ಬಿಡುಗಡೆಯಾಯಿತು “ಬಿಗ್ ಬಾಸ್” ಖ್ಯಾತಿಯ ರಾಜೀವ್ ಅಭಿನಯದ “ಉಸಿರೇ ಉಸಿರೇ” ಚಿತ್ರದ ಮೊದಲ ಹಾಡು .

The first song of "Usire Usire" starring Rajeev of "Bigg Boss" fame has been released.

ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ ಕಿಚ್ಚ ಸುದೀಪ್ .

ಬಿಗ್ ಬಾಸ್ ಖ್ಯಾತಿಯ ನಟ ರಾಜೀವ್ ನಾಯಕರಾಗಿ ನಟಿಸಿರುವ “ಉಸಿರೇ ಉಸಿರೇ” ಚಿತ್ರಕ್ಕಾಗಿ ಪ್ರೇಮಕವಿ ಕೆ.ಕಲ್ಯಾಣ್ ಬರೆದಿರುವ “ಉಸಿರೇ ನನ್ನ ಉಸಿರೇ” ಎಂಬ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿವೇಕ್ ಚಕ್ರವರ್ತಿ ಸಂಗೀತ ನೀಡಿರುವ ಹಾಗೂ ವಾಸುಕಿ ವೈಭವ್ ಹಾಡಿರುವ ಈ ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್ ಹಾಗೂ ಭೀಮ ಜ್ಯುಯಲರ್ಸ್ ನ ಮಾಲೀಕರಾದ ವಿಷ್ಣು ಭಟ್ ಬಿಡುಗಡೆ ಮಾಡಿದರು.The first song of "Usire Usire" starring Rajeev of "Bigg Boss" fame has been released.

ಇದೊಂದು ನವೀರದ ಪ್ರೇಮಕಥೆ. ಪ್ರೀತಿಗೆ ಜಾತಿಯಿಲ್ಲ ಎಂದು ಸಾರುವ ಕಥೆ ಎಂದು ಮಾತು ಪ್ರಾರಂಭಿಸಿದ ನಾಯಕ ರಾಜೀವ್, “ಉಸಿರೇ ಉಸಿರೇ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ‌. ಇತ್ತೀಚೆಗೆ ಬಳ್ಳಾರಿಯ ರೇಣುಕಾಂಬ ಜಾತ್ರೆಯಲ್ಲಿ ಹಾಗೂ ಮಂತ್ರಾಲಯದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಚಿತ್ರದ ಟೀಸರ್ ಬಿಡುಗಡೆ‌ ಮಾಡಿದ್ದೆವು. ಇಂದು ಮೊದಲ ಹಾಡು ಬಿಡುಗಡೆಯಾಗಿದೆ. ಎಲ್ಲರೂ ಸಾಮಾನ್ಯವಾಗಿ ಮೊದಲು ಡ್ಯುಯೆಟ್ ಸಾಂಗ್ ಬಿಡುಗಡೆ ಮಾಡುತ್ತಾರೆ. ಆದರೆ ನಾವು ಪ್ಯಾತೋ ಸಾಂಗ್ ಬಿಡುಗಡೆ ಮಾಡಿದ್ದೇವೆ. ಈ ಹಾಡನ್ನು ಮೊದಲು ಬಿಡುಗಡೆ ಮಾಡಲು ಕಾರಣವೆಂದರೆ, ಈ ಹಾಡಿನಲ್ಲಿ ಇಡೀ ಚಿತ್ರದ ಕಥೆಯಿದೆ. ಹಾಡನ್ನು ಗಮನವಿಟ್ಟು ಕೇಳಿದಾಗ ನಮ್ಮ ಚಿತ್ರದ ಕಥೆ ಅರ್ಥವಾಗುತ್ತದೆ. ಈ ಹಾಡನ್ನು ಬಿಡುಗಡೆ ಮಾಡಿಕೊಟ್ಟ ಗುರುಕಿರಣ್, ಭಾ.ಮ.ಹರೀಶ್ ಹಾಗೂ ವಿಷ್ಣು ಭಟ್ ಅವರಿಗೆ ಧನ್ಯವಾದ ತಿಳಿಸಿದರು.The first song of "Usire Usire" starring Rajeev of "Bigg Boss" fame has been released.

ಇದು ನನ್ನ ಮೊದಲ ನಿರ್ಮಾಣದ ಚಿತ್ರ.‌ ನಾನು ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಅವರೆ ಸ್ಪೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಕ್ಲೈಮ್ಯಾಕ್ಸ್ ನಲ್ಲಿ ಸುದೀಪ್ ಅವರ ಅಭಿನಯದ ಸನ್ನಿವೇಶಗಳು ಸುಮಾರು 18 ನಿಮಿಷಗಳು ಬರುತ್ತದೆ‌. ಸುದೀಪ್ ಅವರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ಪ್ರದೀಪ್ ಯಾದವ್.The first song of "Usire Usire" starring Rajeev of "Bigg Boss" fame has been released.

ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಸೆಪ್ಟೆಂಬರ್ ನಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ನಮ್ಮ ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ರಾಜೀವ್ ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ. ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಖ್ಯಾತ ನಟರಾದ ಡಾ||ಆಲಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತರು, ಅತೀ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಬ್ರಹ್ಮಾನಂದಂ ಮೊದಲ ಬಾರಿಗೆ ನಮ್ಮ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು, ಜಗಪ್ಪ, ಸುಶ್ಮಿತಾ ಇನ್ನೂ ಮುಂತಾದವರ ತಾರಾಬಳಗವಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ. ಮುಂದೆ ಉಳಿದ ಹಾಡುಗಳು ಹಾಗೂ ಟ್ರೇಲರ್ ಸಹ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಸಿ.ಎಂ.ವಿಜಯ್ ತಿಳಿಸಿದರು.

ನಾಯಕಿ ಶ್ರೀಜಿತ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಾಡುಗಳ ಕುರಿತು ವಿವೇಕ್ ಚಕ್ರವರ್ತಿ ಮಾಹಿತಿ ನೀಡಿದರು. ನಿರ್ಮಾಪಕರ ತಾಯಿ ಪ್ರಮಿಳಾ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…