪಾತ್ರ, ತುಂಬಾ ಚೆನ್ನಾಗಿದೆ ಎಂದು ಹೇಳಿದರು. ಛಾಯಾಗ್ರಾಹಕ ಪ್ರವೀಣ್ ಎಂ, ಪ್ರಭು ಮಾತನಾಡಿ ಕಪಾಲ ನಂತರ ಮೂರನೇ ಚಿತ್ರ. ರಿಯಲಿಸ್ಟಿಕ್ ಆಗಿ ಸಿನಿಮಾವನ್ನು ಶೂಟ್ ಮಾಡೋಣ ಅಂತ ಪ್ಲಾನ್ ಮಾಡಿಕೊಂಡಿದ್ದೇನೆ, ನಿರ್ದೇಶಕರ ಜೊತೆ ಈ ಹಿಂದೆ ಶಾರ್ಟ್ ಫಿಲಂಸ್ ಮಾಡಿದ್ದೆ ಎಂದರು. ಮತ್ತೊಬ್ಬ ನಿರ್ದೇಶಕಿ ಅನು ಮಾತನಾಡಿ ಸ್ಕ್ರಿಪ್ಟ್ ಕೆಲಸದಲ್ಲಿ ನಾನು ಜಾಸ್ತಿ ಇನ್‌ವಾಲ್ ಆಗಿದ್ದೇನೆ. ರಿಯಲಿಸ್ಟಿಕ್ ಆಗಿ ಚಿತ್ರವನ್ನು ತೆರೆಮೇಲೆ ತರಬೇಕು ಎಂದುಕೊಂಡಿದ್ದೇವೆ ಎಂದರು. ಒಂದು ಪ್ಯಾಥೋ, ಒಂದು ಮಾಸ್ ಹಾಗೂ ೨ ಲವ್ ಸಾಂಗ್ ಸೇರಿ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ವಿಕಾಸ್ ವಸಿಷ್ಠ ಸಂಗೀತ ನೀಡುತ್ತಿದ್ದಾರೆ,

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…