“ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಮುಕ್ತಾಯ.

ಮುಹೂರ್ತದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಮುಕ್ತಾಯ.

ಚಿತ್ರೀಕರಣ ಆರಂಭದ ದಿನದಿಂದಲ್ಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ನೆಲಮಂಗಲದ ಬಳಿಯ ಅಂಕಿತ್ ವಿಸ್ತಾದಲ್ಲಿ ಕೊನೆಯ ಸನ್ನಿವೇಶವನ್ನು ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕ ದೀಪಕ್ ಅರಸ್ ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆದಿದ್ದಾರೆ. ಚಿತ್ರೀಕರಣ ಮುಕ್ತಾಯ ದಿನದ ಸಂಭ್ರಮವನ್ನು ಚಿತ್ರತಂಡ ಸಂತಸದಿಂದ ಆಚರಿಸಿದೆ.WhatsApp Image 2022 05 13 at 8.43.22 PM

ಗೋವಾ, ಬೆಂಗಳೂರು, ಮೈಸೂರು ಹಾಗೂ ಕಜಾಕಿಸ್ಥಾನದಲ್ಲಿ ‍55 ದಿನಗಳ ಚಿತ್ರೀಕರಣ ನಡೆದಿದೆ. ಅದ್ದೂರಿ ಸೆಟ್ ಗಳು ಈ ಚಿತ್ರದ ಪ್ರಮುಖ ಆಕರ್ಷಣೆ. ವಿಭಿನ್ನ ಪೋಸ್ಟರ್, ವಿನೂತನ ಪ್ರಚಾರದ ಮೂಲಕ “ಶುಗರ್ ಫ್ಯಾಕ್ಟರಿ” ಈಗಾಗಲ್ಲೇ ಸಿನಿರಸಿಕರಲ್ಲಿ ಕುತೂಹಲ ಹುಟ್ಟಿಸಿದೆ‌. “ಶುಗರ್ ಫ್ಯಾಕ್ಟರಿ” ಹೇಗಿರಬಹುದೆಂಬ? ಕೌತುಕ ಎಲ್ಲರಲ್ಲೂ ಮನೆಮಾಡಿದೆ. ಚಿತ್ರ ತೆರೆಯ ಮೇಲೆ ನೋಡುವ ಕಾತುರ ಹೆಚ್ಚಾಗಿದೆ.WhatsApp Image 2022 05 13 at 8.43.23 PM

ಚಿತ್ರೀಕರಣ ಮುಕ್ತಾಯವಾದ ಬೆನ್ನಲ್ಲೇ ಸಂಗೀತ ನಿರ್ದೇಶಕ ಕಬೀರ್ ರಫಿ “ಶುಗರ್ ಫ್ಯಾಕ್ಟರಿ” ಯನ್ನು ರೀರೆಕಾರ್ಡಿಂಗ್ ನಿಂದ ಶೃಂಗಾರಿಸುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿದ್ದು, ಸೋನಾಲ್ ಮಾಂಟೆರೊ, ಶಿಲ್ಪಾ ಶೆಟ್ಟಿ ಹಾಗೂ ಅದ್ವಿತಿ ಶೆಟ್ಟಿ ಮೂವರು “ಶುಗರ್ ಫ್ಯಾಕ್ಟರಿ” ಯ ನಾಯಕಿಯರು. ರಂಗಾಯಣ ರಘು, ಗೋವಿಂದೇ ಗೌಡ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ ಆರ್ ಅವರು ನಿರ್ಮಿಸುತ್ತಿದ್ದಾರೆ.WhatsApp Image 2022 05 13 at 8.43.22 PM 1

ಜಯಂತ್ ಕಾಯ್ಕಿಣಿ,ಯೋಗರಾಜ್ ಭಟ್, ಚೇತನ್ ಕುಮಾರ್, ಚಂದನ್ ಶೆಟ್ಟಿ, ಅರಸು ಅಂತಾರೆ, ರಾಘವೇಂದ್ರ ಕಾಮತ್, ಗೌಸ್ ಫಿರ್ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಯೋಗಾನಂದ್ ಹಾಗೂ ಚೇತನ್ ಕುಮಾರ್ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ ಹಾಗೂ ಅರ್ಜುನ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.‌WhatsApp Image 2022 05 13 at 8.43.23 PM 1

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…