ಧ್ರುವ ಸರ್ಜಾ ಬಿಡುಗಡೆ ಮಾಡಿದರು ವಿಭಿನ್ನ ಕಥೆಯ “ಠಾಣೆ” ಚಿತ್ರದ ಪೋಸ್ಟರ್.

Taane kannada movie poster release dhruva sarja

ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ “ಠಾಣೆ” ಚಿತ್ರದ ಪೋಸ್ಟರ್ ಧ್ರುವ ಸರ್ಜಾ ಅವರಿಂದ ಬಿಡುಗಡೆಯಾಗಿದೆ.

ಈ ಪೋಸ್ಟರ್ ನೋಡಿದರೆ ಇಡೀ ಚಿತ್ರ ನೋಡಿದ ಹಾಗೆ ಆಗುತ್ತಿದೆ. ಪೋಸ್ಟರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಅಷ್ಟೇ ಚೆನ್ನಾಗಿರುತ್ತದೆ ಎಂದು ಅನಿಸುತ್ತದೆ. ಚಿತ್ರ ಯಶಸ್ವಿಯಾಗಲಿ ಎಂದು ಧ್ರುವ ಸರ್ಜಾ ಹಾರೈಸಿದರು.Taane kannada movie

ಕಳೆದ ಹದಿನೈದು ವರ್ಷಗಳಿಂದ ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡಿರುವ, ಕೌರವ ವೆಂಕಟೇಶ್ ಸೇರಿದಂತೆ ಅನೇಕ ಸಾಹಸ ನಿರ್ದೇಶಕರ ಬಳಿ ಕೆಲಸ ಮಾಡಿರುವ ಪ್ರಕಸಂ ತಂಡದ ಪ್ರವೀಣ್ “ಠಾಣೆ” ಚಿತ್ರದ ನಾಯಕ. ಭರತ ನಾಟ್ಯ ಸೇರಿದಂತೆ ಅನೇಕ ಕಲೆಗಳಲ್ಲಿ ನೈಪುಣ್ಯತೆ ಪಡೆದಿರುವ ಮೈಸೂರಿನ ಹರಿಣಾಕ್ಷಿ ಈ ಚಿತ್ರದ ನಾಯಕಿ. ಪಿ.ಡಿ.ಸತೀಶ್, ರಾಜ್ ಬೆಳವಾಡಿ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.Taane kannada movie

ನಟ, ನಿರ್ದೇಶಕ ಕಾಶಿನಾಥ್, ರಾಮನಾಥ್ ಋಗ್ವೇದಿ, ಗುರುಪ್ರಸಾದ್ ಮುಂತಾದವರ ಬಳಿ ಕಾರ್ಯ ನಿರ್ವಹಿಸಿರುವ ಎಸ್ ಭಗತ್ ರಾಜ್ ಈ ಚಿತ್ರದ ನಿರ್ದೇಶಕರು. ನಾವು ಧರಿಸುವ ಸೂಟ್ ಮೇಲೆ ಒಂದು ಕಥೆ ರಚಿಸಿ, ನಿರ್ದೇಶಿಸಿರುವ “ದಿ ಸೂಟ್” ಭಗತ್ ರಾಜ್ ನಿರ್ದೇಶನದ ಮೊದಲ ಚಿತ್ರ. “ಠಾಣೆ” ಎರಡನೇ ಚಿತ್ರ.Taane kannada movie

“ಠಾಣೆ” 1962 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ನಗರಗಳು ಬೆಳೆದರು, ಸ್ಲಂಗಳು ಬೆಳೆಯುವುದಿಲ್ಲ. ಅದು ಬೆಳೆಯಲು ಕೆಲವರು ಬಿಡುವುದು ಇಲ್ಲ. ಸ್ಲಂ ನಲ್ಲೇ ಹುಟ್ಟಿಬೆಳೆದ ಯುವಕ‌ನೊಬ್ಬ ಅಲ್ಲಿನ ಜನರಿಗೆ ನ್ಯಾಯ ಕೊಡಿಸಲು ಹೋರಾಡುವ ಕಥೆಯಿದು. ಆ ಕಾಲಘಟ್ಟದ ಕಥೆಯಾಗಿರುವುದರಿಂದ ಬೆಂಗಳೂರಿನ ಹಳೆ ಬಡಾವಣೆಗಳಾದ ಶ್ರೀರಾಮಪುರ, ಶಿವಾಜಿ ನಗರ ಮುಂತಾದ ಕಡೆ ಹಳೆಯ ಜಾಗಗಳನ್ನು ಹುಡುಕಿ ಚಿತ್ರೀಕರಣ ಮಾಡಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಎರಡು ಸುಮಧುರ ಹಾಡುಗಳಿಗೆ ಮಾನಸ ಹೊಳ್ಳ ಸಂಗೀತ ನೀಡಿದ್ದಾರೆ. ಸಾಗರದ ಪ್ರಶಾಂತ್ ಸಾಗರ್ ಛಾಯಾಗ್ರಹಣ, ಹಿರಿಯ ಸಂಕಲನಕಾರ ಸುರೇಶ್ ಅರಸ್ ಸಂಕಲನ, ಪ್ರವೀಣ್ ಜಾನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಕೌರವ ವೆಂಕಟೇಶ್ ಹಾಗೂ ಟೈಗರ್ ಶಿವ ಸಾಹಸ ಸಂಯೋಜನೆಯಲ್ಲಿ ಐದು ಸಾಹಸ ಸನ್ನಿವೇಶಗಳು ಮೂಡಿಬಂದಿದೆ. ನಾಯಕ ಪ್ರವೀಣ್ ಅವರಿಗೂ ಸಾಹಸ ಸಂಯೋಜನೆ ಮಾಡಿ ಅನುಭವವಿರುವುದರಿಂದ ಅವರ ಅಭಿನಯದಲ್ಲಿ ಸಾಹಸ ಸನ್ನಿವೇಶಗಳು ಅದ್ಭುತವಾಗಿ ಮೂಡಿಬಂದಿದೆ.Taane kannada movie

“ಠಾಣೆ” ಚಿತ್ರದಲ್ಲಿ ಪ್ರವೀಣ್, ಕಾಳಿ ಎಂಬ ಪಾತ್ರದ ಮೂಲಕ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. C/O ಶ್ರೀರಾಮಪುರ ಎಂಬ ಅಡಿಬರಹ ಈ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…