ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಮಾನ್ವಿತಾ ಜೋಡಿಯ ಹೊಸ ಸಿನಿಮಾದ ಶೂಟಿಂಗ್ ಕಂಪ್ಲೀಟ್…ಶೀಘ್ರದಲ್ಲಿ ಟೈಟಲ್ ರಿವೀಲ್

The shooting of the new movie of the lovely star Prem and Manvita Jodi is complete

ಜೂಟಾಟ, ಗುಬ್ಬಚ್ಚಿ ಸಿನಿಮಾಗಳ ಸಾರಥಿ ಅಥರ್ವ್ ಆರ್ಯ ನಿರ್ದೇಶನದ ಹೊಸ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.The shooting of the new movie of the lovely star Prem and Manvita Jodi is complete

ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್ ಕಾಮತ್ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದು, ತಬಲಾ ನಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.ಲವ್ಲಿ ಸ್ಟಾರ್​ ಪ್ರೇಮ್ ಜೊತೆ ಟಗರು ಪುಟ್ಟಿ! ಮೊದಲ ಬಾರಿ ಲವ್ಲಿ ಜೋಡಿ ಮೋಡಿ

K.R.S ಪ್ರೊಡಕ್ಷನ್ಸ್ ನಡಿ ತಬಲಾನಾಣಿ ಹಾಗೂ ಸ್ನೇಹಿತರ ಜೊತೆಗೂಡಿ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ. ತಂದೆಯ ಮಹತ್ವ ಸಾರುವ, ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ಆತ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎಂಬುದು ಕಥೆಯ ತಿರುಳು. ಇಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದು, ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.The shooting of the new movie of the lovely star Prem and Manvita Jodi is complete

ಪ್ರೊಡಕ್ಷನ್ ನಂಬರ್-1 ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, k. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…