ಬಹು ನಿರೀಕ್ಷಿತ ಆಕ್ಷನ್, ಸಸ್ಪೆನ್ಸ್ ಥ್ರಿಲ್ಲರ್ “ಖೆಯೊಸ್” ಚಿತ್ರ ಫೆಬ್ರವರಿ 17 ರಂದು ತೆರೆಗೆ.

The much-awaited action, suspense thriller "Kheos" hits the screens on February 17.

ಕನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚು ಯಶಸ್ವಿಯಾಗುತ್ತಿದೆ. ಉತ್ತಮ ಕಂಟೆಂಟ್ ವುಳ್ಳ “ಖೆಯೊಸ್” ಚಿತ್ರ ಕೂಡ ಇದೇ ಫೆಬ್ರವರಿ 17 ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಮಾಹಿತಿ ನೀಡಿದರು. The much-awaited action, suspense thriller "Kheos" hits the screens on February 17.

ನಾನು ವೈದ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. “ಖೆಯೊಸ್” ಅಂದರೆ ಮನುಷ್ಯ ಮನಸ್ಸಿನಲ್ಲಾಗುವ ಗೊಂದಲ. ಇದು ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆ. ನಾಯಕ ಅನಿರೀಕ್ಷಿತವಾಗಿ ಒಂದು ಸಮಸ್ಯೆಗೆ ಸಿಲುಕಿಕೊಳ್ಳುತ್ತಾನೆ. ಆತ ತನ್ನ ಜಾಣ್ಮೆಯಿಂದ ಹೇಗೆ ಆ ಸಮಸ್ಯೆಯಿಂದ ಹೇಗೆ ಪಾರಾಗುತ್ತಾನೆ ಎಂಬುದು ಕಥಾಹಂದರ. ನಾಯಕನಾಗಿ ಅಕ್ಷಿತ್ ಶಶಿಕುಮಾರ್, ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. THE BLACK PEBBLE ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇದೇ 17ರಂದು ಚಿತ್ರ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಜಿ.ವಿ.ಪ್ರಸಾದ್ ಮಾಹಿತಿ ನೀಡಿದರು. The much-awaited action, suspense thriller "Kheos" hits the screens on February 17.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಅವರು ಕಥೆ ಹೇಳುವಾಗ ನಾನು ಗಡ್ಡ ಬಿಟ್ಡಿದೆ. ನಮ್ಮ ಪಾತ್ರಕ್ಕೆ ಈ ರೀತಿಯ ಗೆಟಪ್ ಬೇಕಿತ್ತು ಎಂದರು.‌ ಎಂ ಬಿ ಬಿ ಎಸ್ ಓದುತ್ತಿರುವ ಹುಡುಗನ ಪಾತ್ರ ನನ್ನದು. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ. ನಮ್ಮ ತಂದೆ ಕೂಡ ಇದರಲ್ಲಿ ನಟಿಸಿದ್ದಾರೆ ಎಂದು ಅಕ್ಷಿತ್ ಶಶಿಕುಮಾರ್ ತಿಳಿಸಿದರು. The much-awaited action, suspense thriller "Kheos" hits the screens on February 17.

“ಖೆಯೊಸ್” ಎಂದರೆ ಮನಸ್ಸಿನಲ್ಲಾಗುವ ಅಸ್ತವ್ಯಸ್ತ, ಗೊಂದಲ ಇತ್ಯಾದಿ. ನಾನು ಕೂಡ ವೈದ್ಯಕೀಯ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದೇನೆ. ಅಕ್ಷಿತ್ ಅವರು ದೊಡ್ಡ ಹೀರೊ ಮಗ ಅಂತ ಏನು ಇಲ್ಲದೆ, ಎಲ್ಲರೊಂದಿಗೆ ಬೆರೆಯುವ ಗುಣ ಇಷ್ಟವಾಯಿತು ಎಂದು ನಾಯಕಿ ಅದಿತಿ ಪ್ರಭುದೇವ ಹೇಳಿದರು. The much-awaited action, suspense thriller "Kheos" hits the screens on February 17.

ನಿರ್ದೇಶಕ ಜಿ.ವಿ.ಪ್ರಸಾದ್ ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು ಎಂದರು ನಿರ್ಮಾಪಕರಾದ ಪಾರುಲ್ ಅಗರವಾಲ್ ಹಾಗೂ ಡಾ|| ಹೇಮಚಂದ್ರ ರೆಡ್ಡಿ. ಚಿತ್ರದಲ್ಲಿ ನಟಿಸಿರುವ ಆರ್.ಕೆ.ಚಂದನ್, ಶಿವಾನಂದ್ ತಮ್ಮ ಪಾತ್ರದ ಬಗ್ಗೆ ಹಾಗೂ ವಿಜಯ್ ಹರಿತ್ಸ ಸಂಗೀತದ ಬಗ್ಗೆ ಮಾತನಾಡಿದರು. ಬೆಂಗಳೂರು ಕುಮಾರ್ ಈ ಚಿತ್ರದ ವಿತರಕರು. The much-awaited action, suspense thriller "Kheos" hits the screens on February 17.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…