“ಬಾನ ದಾರಿಯಲಿ” ಚಿತ್ರದ ಟ್ರೇಲರ್ ಗೆ ಪ್ರಶಂಸೆಯ ಮಹಾಪೂರ ..

ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಿರುವ, ಪ್ರೀತಂ ಗುಬ್ಬಿ ನಿರ್ದೇಶನದ ಹಾಗೂ ಶ್ರೀವಾರಿ ಟಾಕೀಸ್ ನಿರ್ಮಾಣದ “ಬಾನ ದಾರಿಯಲಿ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೆ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.The trailer of the film "Bana Dariyali" was praised.

ಇದು ನಾನು ಈವರೆಗೂ ಮಾಡಿರದ ಪಾತ್ರ ಎಂದು ಮಾತು ಆರಂಭಿಸಿದ ನಾಯಕ ಗಣೇಶ್, “ಬಾನ ದಾರಿಯಲಿ” ಪ್ರೀತಿಯ ಬಗೆಗಿನ ಚಿತ್ರ. ಪುನೀತ್ ರಾಜಕುಮಾರ್ ಅವರು ಅಭಿನಯಿಸಿದ್ದ ಈ ಯಶಸ್ವಿ ಹಾಡಿಗೂ ನಮ್ಮ ಸಿನಿಮಾ ಕಥೆಗೆ ಹೊಂದಾಣಿಕೆಯಾಗುತ್ತದೆ. ಹಾಗಾಗಿ “ಬಾನ ದಾರಿಯಲಿ” ಶೀರ್ಷಿಕೆ ಇಟ್ಟಿದ್ದೇವೆ. ಪ್ರೀತಂ ಗುಬ್ಬಿ ನಾನು ಮುಂಚಿನಿಂದ ಸ್ನೇಹಿತರು. ನಮ್ಮ ಕಾಂಬಿನೇಶನ್ ನಲ್ಲಿ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ಈ ಚಿತ್ರ ಎಲ್ಲರ ಮನಸ್ಸಿಗೂ ಬಹಳ ಹತ್ತಿರವಾಗುತ್ತದೆ. ಕೀನ್ಯಾ, ಆಫ್ರಿಕಾ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಅಲ್ಲಿ ಚಿತ್ರೀಕರಣ ಮಾಡುವುದು ಅಷ್ಟು ಸುಲಭವಲ್ಲ. ನಮ್ಮ ತಂತ್ರಜ್ಞರ ಶ್ರಮವನ್ನು ಮೆಚ್ಚಲೇಬೇಕು. ಚಿತ್ರದ ನಾಯಕಿಯರು, ರಂಗಾಯಣ ರಘು ಅವರು ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. “ಬಾನ ದಾರಿಯಲಿ” ಸೆಪ್ಟೆಂಬರ್ 28 ರಂದು k R G ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌. ನೋಡಿ ಹಾರೈಸಿ ಎಂದರು.The trailer of the film "Bana Dariyali" was praised.

ಈ ಚಿತ್ರದಲ್ಲಿ ನನ್ನದು ನಾಯಕಿಯ ತಂದೆಯ ಪಾತ್ರ. ಗಣೇಶ್ ಬಗ್ಗೆ ಹೇಳಬೇಕೆಂದರೆ, ನೀವು ಇಷ್ಟು ದಿನ ನೋಡಿರುವ ಗಣೇಶ್ ಬೇರೆ. ಈ ಚಿತ್ರದಲ್ಲಿ ನೋಡುವ ಗಣೇಶ್ ಬೇರೆ. ಅಂತಹ ವಿಭಿನ್ನ ಪಾತ್ರ ಎನ್ನಬಹುದು. ಕೀನ್ಯಾದಲ್ಲಿ ಚಿತ್ರೀಕರಣ ಮಾಡುವಾಗ ಬರುತ್ತಿದ್ದ ಪ್ರಾಣಿಗಳನ್ನು ನೆನಪಿಸಿಕೊಂಡರೆ ಈಗಲೂ ಭಯವಾಗುತ್ತದೆ ಎಂದು ರಂಗಾಯಣ ರಘು ತಿಳಿಸಿದರು.The trailer of the film "Bana Dariyali" was praised.

ನಾನು ಲೀಲಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ. ನಾನು ಈ ಚಿತ್ರಕ್ಕಾಗಿ ಸರ್ಫಿಂಗ್ ಕಲಿತ್ತಿದ್ದೇನೆ ಎಂದರು ನಾಯಕಿ ರುಕ್ಮಿಣಿ ವಸಂತ್. ಕಾದಂಬರಿ ನನ್ನ ಪಾತ್ರದ ಹೆಸರು. ‌ಈ ಚಿತ್ರದಲ್ಲಿ ಅಭಿನಯಿಸಿದ್ದು ಖುಷಿಯಾಗಿದೆ ಎನ್ನುತ್ತಾರೆ ಮತ್ತೊಬ್ಬ ನಾಯಕಿ ರೀಷ್ಮಾ ನಾಣಯ್ಯ.The trailer of the film "Bana Dariyali" was praised.

ಶ್ರೀವಾರಿ ಟಾಕೀಸ್ ಪರವಾಗಿ ಗೋಪಿ, ಸಂಭಾಷಣೆ ಬರೆದಿರುವ ಮಾಸ್ತಿ, ಛಾಯಾಗ್ರಾಹಕ ಅಭಿಷೇಕ್ ಕಲ್ಲತ್ತಿ , ಆನಂದ್ ಆಡಿಯೋ ಶ್ಯಾಮ್ ಹಾಗೂ K R G ಸ್ಟುಡಿಯೋಸ್ ನ ಯೋಗಿ ಜಿ ರಾಜ್ ಮುಂತಾದವರು “ಬಾನ ದಾರಿಯಲಿ” ಚಿತ್ರದ ಕುರಿತು ಮಾತನಾಡಿದರು.The trailer of the film "Bana Dariyali" was praised.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…