ನವೀರಾದ ಪ್ರೇಮಕಥೆ ಹೊತ್ತ ‘ಖಾಸಗಿ ಪುಟಗಳು’ ನವೆಂಬರ್ 18ಕ್ಕೆ ರಿಲೀಸ್

swetha d'souza kasagi putagalu release nov 18th

ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಟ್ರೇಲರ್ ಹಾಗೂ ಚೆಂದದ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ಇದೀಗ ಪ್ರೇಕ್ಷಕರ ಮುಂದೆ ಬರಲು ಸಿನಿಮಾ ರೆಡಿಯಾಗಿದ್ದು, ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗುತ್ತಿದೆ.swetha d'souza kasagi putagalu release nov 18th

‘ಖಾಸಗಿ ಪುಟಗಳು’ ಚಿತ್ರ ಸಂಪೂರ್ಣ ಹೊಸಬರ ಪ್ರಯತ್ನ. ಕಾಲೇಜು ಹುಡುಗನ್ನೊಬ್ಬನ ನವೀರಾದ ಪ್ರೇಮಕಥೆ ಹೊತ್ತ ಸಿನಿಮಾವಿದು. ಕಿರುಚಿತ್ರದಲ್ಲಿ ನಟಿಸಿ ಅನುಭವ ಇರುವ ವಿಶ್ವ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರದ ನಾಯಕಿ ಶ್ವೇತ ಡಿಸೋಜ ಮಾತನಾಡಿ ಹಿಂದಿಯಲ್ಲಿ ‘ವೈ’ ಎಂಬ ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ಕನ್ನಡ ಸಿನಿಮಾ. ಭೂಮಿ ಪಾತ್ರದಲ್ಲಿ ನಟಿಸಿದ್ದೇನೆ. ಇನೋಸೆಂಟ್ ಹಾಗೂ ಮೆಚೋರ್ಡ್ ಎರಡು ಶೇಡ್ ನಲ್ಲಿ ಕಾಣಸಿಗಲಿದ್ದೇನೆ ಎಂದು ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.swetha d'souza kasagi putagalu release nov 18th

ಕಿರುಚಿತ್ರಗಳಲ್ಲಿ ಅಭಿನಯಿಸುತ್ತಿದ್ದೆ ಸಿನಿಮಾಗಳಲ್ಲಿ ಅಭಿನಯಿಸಬೇಕು ಎಂಬ ಆಸೆಯಿತ್ತು. ನಾಯಕ ನಟನಾಗಿ ಇದು ನನ್ನ ಮೊದಲ ಸಿನಿಮಾ. ಒಂದು ತಂಡವಾಗಿ ಎಲ್ಲರೂ ಈ ಸಿನಿಮಾವನ್ನು ಮಾಡಿದ್ದೇವೆ. ನವೆಂಬರ್ 18ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಹರಸಬೇಕು ಎಂದು ನಾಯಕ ವಿಶ್ವ ಕೇಳಿಕೊಂಡ್ರು.

ಸಂಗೀತ ನಿರ್ದೇಶಕ ವಾಸುಕಿ ವೈಭವ್ ಮಾತನಾಡಿ ಸಂತೋಷ್ ಶ್ರೀಕಂಠಪ್ಪ ಅವರಿಗೆ ಇರುವ ಸಿನಿಮಾ ಪ್ರೀತಿ ನೋಡಿ ಈ ಚಿತ್ರವನ್ನು ಒಪ್ಪಿಕೊಂಡೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ, ಕೆ. ಕಲ್ಯಾಣ್, ಪ್ರಮೋದ್ ಮರವಂತೆ, ತ್ರಿಲೋಕ್ ತ್ರಿವಿಕ್ರಮ್ ಸಾಹಿತ್ಯ ಬರೆದಿದ್ದಾರೆ. ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ ಎಲ್ಲರೂ ಸಿನಿಮಾ ನೋಡಿ ಹೊಸಬರನ್ನು ಬೆಳೆಸಿ ಎಂದು ಕೇಳಿಕೊಂಡ್ರು.swetha d'souza kasagi putagalu release nov 18th

ಚೇತನ್ ದುರ್ಗಾ, ನಂದಕುಮಾರ್,ಶ್ರೀಧರ್, ನಿರೀಕ್ಷಾ ಶೆಟ್ಟಿ, ದಿನೇಶ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಎಸ್ ವಿ ಎಂ ಮೋಶನ್ ಪಿಕ್ಚರ್ ಬ್ಯಾನರ್ ನಡಿ ಮಂಜು ವಿ ರಾಜ್, ವೀಣಾ ವಿ ರಾಜ್, ಮಂಜುನಾಥ್ ಡಿ ಎಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ,ರಾಕೇಶ್ ಆಚಾರ್ಯ ಬಿ.ಜಿ.ಎಂ ಮಾಡಿದ್ದು, ಆಶಿಕ್ ಕುಸುಗೋಳಿ ಸಂಕಲನ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…