ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಮೂಲಕ ನಿಗಿನಿಗಿಸಿತು ಗಂಟುಮೂಟೆ ತಂಡದ `ಕೆಂಡ’!

`ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‍ಆರ್‍ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್‍ನ ಶೈಲಜಾನಾಗ್ ಮತ್ತು ಜಯಂತ್‍ಕಾಯ್ಕಣಿ ಆಗಮಿಸಿದ್ದರು. ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ.
ವಿಕಟ ಕವಿ ಯೋಗರಾಜಭಟ್ ಮಾತನಾಡಿ, ಎರಡನೇ ಲಾಕ್‍ಡೌನ್ ಸಂದರ್ಭದಲ್ಲಿ ರಿತ್ವಿಕ್‍ಕಾಯ್ಕಣಿ ಜೊತೆ ದೋಸ್ತಿ ಶುರುವಾಯಿತು. ಸದ್ಯದ ಪರಿಸ್ಥಿತಿಯಲ್ಲಿ ಹಾಡು ಇಲ್ಲದೆ ಸಿನಿಮಾ ಬಿಡುಗಡೆ ಅಂತ ಬಂದಾಗ ಎರಡು ತರದ ಅಪಾಯದಲ್ಲಿ ತಗಲಾಕೊಳ್ತಾರೆ. ಬೆಳಿಗ್ಗೆ ಸ್ನಾನದ ಮನೆಯಲ್ಲಿ ಇರುವಾಗ ನನ್ನ ಹಾಡು ಇಡೀ ಪ್ರಪಂಚ ತಿರುಗಿ ನೋಡುತ್ತೆ ಎನ್ನುವ ಕನಸು. ಹೊರಗೆ ಬಂದಾಗ ಯಾರಿಗೂ ಗೊತ್ತಿಲ್ಲವೆಂಬ ದುಗುಡ. ಒಂದು ವರ್ಷ ಕಷ್ಟಪಟ್ಟು ಚಿತ್ರ ಬಿಡುಗಡೆ ಮಾಡಿದ ನಂತರ, ಚಿತ್ರಮಂದಿರದಿಂದ ಆಚೆ ಬರುವ ಪ್ರೇಕ್ಷಕ ಮುಂದೆ ಯಾವುದು ಅಂತ ಕೇಳುತ್ತಾನೆ. ಆಗ ಅದಕ್ಕಿಂತಲೂ ಉತ್ತಮವಾದುದನ್ನು ಕೊಡಬೇಕು ಎನ್ನುವ ಛಲ ಹುಟ್ಟಿಕೊಳ್ಳುವುದು ಒಂಥರ ಡೇಂಜರ್. ನಾನು ಅಂದುಕೊಂಡಿದ್ದು ಏನು ಇಲ್ಲ. ಹಾಗೆ ನಾಲ್ಕು ಮಂದಿ ತಿರುಗಿ ನೋಡುವಂತೆ ಮಾಡೋದು ತುಂಬ ಕಷ್ಟದ ಕೆಲಸ. ಅಲ್ಲಿ ಸಕ್ಸಸ್ ಕಂಡರೆ, ಇಲ್ಲಿ ವಿರುದ್ಧವಾಗಿರುತ್ತದೆ. ಪ್ರತಿ ಸಿನಿಮಾವು ಇವರೆಡು ಡೇಂಜರ್‍ಗೆ ಬದುಕಬೇಕು. ಇವರೆಡು ಡೇಂಜರ್‍ಗಳ ಮಧ್ಯೆ ಇರೋದು ಸೃಜನಾತ್ಮಕ ಕ್ರಿಯೆ. ಇವೆಲ್ಲವು ನಿಮ್ಮೋಂದಿಗೆ ಸದಾ ಕಾಲ ಕಾಡಲಿ ಎಂದು ಮಾತಿಗೆ ವಿರಾಮ ಹಾಕಿದರು.Taaja Suddi Lyrical Video Song Kenda

ಹಾಡು ಅನ್ನೋದು ಮಾರ್ಕೆಟ್‍ದಲ್ಲಿ ಎಷ್ಟು ಇದೆ ಅಂದರೆ, ನೂರಾರು ಹಾಡುಗಳ ಮಧ್ಯೆ ನಮ್ಮ ಗೀತೆಯನ್ನು ಹುಡುಕುವುದು ಸವಾಲಿನ ಕೆಲಸ ಆಗಿರುತ್ತದೆ. ಅವುಗಳ ಮಧ್ಯೆ ನಮ್ಮ ಸಾಂಗ್ ಗುರುತಿಸಿಕೊಳ್ಳಬೇಕೆಂಬುದು ಪ್ರತಿಯೊಬ್ಬ ಸಂಗೀತ ನಿರ್ದೇಶಕನ ಆಸೆಯಾಗಿರುತ್ತದೆ. ಬರಹಗಾರನ ಶ್ರಮ ಗೆದ್ದಾಗ ಖುಷಿ ಕೊಡುತ್ತೆ. ಸೋತಾಗ ಜವಬ್ದಾರಿ ಹೆಚ್ದಾಗುತ್ತದೆ. ಇದರಲ್ಲಿರುವ ಮೂರು ಗೀತೆಗಳು ಯಾವುದೇ ಸಂಗೀತದ ಛಾಯೆ ಕಾಣಿಸುವುದಿಲ್ಲ. ಅದೇ ತಂಡದ ಮೊದಲ ಗೆಲುವು ಎನ್ನಬಹದು. ಅದನ್ನು ಆಲಿಸಿದಾಗ ಹೊಸತನ ಕಂಡುಬರುತ್ತದೆ. ಹೀಗೆ ನಿಮ್ಮಗಳ ವಿನೂತನ ಪ್ರಯತ್ನ ಯಶಸ್ವಿಯಾಗಲಿ ಅಂತಾರೆ ವಿ.ಹರಿಕೃಷ್ಣ.Taaja Suddi Lyrical Video Song Kenda

ಶೈಲಜಾನಾಗ್ ಹೇಳುವಂತೆ ಪ್ರತಿಯೊಂದು ಸಿನಿಮಾದ ಹಿಂದೆ ಶ್ರಮ ಇದ್ದೇ ಇರುತ್ತದೆ. ಯಾವುದೇ ನಿರ್ಮಾಪಕ ಹಣ ವಾಪಸ್ಸು ಬರಲೆಂದೇ ಬಂಡವಾಳ ಹೂಡುತ್ತಾನೆ. ಸುಮ್ಮನೆ ತಮಾಷೆಗೆ ಮಾಡುವುದಿಲ್ಲ. ಇದು ಕೂಡ ವ್ಯಾಪಾರ. ಬೇರೆ ಭಾಷೆಗಳ ನಡುವೆ ನಮ್ಮ ಚಿತ್ರ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ. ಆಗ ಮಾತ್ರ ಎಲ್ಲಾ ಕಡೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿತ್ತು.Taaja Suddi Lyrical Video Song Kenda

ಕೆಲವು ಸಲ ಹಾಡು ಬರೆಯುವಾಗ, ಈ ಸಾಲು ಎಲ್ಲೋ ಬಂದಿದೆಯೆಲ್ಲಾ ಅಂತ ಪಕ್ಕಕ್ಕೆ ಇಟ್ಟಿದ್ದುಂಟು. ಆಮೇಲೆ ನಾನೇ ಬರೆದುದಲ್ವ ಅಂತ ಗೊತ್ತಾಗುತ್ತದೆ. ತಂತ್ರಜ್ಞಾನ ಬದಲಾದಂತೆ ಮೂಲ ಹಾಡನ್ನು ಯಾರು ಕೇಳುವುದಿಲ್ಲ. ಕೇವಲ ನಾಲ್ಕು ಸಾಲುಗಳನ್ನು ಆಲಿಸುತ್ತಾರೆ. ಇದರಿಂದ ಕಲೆಯ ಮೇಲೆ ಜವಬ್ದಾರಿ ಮತ್ತು ಚ್ಯಾಲೆಂಜ್ ಬಹಳ ಜಾಸ್ತಿ ಇರುತ್ತದೆ. ಇದಕ್ಕಾಗಿ ತಂಡಕ್ಕೆ ಅಭಿನಂದನೆಗಳನ್ನು ಹೇಳ್ತನೆ. ಮಗ ತನಗೆ ಇಷ್ಟವಾದುದನ್ನು ಮಾಡಿದ್ದರಿಂದ ಖುಷಿಯಾಗಿದೆ. ನಿರ್ದೇಶಕರು ಹಾಡು ಬರೆದುಕೊಡಿ ಎಂದು ಕೇಳಿಕೊಂಡು ಬಂದಾಗ, ನನ್ನ ಹಾಡು ಹಿಟ್ ಆಗಲೆಂದು ಬರೆಯುತ್ತೇನೆ. ಅದರಿಂದ ನಿಮ್ಮ ಚಿತ್ರಕ್ಕೆ ಸಹಾಯವಾಗಲಿ. ಹಾಡು ಚಿತ್ರದ ನಿರೂಪಣೆಯ ಭಾಗವಾಗಿರುತ್ತದೆ. ಇಂತಹ ಹೊಸ ತಲೆಮಾರಿನ ಚಿತ್ರಗಳು ಜನರಿಗೆ ತಲುಪಲಿ ಎಂದು ಜಯಂತ್ ಕಾಯ್ಕಿಣಿ ಹೇಳಿದರು.Taaja Suddi Lyrical Video Song Kenda

ಬೆಂಗಳೂರಿನಂಥ ಮಹಾನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ. ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳು ಚಿತ್ರದಲ್ಲಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಥಾನಾಯಕ ಹೇಗೆ ಈ ವ್ಯವಸ್ಥೆಯ ಚಕ್ರವ್ಯೂಹಕ್ಕೆ ಸಿಲುಕುತ್ತಾನೆ. ಆತನನ್ನು ಪಟ್ಟಭದ್ರರು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ. ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಂತಹ ಸನ್ನಿವೇಶಗಳನ್ನು ತೋರಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆಯಂತೆ.Taaja Suddi Lyrical Video Song Kenda

ನಾಯಕನಾಗಿ ಬಿ.ವಿ.ಭರತ್, ಪ್ರಣವ್‍ಶ್ರೀಧರ್, ವಿನೋದ್‍ರವೀಂದ್ರನ್, ಗೋಪಾಲ್ ಕೃಷ್ಣ ದೇಶಪಾಂಡೆ ಉಳಿದಂತೆ ಬಹುತೇಕ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಶಬ್ಧ ಸಂಯೋಜನೆ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ, ಕೋಲಾರದಲ್ಲಿ ಚಿತ್ರೀಕರಣ ನಡೆಸಲಾಗಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…