ವಿಭಿನ್ನ ರೀತಿಯ ಪ್ರಚಾರದ ಮೂಲಕ ಗಮನ ಸೆಳೆಯುತ್ತಿದೆ ‘ಥಗ್ಸ್ ಆಫ್ ರಾಮಘಡ’ ಸಿನಿಮಾ – ಚಿತ್ರತಂಡಕ್ಕೆ ಸಿಗಲಿದೆ ಡಾಲಿ ಧನಂಜಯ ಸಾಥ್

The movie 'Thugs of Ramghada' is attracting attention through a different kind of promotion

ಟೈಟಲ್ ಹಾಗೂ ಹಾಡಿನ ಮೂಲಕ ಗಮನ ಸೆಳೆದಿರೋ ‘ಥಗ್ಸ್ ಆಫ್ ರಾಮಘಡ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಹೊಸಬರ ಹೊಸತನದ ಪ್ರಯೋಗವಿರುವ ಈ ಚಿತ್ರ ಜನವರಿ 6ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಬಾಗಿಲಲ್ಲಿರುವ ಚಿತ್ರತಂಡ ವಿಭಿನ್ನ ರೀತಿಯಲ್ಲಿ ಚಿತ್ರದ ಪ್ರಮೋಶನ್ ನಡೆಸುತ್ತಿದೆ. ಚಿತ್ರದ ಪ್ರಚಾರದ ಹೊಸ ಪೋಸ್ಟರ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಗಮನ ಸೆಳೆಯುತ್ತಿದೆ. ಇದರ ಜೊತೆಗೆ ನಟರಾಕ್ಷಸ ಡಾಲಿ ಧನಂಜಯ ಸಾಥ್ ಕೂಡ ಚಿತ್ರತಂಡಕ್ಕೆ ಸಿಕ್ಕಿದೆ.The movie 'Thugs of Ramghada' is attracting attention through a different kind of promotion

‘ಥಗ್ಸ್ ಆಫ್ ರಾಮಘಡ’ ಚಿತ್ರತಂಡ ಸಿನಿಮಾದ ಸಂಪೂರ್ಣ ಕೆಲಸ ಮುಗಿಸಿ ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವಲ್ಲಿ ತಲ್ಲೀನವಾಗಿದೆ. ಅದಕ್ಕೆಂದೇ ವಿಭಿನ್ನ ರೀತಿಯ ಪ್ರಚಾರ ಕಾರ್ಯದ ಮೊರೆ ಹೋಗಿದೆ. ಚಿತ್ರದ ಟೈಟಲ್ ಹೆಸರಿನ ರಾಮಘಡ ಪತ್ರಿಕೆ ಮೂಲಕ ಸಿನಿಮಾದ ಕ್ಯಾರೆಕ್ಟರ್ ಗಳನ್ನು ಪರಿಚಯಿಸುವ ಕೆಲಸವನ್ನು ಚಿತ್ರತಂಡ ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್ ಗಳು ಸಖತ್ ವೈರಲ್ ಆಗಿದ್ದು, ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ನಾಳೆ ಚಿತ್ರದ ಟ್ರೈಲರ್ ಬಿಡುಗಡೆ ಕೂಡ ನಡೆಯಲಿದ್ದು, ನಟ ರಾಕ್ಷಸ ಡಾಲಿ ಧನಂಜಯ ಚಿತ್ರದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡುತ್ತಿದ್ದಾರೆ.The movie 'Thugs of Ramghada' is attracting attention through a different kind of promotion

ಕಾರ್ತಿಕ್ ಮಾರಲಭಾವಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ‘ಥಗ್ಸ್ ಆಫ್ ರಾಮಘಡ’ ಜನವರಿ 6ರಂದು ಪ್ರೇಕ್ಷಕರೆದುರು ಬರಲು ತಯಾರಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದ ಸಿನಿಮಾವಿದು. ಅದಕ್ಕೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಸಿನಿಮಾ ಹೆಣೆದಿದ್ದಾರೆ ಕಾರ್ತಿಕ್. ಉತ್ತರ ಕರ್ನಾಟಕದ ಚಿಕ್ಕ ಹಳ್ಳಿಯಲ್ಲಿ ನಡೆಯುವ ಕಥೆ ಇದಾಗಿದ್ದು, ನೈಜತೆಗೆ ಹತ್ತಿರವಾಗಿರಲೆಂದು ಪೂರ್ತಿ ಸಿನಿಮಾವನ್ನು ಉತ್ತರ ಕರ್ನಾಟಕ ಭಾಗದಲ್ಲೇ ಸೆರೆ ಹಿಡಿಯಲಾಗಿದೆ.The movie 'Thugs of Ramghada' is attracting attention through a different kind of promotion

ಚಿತ್ರದಲ್ಲಿ ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸೂರ್ಯ ಕಿರಣ್, ಪ್ರಭು ಹೊಸದುರ್ಗ, ಟೈಗರ್ ಗಂಗ, ಜಗದೀಶ್, ಸೂರ್ಯಕಿರಣ್, ರಾಘವೇಂದ್ರ, ವಿಶಾಲ್ ಪಾಟೀಲ್, ರವಿ ಸಾಲಿಯನ್, ಲೋಕೇಶ್ ಗೌಡ, ಭೀಷ್ಮ, ಸುಧೀನ್ ನಾಯರ್ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.The movie 'Thugs of Ramghada' is attracting attention through a different kind of promotion

ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರಾಜೇಶ್ ಕೃಷ್ಣನ್, ಶಶಾಂಕ್ ಶೇಷಗಿರಿ, ಅನುರಾಧ ಭಟ್ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…