“ತುರ್ತು ನಿರ್ಗಮನ” ದ ಮೂಲಕ ಸುನೀಲ್ ರಾವ್ ರೀ ಎಂಟ್ರಿ.

ಚಿತ್ರದ ವಿಭಿನ್ನ ಟ್ರೇಲರ್ ಗೆ ಭಾರಿ ಮೆಚ್ಚುಗೆ.

ಕೆಲವೊಂದು ಚಿತ್ರಗಳು ಹೇಗಿರಬಹುದು? ಎಂದು ಟ್ರೇಲರ್ ನೋಡಿದಾಗ ತಿಳಿಯುತ್ತದೆ. ಇತ್ತೀಚೆಗೆ ಬಿಡುಗಡೆಯಾದ ಹೇಮಂತ್ ಕುಮಾರ್ ನಿರ್ದೇಶಿಸಿರುವ “ತುರ್ತು ನಿರ್ಗಮನ” ಚಿತ್ರದ ವಿಭಿನ್ನ ಹಾಗೂ ವಿಶೇಷ ಟ್ರೇಲರ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರ ಇದೇ ಜೂನ್ 24 ರಂದು ಚಿತ್ರ ಬಿಡುಗಡೆಯಾಗುತ್ತಿದೆ.

“ಎಕ್ಸ್ ಕ್ಯೂಸ್ ಮಿ” ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದ ನಟ ಸುನೀಲ್ ರಾವ್. ಹನ್ನೆರಡು ವರ್ಷಗಳ ನಂತರ ಮತ್ತೆ “ತುರ್ತು ನಿರ್ಗಮನ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿ ಬಂದಿದ್ದಾರೆ. ಪ್ರಮುಖ ಪಾತ್ರದಲ್ಲಿ ಸುನೀಲ್ ರಾವ್ ಅಭಿನಯಿಸಿದ್ದಾರೆ.

ನಿರ್ದೇಶಕ ಹೇಮಂತ್ ಕುಮಾರ್ ಹೇಳಿದ ಕಥೆ ಇಷ್ಟವಾಯಿತು. ಯಾರೇ ನಟರು ಕೇಳಿದ್ದರೂ, ಬೇಡ ಅನ್ನದಂತಹ ಕಥೆಯನ್ನು ಹೇಮಂತ್ ಕುಮಾರ್ ಹೆಣೆದಿದ್ದಾರೆ. ಆದರಿಂದ ನಾನು ಒಪ್ಪಿಕೊಂಡೆ. ನಾನು ಹನ್ನೆರಡು ವರ್ಷಗಳಿಂದ ಚಿತ್ರ ಮಾಡಿಲ್ಲ.ಆದರೆ, ಅಷ್ಟು ವರ್ಷಗಳ ನಂತರ ಇಂತಹ ಒಳ್ಳೆಯ ಚಿತ್ರ ಮಾಡಿದ ಖುಷಿಯಿದೆ ಎನ್ನುತ್ತಾರೆ ಸುನೀಲ್ ರಾವ್.

ನಾನು ಹೇಮಂತ್ ರಾವ್ ಬಳಿ “ಗೋಧಿ ಬಣ್ಣ ಸಾಧಾರಣ ಮೈಕಟ್ಟು” ಚಿತ್ರಕ್ಕೆ ಕೆಲಸ ಮಾಡಿದ್ದೆ. ಸ್ವತಂತ್ರವಾಗಿ ಇದು ಮೊದಲ ಚಿತ್ರ. ಈ ರೀತಿಯ ಕಥೆ ಆಧರಿಸಿ ಚಿತ್ರ ಮಾಡಬೇಕೆಂಬ ಆಸೆಯಿತ್ತು. ಅದು ಈಡೇರಿದೆ. ನನ್ನ ಚಿತ್ರತಂಡದ ಎಲ್ಲರ ಸಹಕಾರವನ್ನು ನೆನೆಯುತ್ತೇನೆ. ನಿಮ್ಮ ದುಡ್ಡಿಗೆ ಮೋಸವಾಗದ ಸಿನಿಮಾ ಮಾಡಿದ್ದೇನೆ ಎಂಬ ಭರವಸೆಯೊಂದಿಗೆ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಆಹ್ವಾನಿಸುತ್ತೇನೆ ಎನ್ನುತ್ತಾರೆ ನಿರ್ದೇಶಕ ಹೇಮಂತ್ ಕುಮಾರ್.

ನಾವು ಬೇರೆ ಭಾಷೆಗಳಲ್ಲಿ ವಿಭಿನ್ನ ಕಥೆಯ ಚಿತ್ರಗಳು ಬಂದರೆ ಹೋಗಿ ನೋಡುತ್ತೇವೆ. “ತುರ್ತು ನಿರ್ಗಮನ” ಕೂಡ ಒಂದು ಪ್ರಯೋಗಾತ್ಮಕ ಚಿತ್ರ. ಇಂತಹ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಚಿತ್ರ ನೋಡಿ ಎಂದರು ಹಿತ ಚಂದ್ರಶೇಖರ್.

ನಾನು ಈ ಚಿತ್ರದಲ್ಲಿ ಕ್ರಿಕೆಟ್ ಕೋಚ್ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಇದೊಂದು ವಿಷುಯಲ್ ಟ್ರೀಟ್ ಅನ್ನಬಹುದು. ಗ್ರಾಫಿಕ್ ಅಂತು ಅದ್ಭುತ. ಹಾಗಾಗಿ ಇದನ್ನು ಮನೆಯಲ್ಲಿ ನೋಡುವುದಕ್ಕಿಂತ ಚಿತ್ರಮಂದಿರಕ್ಕೆ ಬಂದು ನೋಡಬೇಕು ಎಂದರು ಸಂಯುಕ್ತ ಹೆಗಡೆ. ನನಗೆ ಮೊದಲು ನಿರ್ದೇಶಕರು ಕಥೆ ಹೇಳಿದಾಗ ಅಷ್ಟು ಅರ್ಥವಾಗಲಿಲ್ಲ. ಕ್ರಮೇಣ ನಟಿಸುತ್ತಾ ಅರ್ಥವಾಯಿತು. ಸಿನಿಮಾ ಪೂರ್ಣವಾದ ಮೇಲಂತೂ ಇಂತಹ ಚಿತ್ರದಲ್ಲಿ ನಟಿಸಿದ್ದಿನಲ್ಲಾ ಎಂಬ ಖುಷಿಯಿದೆ ಎಂದರು ಅಮೃತ.

ನಾನು ಚಿತ್ರರಂಗಕ್ಕೆ ಬಂದು ಮೂವತ್ತಾರು ವರ್ಷಗಳಾಯಿತು. ಬೇಕಾದಷ್ಟು ಚಿತ್ರಗಳಲ್ಲಿ ಬೇರೆ, ಬೇರೆ ಪಾತ್ರಗಳನ್ನು ಮಾಡಿದ್ದೀನಿ. ಆದರೆ ಈ ರೀತಿಯ ಪಾತ್ರ ಮಾಡಿರುವುದು ಇದೇ ಮೊದಲು. ನನ್ನ ಮೊದಲ ಚಿತ್ರ “ಆನಂದ್” ನಲ್ಲಿ ನಟಿಸಿದ್ದಾಗ ಆಗಿದ್ದ ಸಂತೋಷ ಈ ಚಿತ್ರದಲ್ಲಿ ನಟಿಸಿದ ಮೇಲೇ ಆಗಿದೆ ಎಂದರು ನಟಿ ಸುಧಾರಾಣಿ.

ನನ್ನ “ಒಂದು ಮೊಟ್ಟೆಯ ಕಥೆ” ಚಿತ್ರ ಆಗಷ್ಟೇ ರಿಲೀಸ್ ಆಗಿತ್ತು. ಆಗ ಈ ಚಿತ್ರದ ಆಡಿಷನ್ ನಡೆಯುತ್ತಿತ್ತು. ನನಗೆ ಹೇಮಂತ್ ಕುಮಾರ್ ಮೂರು ಪುಟಗಳ ಸಂಭಾಷಣೆ ಕಳುಹಿಸಿದ್ದರು. ಅದನ್ನು ನೋಡಿ ನಾನು ಈ ಸಿನಿಮಾದಲ್ಲಿ ಅಭಿನಯಿಸಬೇಕೆಂದು ನಿರ್ಧಾರ ಮಾಡಿದೆ. ಆಡಿಷನ್ ನಲ್ಲಿ ಸೆಲೆಕ್ಟ್ ಆದೆ ಎಂದ ರಾಜ್ ಬಿ ಶೆಟ್ಟಿ, ಈ ಚಿತ್ರದಲ್ಲಿ ಕ್ಯಾಬ್ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಹೇಳಿದರು.

ಹಾಡುಗಳ ಬಗ್ಗೆ ಧೀರೇಂದ್ರ ದಾಸ್ ಮೂಡ್, ಛಾಯಾಗ್ರಹಣದ ಕುರಿತು ಪ್ರಯಾಗ್ ಹಾಗೂ ಚಿತ್ರ ಸಾಗಿ ಬಂದ ಬಗ್ಗೆ ಕಾರ್ಯಕಾರಿ ನಿರ್ಮಾಪಕ ಶರತ್ ಭಗವಾನ್ ಮಾತನಾಡಿದರು. ಕಾರ್ಯಕ್ರಮ ಆರಂಭಕ್ಕೂ ಮುನ್ನ ಸುಧಾರಾಣಿ, ಸುನೀಲ್ ರಾವ್ ಹಾಗೂ ರಾಜ್ ಬಿ ಶೆಟ್ಟಿ ಚಿತ್ರದ ತಮ್ಮ ಪಾತ್ರಗಳನ್ನು ವೇದಿಕೆ ಮೇಲೆ ನೈಜವಾಗಿ ಅಭಿನಯಿಸುವ ಮೂಲಕ ಪರಿಚಯಿಸಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…