ಕುತೂಹಲ ಮೂಡಿಸಿದೆ‌ “ಇನಾಮ್ದಾರ್” ಚಿತ್ರದ ಟೀಸರ್.

The teaser of the movie "Inamdaar" is interesting.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನ.‌

ಕನ್ನಡ ಚಿತ್ರರಂಗಕ್ಕೀಗ ಸುವರ್ಣ ಕಾಲ ಎನ್ನಬಹುದು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಚಿತ್ರರಸಿಕರು ಒಪ್ಪಿಕೊಂಡು, ಯಶಸ್ವಿಗೊಳಿಸಿದ್ದಾರೆ‌. ಅಂತಹುದೇ ವಿಭಿನ್ನ ಕಥೆಯ “ಇನಾಮ್ದಾರ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೀಸರ್ ಸಾಕಷ್ಟು ಕುತೂಹಲ ಹುಟ್ಟಿಸಿದೆ.The teaser of the movie "Inamdaar" is interesting.

ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ “ಇನಾಮ್ದಾರ್” ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ಜನರ ನಡುವೆ ನಡೆಯುವ ವರ್ಣ‌ಸಂಘರ್ಷದ ಕಥೆ. “ಇನಾಮ್ದಾರ್” ಚಿತ್ರಕ್ಕೆ “ಕಪ್ಪು ಸುಂದರಿಯ ಸುತ್ತ” ಎಂಬ ಅಡಿಬರಹವಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಳಗಾವಿ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಡಬ್ಬಿಂಗ್ ಸಹ ಪೂರ್ಣವಾಗಿದೆ. ಚಿತ್ರ ಹೇಗೆ ಬಂದಿದೆ ಎಂದು ಟೀಸರ್ ಮೂಲಕ ತೋರಿಸುವ ಸಣ್ಣ ಪ್ರಯತ್ನ ಮಾಡಿದ್ದೇವೆ. ನನ್ನ ಕನಸಿಗೆ ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ, ತಾವು ಕೂಡ ಒಂದು ಪಾತ್ರ ಮಾಡಿರುವುದಾಗಿ ಹೇಳಿದರು.The teaser of the movie "Inamdaar" is interesting.

ನನ್ನದು ಈ ಚಿತ್ರದಲ್ಲಿ ಕಾಡಿನ ನಾಯಕನ ಪಾತ್ರ. ತುಂಡು ಉಡುಗೆ, ಮೈ ಪೂರ್ತಿ ಕಪ್ಪು ಬಣ್ಣವಿರುತ್ತದೆ. ಬಣ್ಣ ಹಾಕಲು ಎರಡು ಗಂಟೆ ಹಿಡಿಸಿದರೆ, ತೆಗೆಯಲು ಐದು ಗಂಟೆ ಹಿಡಿಸುತ್ತಿತ್ತು ಎಂದು ಚಿತ್ರೀಕರಣದ ಅನುಭವವನ್ನು ಪ್ರಮೋದ್ ಶೆಟ್ಟಿ ಹಂಚಿಕೊಂಡರು. ಅಭಿನಯದ ಅನುಭವವಿಲ್ಲದ ನನಗೆ ಅಭಿನಯ ಹೇಳಿಕೊಟ್ಟವರು ನಿರ್ದೇಶಕರು. ನನ್ನ ಅಭಿನಯ ಚೆನ್ನಾಗಿ ಬಂದಿದ್ದರೆ, ಅದಕ್ಕೆ ನಿರ್ದೇಶಕರೆ ಕಾರಣ‌ ಎಂದರು ನಿರಂಜನ್ ಛತ್ರಪತಿ.The teaser of the movie "Inamdaar" is interesting.

ನಿರ್ದೇಶಕ ಸಂದೇಶ್ ನನ್ನ ಆತ್ಮೀಯ ಸ್ನೇಹಿತ. ಚಿತ್ರದ ಟೀಸರ್ ನೋಡಿ ಖುಷಿಯಾಗಿದೆ. ಚಿತ್ರ ಕೂಡ ಚೆನ್ನಾಗಿ ಬಂದಿರುತ್ತದೆ ಎಂಬ ಭರವಸೆ ಮೂಡಿದೆ ಎಂದರು ನಿರ್ಮಾಪಕ ನಿರಂಜನ್ ಶೆಟ್ಟಿ ತಲ್ಲೂರು.The teaser of the movie "Inamdaar" is interesting.

ನಾಯಕಿಯರಾದ ಚಿರಶ್ರೀ ಅಂಚಿನ್, ಎಸ್ತರ್ ನರೋನ್ಹಾ,‌ ಚಿತ್ರದಲ್ಲಿ ನಟಿಸಿರುವ ಎಂ.ಕೆ.ಮಠ,‌ ರಘು ಪಾಂಡೇಶ್ವರ ತಮ್ಮ ಅಭಿನಯದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ರಾಕಿ ಸೋನು, ಛಾಯಾಗ್ರಾಹಕ ಮುರಳಿ, ಸಂಕಲನಕಾರ ಶಿವರಾಜ್ ‌ಮೇಹು ಹಾಗೂ ನೃತ್ಯ ನಿರ್ದೇಶಕಿ ಗೀತಾ ಸಾಯಿ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…