ತೆರೆಗೆ ಬರಲು ಸಿದ್ದವಾಗಿದೆ “ಪ್ರೆಸೆಂಟ್ ಪ್ರಪಂಚ ೦% ಲವ್” ಚಿತ್ರ .

The film "Present World 0% Love" is ready to hit the screens.

ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರೆಸೆಂಟ್ ಪ್ರಪಂಚ 0% ಲವ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರ  ತೆರೆಗೆ ಬರಲು ಸಿದ್ದವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.  ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ. ನಮ್ಮ ಚಿತ್ರದ ನಿರ್ದೇಶಕ ಅಭಿರಾಮ್ ಎ ಅವರಿಗೂ ಈ ಚಿತ್ರದ ಬಗ್ಗೆ ಅಪಾರ ಪ್ರೀತಿ. ಆದರೆ ವಿಧಿ, ಚಿತ್ರ ಬಿಡುಗಡೆಗೆ ಮುನ್ನವೇ ನಿರ್ದೇಶಕ ಅಭಿರಾಮ್ ಹಾಗೂ ನಾಯಕ ಅರ್ಜುನ್ ಮಂಜುನಾಥ್ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಅವರಿಬ್ಬರ ಅನುಪಸ್ಥಿತಿ ತುಂಬಾ ಕಾಡುತ್ತಿದೆ. ಇಬ್ಬರು ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಗಿಯುವ ತನಕ ಜೊತೆಗಿದ್ದರು. ಆಮೇಲೆ ಯಾರು ನಿರೀಕ್ಷಿಸದ್ದು ನಡೆದು ಹೋಯಿತು. ಆನಂತರ ದ್ವಿತೀಯ ನಾಯಕ ಯಶಸ್ ಅಭಿ ಸೇರಿದಂತೆ  ಚಿತ್ರತಂಡದ ಸದಸ್ಯರ ಸಹಕಾರದಿಂದ ಸಿನಿಮಾ ಪೂರ್ಣವಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡುವ ಯೋಜನೆ ಇದೆ ಎಂದರು ನಿರ್ಮಾಪಕ ಕೃಷ್ಣಮೂರ್ತಿ ಕೆ.ಎಲ್.  ಈ ಚಿತ್ರವನ್ನು ಕೃಷ್ಣಮೂರ್ತಿ ಹಾಗೂ ರವಿಕುಮಾರ್ ಇಬ್ಬರು ಸೇರಿ ನಿರ್ಮಿಸಿದ್ದಾರೆ. ನಾಗರಾಜ್ ಹೊಸಳ್ಳಿ ಹಾಗೂ ದೇವರಾಜ್ ಅವರ ಸಹ ನಿರ್ಮಾಣವೂ ಇದೆ.  "ಪ್ರೆಸೆಂಟ್ ಪ್ರಪಂಚ"ದಲ್ಲಿ ಎಲ್ಲದಕ್ಕಿಂತ ಪ್ರೀತಿನೇ ಮುಖ್ಯ ಎಂಬುದೇ ಚಿತ್ರದ ಪ್ರಮುಖ ಕಥಾಹಂದರ. ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕ ೦% ಪ್ರೀತಿ ಎಂದು ಕೊಂಡು ಬಂದರೆ, ಹೋಗುವಾಗ 100% ಪ್ರೀತಿ ಹೊತ್ತಿಕೊಂಡು ಹೋಗುವುದು ಖಚಿತ.  ನಾಯಕ ಹಾಗೂ ನಿರ್ದೇಶಕರ ನಿಧನದಿಂದ ನಮ್ಮ ತಂಡಕ್ಕೆ ತುಂಬಾ ಆಘಾತವಾಗಿತ್ತು. ಆದರೆ ಈ ಚಿತ್ರ ಅವರಿಬ್ಬರ ಕನಸಿನ ಕೂಸು. ಚಿತ್ರವನ್ನು ಪೂರ್ತಿ ಮಾಡಿ, ತೆರೆಗೆ ತರೋಣ ಎಂದು ನಾನು, ನಿರ್ಮಾಪಕರಿಗೆ ಹೇಳಿದೆ. ನನ್ನ ಹಾಗೂ ನಮ್ಮ ತಂಡದ ಕೋರಿಕೆಗೆ ಸ್ಪಂದಿಸಿದ ನಿರ್ಮಾಪಕರಿಗೆ ಧನ್ಯವಾದ. ಚಿತ್ರದಲ್ಲಿ ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ದ್ವಿತೀಯ ನಾಯಕ ಯಶಸ್ ಅಭಿ.  ಮದುವೆಯಾದ ಮೇಲೆ ಗಂಡ - ಹೆಂಡತಿ ನಡುವೆ ಭಿನ್ನಾಭಿಪ್ರಾಯಗಳು ಬರುವುದು ಸಹಜ. ಅದು ವಿಚ್ಛೇದನದ ತನಕ ಹೋಗಬಾರದು ಎಂಬುದನ್ನು ನಮ್ಮ ಚಿತ್ರದಲ್ಲಿ ತೋರಿಸಲಾಗಿದೆ ಎಂದರು ನಾಯಕಿ ಸಂಭ್ರಮ ಶ್ರೀ.   ನಟರಾದ ಗೋವಿಂದೇ ಗೌಡ, ಕುರಿ ಸುನೀಲ್ ಹಾಗೂ ಸಂಗೀತ ನಿರ್ದೇಶಕ ರವಿತೇಜಸ್ ಚಿತ್ರದ ಕುರಿತು ಮಾತನಾಡಿದರು.   ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಸಾಹಿತಿ ಹಾಗೂ ನಿರ್ದೇಶಕ ರಾಮ್ ನಾರಾಯಣ್ ಮುಂತಾದ ಗಣ್ಯರು ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು.

ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ. ನಮ್ಮ ಚಿತ್ರದ ನಿರ್ದೇಶಕ ಅಭಿರಾಮ್ ಎ ಅವರಿಗೂ ಈ ಚಿತ್ರದ ಬಗ್ಗೆ ಅಪಾರ ಪ್ರೀತಿ. ಆದರೆ ವಿಧಿ, ಚಿತ್ರ ಬಿಡುಗಡೆಗೆ ಮುನ್ನವೇ ನಿರ್ದೇಶಕ ಅಭಿರಾಮ್ ಹಾಗೂ ನಾಯಕ ಅರ್ಜುನ್ ಮಂಜುನಾಥ್ ಇಬ್ಬರನ್ನು ಬಲಿ ತೆಗೆದುಕೊಂಡಿದೆ.
ಅವರಿಬ್ಬರ ಅನುಪಸ್ಥಿತಿ ತುಂಬಾ ಕಾಡುತ್ತಿದೆ. ಇಬ್ಬರು ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಗಿಯುವ ತನಕ ಜೊತೆಗಿದ್ದರು. ಆಮೇಲೆ ಯಾರು ನಿರೀಕ್ಷಿಸದ್ದು ನಡೆದು ಹೋಯಿತು. ಆನಂತರ ದ್ವಿತೀಯ ನಾಯಕ ಯಶಸ್ ಅಭಿ ಸೇರಿದಂತೆ ಚಿತ್ರತಂಡದ ಸದಸ್ಯರ ಸಹಕಾರದಿಂದ ಸಿನಿಮಾ ಪೂರ್ಣವಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡುವ ಯೋಜನೆ ಇದೆ ಎಂದರು ನಿರ್ಮಾಪಕ ಕೃಷ್ಣಮೂರ್ತಿ ಕೆ.ಎಲ್.The film "Present World 0% Love" is ready to hit the screens.


ಈ ಚಿತ್ರವನ್ನು ಕೃಷ್ಣಮೂರ್ತಿ ಹಾಗೂ ರವಿಕುಮಾರ್ ಇಬ್ಬರು ಸೇರಿ ನಿರ್ಮಿಸಿದ್ದಾರೆ. ನಾಗರಾಜ್ ಹೊಸಳ್ಳಿ ಹಾಗೂ ದೇವರಾಜ್ ಅವರ ಸಹ ನಿರ್ಮಾಣವೂ ಇದೆ.WhatsApp Image 2023 04 20 at 3.27.23 PM

“ಪ್ರೆಸೆಂಟ್ ಪ್ರಪಂಚ”ದಲ್ಲಿ ಎಲ್ಲದಕ್ಕಿಂತ ಪ್ರೀತಿನೇ ಮುಖ್ಯ ಎಂಬುದೇ ಚಿತ್ರದ ಪ್ರಮುಖ ಕಥಾಹಂದರ. ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕ ೦% ಪ್ರೀತಿ ಎಂದು ಕೊಂಡು ಬಂದರೆ, ಹೋಗುವಾಗ 100% ಪ್ರೀತಿ ಹೊತ್ತಿಕೊಂಡು ಹೋಗುವುದು ಖಚಿತ. ನಾಯಕ ಹಾಗೂ ನಿರ್ದೇಶಕರ ನಿಧನದಿಂದ ನಮ್ಮ ತಂಡಕ್ಕೆ ತುಂಬಾ ಆಘಾತವಾಗಿತ್ತು. ಆದರೆ ಈ ಚಿತ್ರ ಅವರಿಬ್ಬರ ಕನಸಿನ ಕೂಸು. ಚಿತ್ರವನ್ನು ಪೂರ್ತಿ ಮಾಡಿ, ತೆರೆಗೆ ತರೋಣ ಎಂದು ನಾನು, ನಿರ್ಮಾಪಕರಿಗೆ ಹೇಳಿದೆ. ನನ್ನ ಹಾಗೂ ನಮ್ಮ ತಂಡದ ಕೋರಿಕೆಗೆ ಸ್ಪಂದಿಸಿದ ನಿರ್ಮಾಪಕರಿಗೆ ಧನ್ಯವಾದ. ಚಿತ್ರದಲ್ಲಿ ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ದ್ವಿತೀಯ ನಾಯಕ ಯಶಸ್ ಅಭಿ.The film "Present World 0% Love" is ready to hit the screens.

ಮದುವೆಯಾದ ಮೇಲೆ ಗಂಡ – ಹೆಂಡತಿ ನಡುವೆ ಭಿನ್ನಾಭಿಪ್ರಾಯಗಳು ಬರುವುದು ಸಹಜ. ಅದು ವಿಚ್ಛೇದನದ ತನಕ ಹೋಗಬಾರದು ಎಂಬುದನ್ನು ನಮ್ಮ ಚಿತ್ರದಲ್ಲಿ ತೋರಿಸಲಾಗಿದೆ ಎಂದರು ನಾಯಕಿ ಸಂಭ್ರಮ ಶ್ರೀ. ನಟರಾದ ಗೋವಿಂದೇ ಗೌಡ, ಕುರಿ ಸುನೀಲ್ ಹಾಗೂ ಸಂಗೀತ ನಿರ್ದೇಶಕ ರವಿತೇಜಸ್ ಚಿತ್ರದ ಕುರಿತು ಮಾತನಾಡಿದರು.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಸಾಹಿತಿ ಹಾಗೂ ನಿರ್ದೇಶಕ ರಾಮ್ ನಾರಾಯಣ್ ಮುಂತಾದ ಗಣ್ಯರು ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…