“ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಶುಗರ್ ಫ್ಯಾಕ್ಟರಿ” ಟ್ರೇಲರ್..

Sugar Factory trailer released

“ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ‌. ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರ ಭರ್ಜರಿ ಯಶಸ್ವಿಯಾಗಲೆಂದು ಹಾರೈಸಿದರು. ಜಗದೀಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.Sugar Factory trailer released

“ಶುಗರ್ ಫ್ಯಾಕ್ಟರಿ” ಎಂದರೆ ಒಂದು ಪಬ್ ನ ಹೆಸರು ಎಂದು ಮಾತು ಆರಂಭಿಸಿದ ನಿರ್ದೇಶಕ ದೀಪಕ್ ಅರಸ್, ಚಿತ್ರದಲ್ಲಿ ಪಬ್ ಕೂಡ ಒಂದು ಪಾತ್ರ ಹಾಗಾಗಿ ನಮ್ಮ ಚಿತ್ರಕ್ಕೆ “ಶುಗರ್ ಫ್ಯಾಕ್ಟರಿ” ಎಂದು ಹೆಸರಿಟ್ಟಿದ್ದೇವೆ‌. ಹಾಗಂತ ನಮ್ಮ ಚಿತ್ರದಲ್ಲಿ ಬರಿ ಹಾಡು, ಕುಣಿತ, ಕುಡಿತ ಅಷ್ಟೇ ಇಲ್ಲ. ಇದೊಂದು ಸುಮಧುರ ಪ್ರೇಮ ಕಾವ್ಯ ಕೂಡ. ಆಕ್ಷನ್ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗುತ್ತದೆ. ಒಟ್ಟಿನಲ್ಲಿ ಈಗಿನ ಜನತೆ ಯಾವ ಮನೋರಂಜನೆ ಬಯಸುತ್ತಾರೊ ಅದೆಲ್ಲವೂ ನಮ್ಮ ಚಿತ್ರದಲ್ಲಿದೆ ಎಂದರು.

MALAVIKA MOHANAN ಕೇರಳ ಬ್ಯೂಟಿಯ ಗ್ಲಾಮರ್ ಲುಕ್‌ಗೆ ಮನಸೋಲದವರು ಯಾರು?

ಚಿತ್ರತಂಡದವರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಬಂದಿದೆ. ಇದೇ ನವೆಂಬರ್ 24ರಂದು ತೆರೆಗೆ ಬರುತ್ತಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ಆರ್ ಗಿರೀಶ್.Sugar Factory trailer released

“ಲವ್ ಮಾಕ್ಟೇಲ್” ಚಿತ್ರದ ನಂತರ ಕೇಳಿದ ಕಥೆ ಇದು. ನಾನು “ಲವ್ ಮಾಕ್ಟೇಲ್ ” ಚಿತ್ರದ ಆಡಿಶನ್ ನಲ್ಲಿ ಯುವಜನತೆ ಈಗ ಯಾವ ರೀತಿ ಕಥೆ ಇಷ್ಟ ಪಡುತ್ತಾರೆ ಎಂದು ಕೇಳುತ್ತಿದೆ‌. ಅದೇ ತರಹದ ಕಥೆಯನ್ನು ದೀಪಕ್ ಮಾಡಿದ್ದಾರೆ. ಚಿತ್ರ ಚೆನ್ನಾಗಿ ಬಂದಿದೆ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು.

ಮನವೇ ದೇಗುಲ ಮತ್ತೆ ಇಳೆಯೇ ಗುಡಿಯೆಂದೆ , ಬಾಳನುಳಿದಿನ್ನಾವ ದೇವನಲ್ಲೆಂದೆ

ನಾಯಕಿಯರಾದ ಸೋನಾಲ್ ಮೊಂತೆರೊ, ಅದ್ವಿತಿ ಶೆಟ್ಟಿ ಹಾಗೂ ರುಹಾನಿ ಶೆಟ್ಟಿ ತಮ್ಮ ಪಾತ್ರಗಳ ಕುರಿತು ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ಕಬೀರ್ ರಫಿ ಹಾಗೂ ನೃತ್ಯ ನಿರ್ದೇಶಕ ಧನಂಜಯ್ “ಶುಗರ್ ಫ್ಯಾಕ್ಟರಿ” ಬಗ್ಗೆ ಮಾತನಾಡಿದರು. ರಂಗಾಯಣ ರಘು ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…