ಸೊಗಸಾಗಿದೆ “Mr ಬ್ಯಾಚುಲರ್” ಚಿತ್ರದ ಹಾಡು.

The song from the movie "Mr Bachelor" is beautiful.

ಡಾರ್ಲಿಂಗ್ ಕೃಷ್ಣ ಅಭಿನಯದ ಈ ಚಿತ್ರ ಜನವರಿ 6 ರಂದು ತೆರೆಗೆ.

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “Mr ಬ್ಯಾಚುಲರ್” ಚಿತ್ರಕ್ಕಾಗಿ ಮಾರುತಿ ಅವರು ಬರೆದಿರುವ “ಮದುವೆ ಯಾವಾಗ” ಎಂಬ ಸೊಗಸಾದ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ವಿಜಯ್ ಪ್ರಕಾಶ್ ಹಾಡಿರುವ ಈ ಹಾಡಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ.The song from the movie "Mr Bachelor" is beautiful.

ನಾನು “ಲವ್ ಮಾಕ್ಟೇಲ್” ಚಿತ್ರ ಆರಂಭಿಸುವುದಕ್ಕೂ ಮುನ್ನ ಆರಂಭವಾದ ಚಿತ್ರವಿದು. ಈ ಚಿತ್ರದ ಸಂಭಾವನೆಯಿಂದಲೇ ನಾನು “ಲವ್ ಮಾಕ್ಟೇಲ್” ಶುರು ಮಾಡಿದ್ದು. ಹಾಗಾಗಿ ನನಗೆ ಈ ಚಿತ್ರದ ಮೇಲೆ ವಿಶೇಷ ಪ್ರೀತಿ. ನಾಯ್ಡು ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಬಂದಿದೆ. ಮನೋರಂಜನೆಯ ಜೊತೆಗೆ ಆಕ್ಷನ್, ಸೆಂಟಿಮೆಂಟ್ ಸನ್ನಿವೇಶಗಳು ಇದೆ‌. ನಿಮಿಕಾ ರತ್ನಾಕರ್ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷಪಾತ್ರದಲ್ಲಿ ಮಿಲನ ನಾಗರಾಜ್ ಇದ್ದಾರೆ. 2023 ಜನವರಿ 6 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ಡಾರ್ಲಿಂಗ್ ಕೃಷ್ಣ.The song from the movie "Mr Bachelor" is beautiful.

ನಾನು ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರ ಬಳಿ ಕೆಲಸ ಮಾಡುತ್ತಿದೆ‌. ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಮದುವೆ ವಯಸ್ಸಿಗೆ ಬಂದ ಹುಡುಗನನ್ನು ಸಾಮಾನ್ಯವಾಗಿ ಎಲ್ಲರು ಮದುವೆ ಯಾವಾಗ? ಅಂತ ಕೇಳುತ್ತಾರೆ. ಇಂದು ಬಿಡುಗಡೆಯಾಗಿರುವ ಈ ಹಾಡು ಕೂಡ ಆ ವಾಕ್ಯದಿಂದಲೇ ಆರಂಭವಾಗುತ್ತದೆ‌. ಶ್ರೀನಿವಾಸ್, ಹನುಮಂತ ರಾವ್ ಹಾಗೂ ಸ್ವರ್ಣಲತ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಹಾಗೂ ಶ್ರೀ ಕ್ರೇಜಿಮೈಂಡ್ಸ್ ಛಾಯಾಗ್ರಹಣ – ಸಂಕಲನ ಈ ಚಿತ್ರಕ್ಕಿದೆ. ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್, ನಿಮಿಕಾ ರತ್ನಾಕರ್, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ಅಯ್ಯಪ್ಪ ಶರ್ಮ, ಚಿಕ್ಜಣ್ಣ, ಪವಿತ್ರ ಲೋಕೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ‌ ಎಂದು ನಿರ್ದೇಶಕ ನಾಯ್ಡು ಚಿತ್ರದ ಬಗ್ಗೆ ‌ಮಾಹಿತಿ ನೀಡಿದರು.The song from the movie "Mr Bachelor" is beautiful.

ಚಿತ್ರದ ಕಥೆ ಹಾಗೂ ನನ್ನ ಪಾತ್ರ ಚೆನ್ನಾಗಿದೆ. ಡಾರ್ಲಿಂಗ್ ಕೃಷ್ಣ ಅವರ ಜೊತೆ ನಟಿಸಿದ್ದು ಸಂತೋಷವಾಗಿದೆ ಎಂದರು ನಾಯಕಿ ನಿಮಿಕಾ ರತ್ನಾಕರ್. ನಿರ್ಮಾಪಕ ಶ್ರೀನಿವಾಸ್ ಎಲ್, ಛಾಯಾಗ್ರಾಹಕ ಹಾಗೂ ಸಂಕಲನಕಾರ ಶ್ರೀ ಕ್ರೇಜಿಮೈಂಡ್ಸ್ ಹಾಗೂ ಜಂಕಾರ್ ಮ್ಯೂಸಿಕ್ ಸಂಸ್ಥೆಯ ಭರತ್ ಜೈನ್ “Mr ಬ್ಯಾಚುಲರ್” ಬಗ್ಗೆ ‌ಮಾತನಾಡಿದರು.The song from the movie "Mr Bachelor" is beautiful.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…