ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್

The trailer of "Siren" was released by the elite of the film industry

ಮೇ 26ರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆ

ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ “ಸೈರನ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌. The trailer of "Siren" was released by the elite of the film industry

ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿ ಕೊಡುತ್ತಿದ್ದಾರೆ. ಡೆಕ್ಕನ್ ಕಿಂಗ್ ಬ್ಯಾನರ್‌ನಲ್ಲಿ ಬಿಜು ಶಿವಾನಂದ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರವನ್ನು ರಾಜಾ ವೆಂಕಯ್ಯ ನಿರ್ದೇಶಿಸಿದ್ದಾರೆ. ಕಳೆದ 30 ವರ್ಷಗಳಿಂದ ನಿರ್ದೇಶಕ ಮುರುಗ ದಾಸ್ ಸೇರಿದಂತೆ ಹಲವರ ಬಳಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ರಾಜಾ ವೆಂಕಯ್ಯ ಕೆಲಸ ಮಾಡಿದ್ದಾರೆ. “ಸೈರನ್” ಅವರ ನಿರ್ದೇಶನದ ಮೊದಲ ಕನ್ನಡ ಸಿನಿಮಾ. The trailer of "Siren" was released by the elite of the film industry

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಡಾಲಿ ಧನಂಜಯ್, ‘ಪ್ರವೀರ್ ಶೆಟ್ಟಿ ಅವರನ್ನು ಮೊದಲು ನೋಡಿದಾಗ ಚಿಕ್ಕ ಹುಡುಗ. ಈಗ ಹೀರೋ ಆಗಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಹೆಚ್ಚಾಗಿ ಅವಕಾಶ ಸಿಗಲಿ’ ಎಂದು ಹಾರೈಸಿದರು. The trailer of "Siren" was released by the elite of the film industry

‘ಕನ್ನಡ ಎಂದು ಬಂದಾಗ ಹೋರಾಟ ನೆನಪಾಗುತ್ತದೆ. ನಾನು ಹಲವಾರು ವರ್ಷಗಳಿಂದ ಪ್ರವೀಣ್ ಶೆಟ್ಟಿ ಅವರನ್ನು ನೋಡುತ್ತಾ ಬಂದಿದ್ದೇವೆ. ಅವರ ಮನೆಯಿಂದ ಚಿತ್ರರಂಗಕ್ಕೆ ಒಂದು ಉಡುಗೊರೆಯಾಗಿ ಮಗನನ್ನು ಕೊಡುತ್ತಿದ್ದಾರೆ. ಟ್ರೇಲರ್ ನೋಡಿದಾಗ ಹೊಸ ಹುಡುಗ ಅನಿಸಲಿಲ್ಲ. ಅಷ್ಟು ಚೆನ್ನಾಗಿ ನಟಿಸಿದ್ದಾರೆ ಪ್ರವೀರ್. ಹೊಸದಾಗಿ ಬರುವವರು ಗುರಿ ಇಟ್ಟುಕೊಂಡು ಬರಬೇಕು ಜೊತೆಗೆ ತಾಳ್ಮೆ ಇರಬೇಕು’ ಎಂದರು ರಾಕ್ ಲೈನ್ ವೆಂಕಟೇಶ್.Shetty is now fit & fine said Dolly!

ಚಿತ್ರದ ನಾಯಕ ಪ್ರವೀರ್ ಶೆಟ್ಟಿ ಮಾತನಾಡಿ ‘ನಾನು ಈ ದಿನಕ್ಕಾಗಿ ಹಲವು ವರ್ಷಗಳಿಂದ ಕಾಯುತ್ತಿದೆ. ಶ್ರೀಮುರಳಿ ಅವರು ಟ್ರೇಲರ್‌ಗೆ ಧ್ವನಿ ಕೊಟ್ಟಿದ್ದು ಮತ್ತಷ್ಟು ಶಕ್ತಿ ಬಂದಿದೆ. ನಿರ್ದೇಶಕರು ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ನಿಮ್ಮೆಲ್ಲರ ಸಹಕಾರ ಇರಲಿ’ ಎಂದರು.Shetty is now fit & fine said Dolly!

‘ಮೂಲತಃ ನಾನು ಚೆನ್ನೈನವನು. “ಸೈರನ್” ಚಿತ್ರದ ಮೂಲಕ ಪ್ರವೀರ್ ಶೆಟ್ಟಿ ಲಾಂಚ್ ಆಗುತ್ತಿದ್ದಾರೆ. ಒಳ್ಳೆಯ ನಟನಾಗುವ ನಿರೀಕ್ಷೆ ಇದೆ’ ಎಂದರು. ತಮಿಳು ನಟ ದೀನಾ, ಚಿತ್ರದ ನಾಯಕಿ ಲಾಸ್ಯ, ನಟಿ ಸ್ಪರ್ಶ ರೇಖಾ, ಸಂಗೀತ ನಿರ್ದೇಶಕ ಭಾರದ್ವಾಜ್, ಛಾಯಾಗ್ರಾಹಕ ನಾಗೇಶ್ ಆಚಾರ್ಯ ಮುಂತಾದವರು ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…