ನಟ ದೇವರಾಜ್ ಅವರಿಂದ ಬಿಡುಗಡೆಯಾಯಿತು “ಪ್ರಜಾರಾಜ್ಯ”ಚಿತ್ರದ ಟೀಸರ್.

Teaser of movie "Prajarajya" was released by actor Devaraj.

ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ” ಪ್ರಜಾರಾಜ್ಯ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ.Teaser of movie "Prajarajya" was released by actor Devaraj.

ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಟೀಸರ್ ಚೆನ್ನಾಗಿದೆ. ಇನ್ನು, ಈ ಚಿತ್ರದ ನಿರ್ಮಾಪಕರಾದ ವರದರಾಜು ಅವರು ವೈದ್ಯರಾಗಿದ್ದು, ಸಾಮಾಜಿಕ ಕಾಳಜಿಯಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ದೇವರಾಜ್ ಹಾರೈಸಿದರು.Teaser of movie "Prajarajya" was released by actor Devaraj.

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ. ನಮ್ಮ ತಾತಂದಿರ ಕಾಲದಲ್ಲಿ ಸ್ವಾತಂತ್ರ್ಯ ಬಂದ ರಜತ ಮಹೋತ್ಸವ ಆಚರಿಸಿದರು. ನಮ್ಮ ತಂದೆಯ ಕಾಲದವರು ಸುವರ್ಣ ಮಹೋತ್ಸವ ಆಚರಣೆ ಮಾಡಿದರು. ನಾವು ಈಗ ‍ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಇಷ್ಟು ವರ್ಷವಾದರೂ ನಾವು ಯೋಚಿಸುವುದು ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಅಂತ? ಆದರೆ ನಮಗೆ ಬೇಕಾದ ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ನಾವು ಯೋಚಿಸಿಯೇ ಇಲ್ಲ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹೇಳಿರುವುದು ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ಯೋಚಿಸಿ ಎಂದು. ನಾವು ಅದರ ಬಗ್ಗೆ ಯೋಚಸುತ್ತಲೇ ಇಲ್ಲ. ಎಂಬ ಪ್ರಧಾನ ಅಂಶದೊಂದಿಗೆ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ನೋಡಿ, ದೇಶದ ಪ್ರಜೆಗಳಾಗಿ ನಮ್ಮ ಕರ್ತವ್ಯವೇನು? ಎಂದು ಎಲ್ಲರೂ ತಿಳಿಯಬಹುದು ಎಂದು ನಿರ್ಮಾಪಕ ಹಾಗು ನಟ ಡಾ||ವರದರಾಜು ಚಿತ್ರದ ಕುರಿತು ಮಾಹಿತಿ ನೀಡಿದರು.Teaser of movie "Prajarajya" was released by actor Devaraj.

ಉತ್ತಮ ಕಥೆಯುಳ್ಳ ಚಿತ್ರ, ಎಲ್ಲರ ಸಹಕಾರದಿಂದ ಉತ್ತಮವಾಗಿ ಬಂದಿದೆ. ನಾನು ಈ ಚಿತ್ರದಲ್ಲಿ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ – ನಾಯಕ ವಿಜಯ್ ಭಾರ್ಗವ. ಚಿತ್ರದಲ್ಲಿ ಐದು ಹಾಡುಗಳಿದೆ. ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ವಿಜಯ್ ಭಾರ್ಗವ ಬರೆದಿರುವ ಹಾಡುಗಳನ್ನು ರಿಯಲ್ ಸ್ಟಾರ್ ಉಪೇಂದ್ರ, ವಿಜಯ್ ಪ್ರಕಾಶ್ ಮುಂತಾದ ಖ್ಯಾತ ಗಾಯಕರು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹೇಳಿದರು.Teaser of movie "Prajarajya" was released by actor Devaraj.

ಚಿತ್ರದಲ್ಲಿ ನಟಿಸಿರುವ ದಿವ್ಯ, ಮೀಸೆ ಪ್ರಕಾಶ್, ಎಸ್ಕಾರ್ಟ್ ಶ್ರೀನಿವಾಸ್ ಶ್ರೀನಿವಾಸ್, ಚಿಕ್ಕ ಹೆಜ್ಜಾಜಿ‌ ಮಹದೇವ್, ಅಮೂಲ್ಯ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರ್ದೇಶಕ ಮಹೇಶ್ ಕುಮಾರ್, ಒಕ್ಕಲಿಗ ಸಂಘದ ನಿರ್ದೇಶಕರಾದ ಡಿ.ಕೆ.ರಮೇಶ್, ನಿರ್ಮಾಣ ನಿರ್ವಾಹಕ ರವಿಶಂಕರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ, ಚಿತ್ರಕ್ಕೆ ಶುಭ ಕೋರಿದರು.Teaser of movie "Prajarajya" was released by actor Devaraj.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…