ಹೊರಬಂತು ‘ನಸಾಬ್’ ಶೀರ್ಷಿಕೆ, ಜೀವನಾಧಾರಿತ ಕೃತಿಗೆ ಸಿನಿಮಾ ರೂಪ

The title of 'Nasab' came out A cinematic form for a work based on life

The title of 'Nasab' came out  A cinematic form for a work based on lifeಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ನಸಾಬ್’ ಸಿನಿಮಾದ ಶೀರ್ಷಿಕೆ ಇತ್ತೀಚೆಗೆ ಬಿಡುಗಡೆಯಾಯಿತು. ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೊಂಡಜ್ಜಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಜಂಬುನಾಥ ಸ್ವಾಮಿ ಎಸ್. ಮಳಿಮಠ, ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜ ಸ್ವಾಮೀಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಬುಕ್ ಬ್ರಹ್ಮ ಸಂಪಾದಕ ದೇವು ಪತ್ತಾರ್, ಬೆಂಗಳೂರು ನಗರ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಪ್ರಕಾಶ ಮೂರ್ತಿ ಸೇರಿದಂತೆ ವಿವಿಧ ಕ್ಷೇತ್ರಗಳ ಹಲವು ಗಣ್ಯರು ಹಾಜರಿದ್ದು ‘ನಸಾಬ್’ ಚಿತ್ರದ ಟೈಟಲ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.The title of 'Nasab' came out  A cinematic form for a work based on life

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಆಪ್ತ ಸಹಾಯಕರಾದ ಕೆ ಕಿಶೋರ್ ಕುಮಾರ್ ಅವರ ಆತ್ಮಕಥೆಯನ್ನು ಆಧರಿಸಿ ತಯಾರಾಗುತ್ತಿರುವ ‘ನಸಾಬ್’ ಸಿನಿಮಾದಲ್ಲಿ ಯುವನಟ ಕೀರ್ತಿ ಕುಮಾರ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಬಂಜಾರ ಭಾಷೆಯಲ್ಲಿ ‘ನಸಾಬ್’ ಎಂದರೆ ಸರ್ವೋಚ್ಚ ನಾಯಕ ಎಂಬ ಅರ್ಥವಿದೆ. ಸಾಮಾನ್ಯ ಹುಡುಗನೊಬ್ಬ ಹೇಗೆ ‘ನಸಾಬ್’ ಆಗಿ ಬೆಳೆಯುತ್ತಾನೆ ಎಂಬುದರ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ.The title of 'Nasab' came out  A cinematic form for a work based on life

‘ಕೀರ್ತಿ ಕ್ರಿಯೇಶನ್ಸ್’ ಬ್ಯಾನರಿನಲ್ಲಿ ಸುಜಾತ ಕೆ. ನಿರ್ಮಿಸುತ್ತಿರುವ ‘ನಸಾಬ್’ ಸಿನಿಮಾಕ್ಕೆ ಡಾ. ರಾಗಂ ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಸಂಗೀತ ಸಂಯೋಜಿಸುತ್ತಿದ್ದಾರೆ. ‘ನಸಾಬ್’ ಸಿನಿಮಾದಲ್ಲಿ ಕೀರ್ತಿ ಕುಮಾರ್ ಅವರೊಂದಿಗೆ ಅಮೃತಾ, ಜಯಶ್ರೀ, ಹೇಮಂತ್, ಪದ್ಮವಾಸಂತಿ, ವಿಜಯಕಾಶಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಮಹಮ್ಮದ್ ಹಸೀಬ್ ಛಾಯಾಗ್ರಹಣವಿದ್ದು, ಶಿಜ ನಿರ್ದೇಶನವಿದೆ. ಪಟ್ಟದಕಲ್ಲು, ಐಹೊಳೆ, ಅಮಿನಘಡ ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.The title of 'Nasab' came out  A cinematic form for a work based on life

ಸದ್ಯ ‘ನಸಾಬ್’ ಸಿನಿಮಾದ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ.The title of 'Nasab' came out  A cinematic form for a work based on life

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…