ಹೊಸವರ್ಷಕ್ಕೆ “ಡ್ಯಾಶ್” ಹಾಡಿನ ಮೂಲಕ ಬಂದ “ಸೂತ್ರಧಾರಿ”.

"Sutradhari" came through the song "Dash" for the New Year.

ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಜನಮನಸೂರೆಗೊಂಡಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಜನಪ್ರಿಯ. ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ A2 music ಮೂಲಕ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಹೊಸವರ್ಷ ಆರಂಭವಾಗಲಿದೆ. ಹೊಸವರ್ಷದ ಸಂಭ್ರಮಾಚರಣೆಗೆ ಇದು ಅದ್ಭುತ ಗೀತೆಯಾಗಲಿದೆ."Sutradhari" came through the song "Dash" for the New Year.

“ಸೂತ್ರಧಾರಿ” ಸಿನಿಮಾದ “ಡ್ಯಾಶ್” ಹಾಡು ಇಂದು ಬಿಡುಗಡೆಯಾಗಿದೆ. ಹೊಸವರ್ಷಕ್ಕೆ ನಮ್ಮ ಚಿತ್ರತಂಡದಿಂದ ಈ ಹಾಡು ಉಡುಗೊರೆ. “ಡ್ಯಾಶ್” ಎಂದರೆ ಏನು ಅಂತ ಎಲ್ಲಾ ಕೇಳುತ್ತಿದ್ದಾರೆ? ಡ್ಯಾಶ್ ಎಂದರೆ ಖಾಲಿ ಜಾಗ. ಅಲ್ಲಿ ನೀವು ಏನು ಬೇಕಾದರೂ ಬರೆದುಕೊಳ್ಳಬಹುದು. ಈ ಹಾಡಿಗೆ ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಸಂಜನಾ ಆನಂದ್ ಈ ಹಾಡಿಗೆ ನನ್ನ ಜೊತೆ ಹೆಜ್ಜೆ ಹಾಕಿದ್ದಾರೆ. ನಿರ್ಮಾಪಕ ನವರಸನ್ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾನು ಹಾಗೂ ಚೇತನ್ ಕುಮಾರ್ ಈ ಹಾಡನ್ನು ಬರೆದಿದ್ದೇವೆ. ನಾನೇ ಸಂಗೀತ ನೀಡಿದ್ದೀನಿ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಒಂದುವರೆ ಲಕ್ಷಕ್ಕೂ ಅಧಿಕ ಜನರು ಈ ಹಾಡನ್ನು ವೀಕ್ಷಿಸಿದ್ದಾರೆ ಎಂದರು ಚಂದನ್ ಶೆಟ್ಟಿ.

ನಾನು ಮೊದಲ ಬಾರಿಗೆ ಸ್ಪೆಷಲ್ ಸಾಂಗ್ ಒಂದರಲ್ಲಿ ನಟಿಸಿದ್ದೇನೆ. ಚಂದನ್ ಶೆಟ್ಟಿ ಅವರ ಜೊತೆ ಡ್ಯಾನ್ಸ್ ಮಾಡಿರುವುದು ಖುಷಿಯಾಗಿದೆ. ಹಾಡು ಅದ್ಭುತವಾಗಿದೆ ಎಂದರು ಸಂಜನಾ ಆನಂದ್."Sutradhari" came through the song "Dash" for the New Year.

ಚಂದನ್ ಶೆಟ್ಟಿ ಅವರು ಹೊಸವರ್ಷಕ್ಕೆ ಹೊಸ ಹಾಡೊಂದನ್ನು ಬಿಡುಗಡೆ ಮಾಡುತ್ತಾರೆ. ಈ ಬಾರಿ ನಮ್ಮ ಚಿತ್ರದ ಹಾಡೊಂದನ್ನು ಹೊಸವರ್ಷಕ್ಕೆ ಬಿಡುಗಡೆ ಮಾಡುವ ಆಸೆಯಿತ್ತು. ಆದರೆ ಸಮಯ ಕಡಿಮೆ ಇತ್ತು. ಚಂದನ್ ಶೆಟ್ಟಿ ಅವರ ಬಳಿ ಈ ವಿಷಯ ಹೇಳಿದೆ. ಕೇವಲ ಎರಡು ದಿನಗಳ ಹಿಂದೆ ಈ ಹಾಡಿನ ಚಿತ್ರೀಕರಣವಾಗಿ ಈಗ ಬಿಡುಗಡೆಯಾಗಿದೆ. ಈ ಚಿತ್ರದ ನಾಯಕಿ ಅಪೂರ್ವ. ಆದರೆ ಈ ವಿಶೇಷ ಹಾಡಿಗೆ ಚಂದನ್ ಶೆಟ್ಟಿ ಅವರ ಜೊತೆ ಸಂಜನಾ ಆನಂದ್ ಹೆಜ್ಜೆ ಹಾಕಿದ್ದಾರೆ. ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದರು ನಿರ್ಮಾಪಕ ನವರಸನ್."Sutradhari" came through the song "Dash" for the New Year.

ನಿರ್ದೇಶಕ ಕಿರಣ್ ಕುಮಾರ್ ಹಾಡಿನ ಬಗ್ಗೆ ಮಾಹಿತಿ ನೀಡಿದರು. ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಸೇರಿದಂತೆ ಅನೇಕ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕರಾದ ಸಂಜಯ್ ಗೌಡ, ರವಿ ಗೌಡ, ಗೋವಿಂದರಾಜು, ರಾಜೇಶ್ ಮುಂತಾದವರು “ಸೂತ್ರಧಾರಿ” ಹಾಡಿಗೆ ಹಾರೈಸಿದರು. ಕಿರುತೆರೆ ಸೂಪರ್ ಸ್ಟಾರ್ ಎಂದು ಖ್ಯಾತರಾಗಿರುವ ಬೇಬಿ ವಂಶಿಕಾ ಕೆಲವು ಸಮಯ ಕಾರ್ಯಕ್ರಮದ ನಿರೂಪಣೆ ಮಾಡಿದ್ದು ವಿಶೇಷವಾಗಿತ್ತು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…