ಶಿವಣ್ಣ – ಪ್ರಭುದೇವ ನಟನೆಯ “ಕರಟಕ ದಮನಕ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ .

The shooting of Shivanna-Prabhudev starrer "Karataka Damanaka" is nearing completion.

ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ “ಕರಟಕ ದಮನಕ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, “ಕರಟಕ ದಮನಕ” ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ “ಕರಟಕ ದಮನಕ” ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಸಹ ನಟಿಸಿದ್ದೇವೆ. ತೊಂಭತ್ತು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು.The shooting of Shivanna-Prabhudev starrer "Karataka Damanaka" is nearing completion.

ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು.The shooting of Shivanna-Prabhudev starrer "Karataka Damanaka" is nearing completion.

ರಾಕ್ ಲೈನ್ ಪ್ರೊಡಕ್ಷನ್ಸ್ ನನ್ನ ಕುಟುಂಬವಿದಂತೆ. ಇನ್ನು ಯೋಗರಾಜ್ ಭಟ್ ಅವರ ಚಿತ್ರಗಳು ನನಗೆ ಇಷ್ಟ. ಅವರ ಎಷ್ಟೋ ಚಿತ್ರಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡಿದ್ದೇನೆ. ಅವರ ನಿರ್ದೇಶನದಲ್ಲಿ ನಟಿಸುತ್ತಿರುವುದು ಸಂತೋಷ. ಗೆಳೆಯ ಪ್ರಭುದೇವ ಹಾಗೂ ನಾನು ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದೇವೆ. ಈ ಚಿತ್ರದಲ್ಲೂ ನಾವಿಬ್ಬರು ಸ್ನೇಹಿತರಾಗಿಯೇ ನಟಿಸುತ್ತಿದ್ದೇವೆ ಎಂದು ಶಿವರಾಜಕುಮಾರ್ ತಿಳಿಸಿದರು.The shooting of Shivanna-Prabhudev starrer "Karataka Damanaka" is nearing completion.

ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಪ್ರಭುದೇವ.The shooting of Shivanna-Prabhudev starrer "Karataka Damanaka" is nearing completion.

ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯ ಆನಂದ್, ಹಿರಿಯ ಕಲಾವಿದರಾದ ಮುಖ್ಯ ಮಂತ್ರಿ ಚಂದ್ರು, ತನಿಕೆಲ್ಲ ಭರಣಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ‌ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…