‘ತಂಗಲಾನ್’ ಚಿತ್ರಕ್ಕೆ ಜೊತೆಯಾದ ನಟ ವಿಕ್ರಮ್ ಮತ್ತು ನಿರ್ದೇಶಕ ಪ. ರಂಜಿತ್

Thangalaan Title Announcement | Chiyaan Vikram | Pa Ranjith

ಚಿಯಾನ್ ವಿಕ್ರಮ್ ಅಭಿನಯದ, ಪ. ರಂಜಿತ್ ನಿರ್ದೇಶನದ ಹೊಸ ಚಿತ್ರಕ್ಕೆ ಕೊನೆಗೂ ಟೈಟಲ್ ಸಿಕ್ಕಿದೆ. ಈ ಚಿತ್ರಕ್ಕೆ ‘ತಂಗಲಾನ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ. ಈ ಹಿಂದೆ ರಜನಿಕಾಂತ್ ಅಭಿನಯದ ಕಬಾಲಿ, ಕಾಲ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಪ. ರಂಜಿತ್, ವಿಕ್ರಮ್ ಅಭಿನಯದಲ್ಲಿ ಕೋಲಾರ ಗೋಲ್ಡ್ ಫೀಲ್ಡ್ ಹಿನ್ನೆಲೆಯಲ್ಲಿ ಒಂದು ಚಿತ್ರ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಈ ಚಿತ್ರ ಈಗ ಅಧಿಕೃತವಾಗಿರುವುದಷ್ಟೇ ಅಲ್ಲ, ಸೋಮವಾರ ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದ ಟೈಟಲ್ ಟೀಸರ್ ಸಹ ಅನಾವರಣಗೊಂಡಿದೆ.Thangalaan Title Announcement | Chiyaan Vikram | Pa Ranjith

‘ತಂಗಲಾನ್’ ಚಿತ್ರದಲ್ಲಿ ವಿಕ್ರಮ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹಬ್ಬದ ದಿನ ಅವರ ಚಿತ್ರವೊಂದರ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ಈ ಚಿತ್ರದಲ್ಲಿ ವಿಕ್ರಮ್ ಜೊತೆಗೆ ಪಾರ್ವತಿ, ಮಾಳವಿಕಾ ಮೋಹನನ್, ಪಶುಪತಿ, ಹರಿಕೃಷ್ಣನ್, ಅನ್ಬುದುರೈ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ. ಈ ಚಿತ್ರಕ್ಕೆ ಎ. ಕಿಶೋರ್ ಛಾಯಾಗ್ರಹಣ ಮಾಡುತ್ತಿದ್ದು, ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ. ರಂಜಿತ್ ಅವರೇ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು ಅವರಿಗೆ ಬರವಣಿಗೆಯಲ್ಲಿ ತಮಿಳ್ ಪ್ರಭಾ ಸಹಾಯ ಮಾಡಿದ್ದಾರೆ. ಎಸ್.ಎಸ್. ಮೂರ್ತಿ ಕಲಾನಿರ್ದೇಶನ ಮತ್ತು ಆರ್.ಕೆ. ಸೆಲ್ವಾ ಅವರ ಸಂಕಲನವಿದೆ.Thangalaan Title Announcement | Chiyaan Vikram | Pa Ranjith

ಕೆಜಿಎಫ್ ಹಿನ್ನೆಲೆಯಲ್ಲಿ ಸಾಗುವ ಈ ಆಕ್ಷನ್ ಚಿತ್ರವನ್ನು ಸ್ಟುಡಿಯೋ ಗ್ರೀನ್ ಸಂಸ್ಥೆಯಡಿ ಕೆ.ಇ. ಜ್ನಾನವೇಲ್ ರಾಜ ನಿರ್ಮಿಸುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ನಿರ್ಮಾಣದಲ್ಲಿ ಪ. ರಂಜಿತ್ ಅವರ ನೀಲಂ ಪ್ರೊಡಕ್ಷನ್ಸ್ ಸಹ ಕೈಜೋಡಿಸಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…